ಅತಿಥಿ ಉಪನ್ಯಾಸಕರಿಂದ ಸೇವಾ ಭದ್ರತೆ, ಗೌರವಧನ ಹೆಚ್ಚಳ ಸಹಿತ 15 ಬೇಡಿಕೆಗಳ ಮನವಿ
Team Udayavani, Nov 28, 2022, 9:39 PM IST
ಬೆಂಗಳೂರು: ಸೇವಾ ಭದ್ರತೆಯೊಂದಿಗೆ ವಾರ್ಷಿಕ ಶೇ.5ರಷ್ಟು ಗೌರವಧನ ಹೆಚ್ಚಳ, ನಿವೃತ್ತಿಯ ಸಂದರ್ಭದಲ್ಲಿ 25 ಲಕ್ಷ ರೂ.ಗಳ ಇಡಿಗಂಟು ಮತ್ತು ಕಾಯಂ ಉಪನ್ಯಾಸಕರಿಗೆ ನೀಡುವಂತೆ ತಮಗೂ ಓಓಡಿ ಹಾಗೂ ರಜೆ ಸೌಲಭ್ಯ ನೀಡಬೇಕು ಮುಂತಾದ 15 ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿಯು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರಿಗೆ ಸೋಮವಾರ ಸಲ್ಲಿಸಿದೆ.
ಸಂಘಟನೆಯ ಗೌರವಾಧ್ಯಕ್ಷರಾಗಿರುವ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರ ನೇತೃತ್ವದಲ್ಲಿ ಸಂಘದ ರಾಜ್ಯಾಧ್ಯಕ್ಷ ಅರುಣ್ ಶಿವಮೊಗ್ಗ ಮತ್ತಿತರರು ಈ ಮನವಿಯನ್ನು ಕೊಟ್ಟರು. ಮನವಿ ಸ್ವೀಕರಿಸಿದ ಸಚಿವರು, ಈ ಬೇಡಿಕೆಗಳನ್ನು ಈಡೇರಿಸುವ ಸಾಧ್ಯಾಸಾಧ್ಯತೆಗಳ ಬಗ್ಗೆ ಪರಿಶೀಲಿಸುವುದಾಗಿ ಹೇಳಿದರು.
ರಾಜ್ಯದ ಉನ್ನತ ಶಿಕ್ಷಣ ವಲಯದಲ್ಲಿ ಎನ್‌ಇಪಿ ಜಾರಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ 430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿರುವ 11 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರಿಗೆ ಸೇವಾ ವಿಲೀನದ ಸೌಲಭ್ಯ ನೀಡುವ ಮೂಲಕ, ರಾಷ್ಟ್ರೀಯ ಶಿಕ್ಷಣ ನೀತಿಯ ಪರಿಣಾಮಕಾರಿ ಅನುಷ್ಠಾನಕ್ಕೆ ಮುಂದಾಗಬೇಕು. ಹಾಗೆಯೇ ಎನ್‌ಇಪಿ ಅನುಸಾರ 40-50 ವಿದ್ಯಾರ್ಥಿಗಳಂತೆ ಒಂದೊಂದು ತರಗತಿಗಳನ್ನು ವಿಭಾಗಿಸುವುದರಿಂದ ತಮ್ಮ ನೇಮಕಾತಿಗೆ ಇಲ್ಲಿ ಪರಿಗಣಿಸಬೇಕು ಎಂದು ಸಂಘಟನೆಯು ಕೇಳಿಕೊಂಡಿದೆ.
ಇದರ ಜತೆಗೆ ನೇಮಕಾತಿಗಳಲ್ಲಿ ಮೀಸಲಾತಿ, ವಯೋಮಿತಿ ಸಡಿಲಿಕೆ, ವೇತನಸಹಿತ 6 ತಿಂಗಳ ಮಾತೃತ್ವ/ಪಿತೃತ್ವ ರಜೆ, ವಿಮೆ, ಇಎಸ್‌ಐ ಮತ್ತು ಇಪಿಎಫ್ ಸೌಲಭ್ಯಗಳನ್ನು ಕೂಡ ತಮಗೆ ಒದಗಿಸಬೇಕು. ಹಾಗೆಯೇ, ಮೌಲ್ಯಮಾಪನಕ್ಕೆ ತೆರಳಿದ ದಿನಗಳ ಗೌರವಧನವನ್ನು ಕಡಿತ ಮಾಡಬಾರದು. ಪರಸ್ಪರ ಸ್ಥಳ ಬದಲಾವಣೆ ಮತ್ತು ಕಾರ್ಯಭಾರದ ಕೊರತೆ ಉಂಟಾದಲ್ಲಿ ಕರ್ತವ್ಯದಿಂದ ಬಿಡುಗಡೆಗೊಳಿಸದೆ ಕಾರ್ಯಭಾರವಿರುವ ಕಾಲೇಜುಗಳಿಗೆ ವರ್ಗಾವಣೆ ಮಾಡುವ ನೀತಿಯನ್ನು ಜಾರಿಗೆ ತರಬೇಕು ಎಂದು ಮನವಿಯಲ್ಲಿ ಗಮನ ಸೆಳೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.