Reservation for Job; ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲು: ಸರ್ಕಾರ ಯೂಟರ್ನ್
ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವ ವಿಧೇಯಕ ಸದ್ಯಕ್ಕೆ ತಡೆ: ಸಿಎಂ ಸಿದ್ದರಾಮಯ್ಯ ಟ್ವೀಟ್
Team Udayavani, Jul 17, 2024, 9:32 PM IST
ಬೆಂಗಳೂರು: ರಾಜ್ಯದ ಎಲ್ಲ ಖಾಸಗಿ ಕೈಗಾ ರಿಕೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿ ತಾತ್ಮಕ ಹುದ್ದೆಗಳಲ್ಲಿ ಶೇ. 50 ಹಾಗೂ ಆಡಳಿತಾತ್ಮಕ ವಲ್ಲದ ಹುದ್ದೆಗಳಲ್ಲಿ ಶೇ. 75 ಮೀಸಲು ನೀಡುವ ಮಸೂದೆಗೆ ಕೈಗಾರಿಕೋದ್ಯಮಿಗಳ ಜತೆಗೆ ಸಂಪುಟ ಸಹೋದ್ಯೋಗಿಗಳಿಂದಲೇ ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸರಕಾರವು ವಿಧೇಯಕವನ್ನು ತಾತ್ಕಾಲಿಕವಾಗಿ
ತಡೆ ಹಿಡಿದಿದೆ.
ಸಂಪುಟ ಅನುಮೋದನೆ ನೀಡಲಾಗಿದ್ದ ಮಸೂದೆಯ ಬಗ್ಗೆ ಮುಂದಿನ ದಿನಗಳಲ್ಲಿ ಮತ್ತೂಮ್ಮೆ ಪರಾಮರ್ಶಿಸಿ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಕಾರ್ಯಾ ಲಯ ಬುಧವಾರ ರಾತ್ರಿ ಪ್ರಕಟಿಸುವುದರೊಂದಿಗೆ ಇದೇ ಅಧಿವೇಶನದಲ್ಲಿ ಮಂಡನೆಯಾಗುವ ಸಾಧ್ಯತೆ ಕ್ಷೀಣಿಸಿದೆ. ಜು. 22ರಂದು ಸಚಿವ ಸಂಪುಟ ಸಭೆ ಕರೆದಿದ್ದು ಈ ವಿಚಾರವನ್ನು ಪರಾಮರ್ಶೆಗೆ ಒಳಪಡಿಸಲಿದೆ. ಇದಕ್ಕಾಗಿ ಸಂಪುಟ ಉಪಸಮಿತಿಯನ್ನೂ ರಚಿಸಿದೆ.
ಏನೇನಾಗಿತ್ತು?
ಸಂಪುಟ ನಿರ್ಣಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಟ್ವೀಟ್ ಮಾಡುತ್ತಿದ್ದಂತೆ ಔದ್ಯಮಿಕ ವಲಯ ತೀಕ್ಷ್ಣ ಪ್ರತಿಕ್ರಿಯೆ ನೀಡಿತ್ತು. ಬೃಹತ್ ಕೈಗಾರಿಕೆ ಹಾಗೂ ಐಟಿಬಿಟಿ ಇಲಾಖೆ ಸಚಿವರು ಹಾಗೂ ಅಧಿಕಾರಿಗಳಿಗೂ ಉದ್ಯಮಿಗಳು ಕರೆ ಮಾಡಿ ಪ್ರತಿರೋಧ ವ್ಯಕ್ತಪಡಿಸಿದ್ದರು. ಇದರ ಜತೆಗೆ, ಆಂಧ್ರ, ಕೇರಳ ಸೇರಿದಂತೆ ನೆರೆರಾಜ್ಯಗಳು ಕೂಡ ಈ ವಿವಾದದ ಲಾಭ ಪಡೆದುಕೊಂಡು ತಮ್ಮ ರಾಜ್ಯಕ್ಕೆ ಬರುವಂತೆ ಕರ್ನಾಟಕದ ಕಂಪೆನಿಗಳಿಗೆ ಮುಕ್ತ ಆಹ್ವಾನವನ್ನೂ ನೀಡಲಾರಂಭಿಸಿದ್ದವು.
ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಸರಕಾರ ಯೂಟರ್ನ್ ಹೊಡೆದು ಕನ್ನಡಿಗರ ಮೀಸಲು ಮಸೂದೆಗೆ ತಾತ್ಕಾಲಿಕ ತಡೆ ತಂದು ಘೋಷಣೆ ಹೊರಡಿಸಿದೆ. ಸರಕಾರದ ಉನ್ನತ ಮೂಲಗಳ ಪ್ರಕಾರ, ಸಿದ್ದರಾಮಯ್ಯ ವಿವಿಧ ಇಲಾಖೆ ಸಚಿವರು ಹಾಗೂ ಅಧಿಕಾರಿಗಳ ಜತೆಗೆ ಈ ಸಂಬಂಧ ಚರ್ಚೆ ನಡೆಸಲು ಬಯಸಿದ್ದಾರೆ. ಬಳಿಕ ಮಸೂದೆಯ ಸ್ವರೂಪದಲ್ಲಿ ಬದಲಾವಣೆಗಳಾದರೂ ಆಶ್ಚರ್ಯವಿಲ್ಲ ಎಂದು ಹೇಳಲಾಗುತ್ತಿದೆ.
ಚರ್ಚೆಯೇ ನಡೆದಿಲ್ಲ
ಸಂಪುಟದ ಹಿರಿಯ ಸಚಿವರೊಬ್ಬರ ಪ್ರಕಾರ, ಈ ವಿಚಾರ ಸಚಿವ ಸಂಪುಟ ಸಭೆಗೆ ಬರುವುದಕ್ಕೂ ಮುನ್ನ ಅಂತರ್ ಇಲಾಖಾ ಮಟ್ಟದಲ್ಲಿ ಚರ್ಚೆಯಾಗಬೇಕಿತ್ತು. ಆದರೆ ಕಾರ್ಮಿಕ ಇಲಾಖೆಯಿಂದ ಅಂತಹ ಪ್ರಯತ್ನವೇ ನಡೆದಿಲ್ಲ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ “ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು” ಎಂದು ಎಕ್ಸ್ (ಟ್ವಿಟರ್) ನಲ್ಲಿ ಬರೆದು ಕೊಂಡಿದ್ದಾರೆ.
ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ.
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು.
— Siddaramaiah (@siddaramaiah) July 17, 2024
ರಾಜ್ಯ ಸರ್ಕಾರದ ಪ್ರಸ್ತಾವಿತ ವಿಧೇಯಕಕ್ಕೆ ಉದ್ಯಮ ವಲಯದಿಂದ, ಪ್ರಮುಖ ಉದ್ಯಮಿಗಳಿಂದ ವ್ಯಾಪಕ ವಿರೋಧ, ಟೀಕೆ ವ್ಯಕ್ತವಾದ್ದರಿಂದ ಈ ವಿಧೇಯಕವನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲು ಮುಂದಾಗಿದೆ.
ತಡೆಹಿಡಿಯಲು ಕಾರಣವೇನು?
1. ಸಿ, ಡಿ ದರ್ಜೆ ನೌಕರರಿಗೆ ಶೇ. 100 ಉದ್ಯೋಗ ಮೀಸಲು ಎಂಬ ಅನಗತ್ಯ ವಿವಾದ
2. ಸರಕಾರದ ಮೀಸಲು ಮಸೂದೆಗೆ ಉದ್ಯಮ ಒಕ್ಕೂಟಗಳಿಂದ ಭಾರೀ ಆಕ್ಷೇಪ
3. ವಿವಾದದ ಬೆನ್ನಲ್ಲೇ ರಾಜ್ಯದ ಖಾಸಗಿ ಕಂಪೆನಿಗಳಿಗೆ ನೆರೆರಾಜ್ಯಗಳಿಂದ ಗಾಳ
4.ಈ ನಿರ್ಧಾರದ ಬಗ್ಗೆ ಸರಕಾರದ ಇಲಾಖೆಗಳ ನಡುವೆಯೇ ಗೊಂದಲ, ಅಸಮಾಧಾನ
5. ದಿಢೀರ್ ನಿರ್ಧಾರ ಘೋಷಿಸಿದ್ದಕ್ಕೆ ಸಂಪುಟ ಸಹೋದ್ಯೋಗಿಗಳಿಂದಲೂ ವಿರೋಧ
6. ತರಾತುರಿ ಮಾಡಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವುದು ಬೇಡ ಎಂಬ ಉದ್ದೇಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.