ಕಾಂಗ್ರೆಸ್ ಕಾರ್ಯಕರ್ತರಿಂದ ಗಲಭೆ ಹೆಚ್ಚಳ: ನಳಿನ್ ಕುಮಾರ್ ಕಟೀಲು
ಹತ್ಯೆಯಾದ BJP ಕಾರ್ಯಕರ್ತನ ಮನೆಗೆ ಭೇಟಿ, ಪರಿಹಾರ ವಿತರಣೆ
Team Udayavani, May 17, 2023, 7:26 AM IST
ಹೊಸಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದ ಅನಂತರ ಗೂಂಡಾಗಿರಿ ಹೆಚ್ಚಾಗಿದೆ. ರಾಜ್ಯದ ಹಲವೆಡೆ ಕಾಂಗ್ರೆಸ್ ಕಾರ್ಯ ಕರ್ತರಿಂದ ಗಲಭೆ, ದೊಂಬಿ, ಹತ್ಯೆ, ಹಲ್ಲೆಗಳಂತಹ ಕೃತ್ಯಗಳು ನಡೆಯುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಆರೋಪಿಸಿದರು.
ತಾಲೂಕಿನ ನಂದಗುಡಿ ಹೋಬಳಿಯ ಡಿ. ಶೆಟ್ಟಹಳ್ಳಿ ಗ್ರಾಮದಲ್ಲಿ ಹತ್ಯೆಯಾದ ಬಿಜೆಪಿ ಕಾರ್ಯಕರ್ತನ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಪರಿಹಾರ ವಿತರಿಸಿದ ಅನಂತರ ಮಾಧ್ಯಮಗಳೊಂದಿಗೆ ಮಾತ ನಾಡಿದರು. ಫಲಿತಾಂಶ ಪ್ರಕಟವಾದ ಅನಂತರ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆದಿರುವ ಘಟನೆಗಳು ನಮ್ಮ ಗಮನಕ್ಕೆ ಬಂದಿವೆ. ನಮ್ಮ ಕಾರ್ಯಕರ್ತ ಕೃಷ್ಣಪ್ಪ ಅವರನ್ನು ಹತ್ಯೆ ಮಾಡಲಾಗಿದೆ. ಅವರ ಮಗ ಮತ್ತು ಪತ್ನಿ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ದೂರಿದರು.
ಕಾಂಗ್ರೆಸ್ ಕಾರ್ಯಕರ್ತರು ವಿಜಯೋ ತ್ಸವ ಹೆಸರಲ್ಲಿ ಮನೆ ಮುಂದೆ ಪಟಾಕಿ ಹಚ್ಚಲು ಬಂದಾಗ ಸ್ವಲ್ಪ ದೂರ ಹಚ್ಚಿ ಎಂದು ಹೇಳಿದ್ದಕ್ಕೆ ಕೃಷ್ಣಪ್ಪ ಹಾಗೂ ಕುಟುಂಬದವರ ಮೇಲೆ ಹಲ್ಲೆ ನಡೆಸಲಾಗಿದೆ. ಗಂಭೀರವಾಗಿ ಗಾಯಗೊಂಡ ಕೃಷ್ಣಪ್ಪ ಸ್ಥಳದಲ್ಲೇ ಮೃತಪಟ್ಟರೆ, ಅವರ ಮಗ ಹಾಗೂ ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕೃತ್ಯವನ್ನು ಖಂಡಿಸುತ್ತೇನೆ. ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯದಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗಿದೆ. ಇದು ಗೂಂಡಾಗಿರಿಯ ಗ್ಯಾರಂಟಿ ಕಾರ್ಡ್ ಎಂದು ಟೀಕಿಸಿದರು.
ಕೈ ಕಟ್ಟಿ ಕೂರುವುದಿಲ್ಲ
ಪಕ್ಷದ ನಾಯಕರು ಯಾವ ರೀತಿ ಇರುತ್ತಾರೆಯೋ ಕಾರ್ಯಕರ್ತರೂ ಅದೇ ರೀತಿ ಹೋಗುತ್ತಾರೆ. ಇಂತಹ ಗೂಂಡಾ
ಗಿರಿಗಳನ್ನು ಸಾಕಷ್ಟು ನೋಡಿದ್ದೇವೆ. ನಾವು ಸಹ ಕೈ ಕಟ್ಟಿ ಕೂರುವುದಿಲ್ಲ. ಘಟನೆಯ ಹಿಂದೆ ಯಾರಿದ್ದಾರೆಯೋ ಅವರನ್ನು ತತ್‌ಕ್ಷಣ ಬಂಧಿಸಬೇಕು. ಇಲ್ಲದಿದ್ದರೆ ಪಕ್ಷದ ವತಿಯಿಂದ ರಾಜ್ಯಾದ್ಯಂತ ಹೋರಾಟ ನಡೆಸುವುದು ಅನಿವಾರ್ಯ ಎಂದರು.
5 ಲ.ರೂ. ಪರಿಹಾರ
ಮಾಜಿ ಸಚಿವ ಎಂಟಿಬಿ ನಾಗರಾಜ್ ಮಾತನಾಡಿ, ಮೃತ ಕೃಷ್ಣಪ್ಪ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಲಾಗಿದೆ. ಪಕ್ಷದ ವತಿಯಿಂದ 5 ಲಕ್ಷ ರೂ. ಪರಿಹಾರ ನೀಡಲಾಗಿದೆ. ಘಟನೆ ಕುರಿತು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ಹತ್ಯೆ ಹಿನ್ನೆಲೆಯಲ್ಲಿ ಈಗಾಗಲೇ ಇಬ್ಬರನ್ನು ಬಂಧಿಸಿದ್ದು, ಇನ್ನುಳಿದ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕು ಎಂದು ಆಗ್ರಹಿಸಿದರು. ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಭೈರತಿ ಬಸವರಾಜು, ಡಾ| ಅಶ್ವತ್ಥ ನಾರಾಯಣ, ಎಂಎಲ್ಸಿ ನಾರಾಯಣಸ್ವಾಮಿ ಸೇರಿ ಹಲವರು ಇದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.