ಸಾೖಬ್ರಕಟ್ಟೆ: ಸರಣಿ ಅಪಘಾತ; ಓರ್ವ ಸಾವು, ಇಬ್ಬರಿಗೆ ಗಾಯ
Team Udayavani, Dec 5, 2021, 2:43 PM IST
ಕೋಟ: ಕಾರು ಹಾಗೂ ಮೀನು ಸಾಗಾಟದ ಮಿನಿ ಪಿಕಪ್, ಬೈಕ್ ನಡುವೆ ಸರಣಿ ಅಪಘಾತ ನಡೆದು ಮಿನಿ ಪಿಕಪ್ ಚಾಲಕ ಸಾವನ್ನಪ್ಪಿ, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬ್ರಹ್ಮಾವರ ತಾಲೂಕಿನ ಸಾೖಬ್ರಕಟ್ಟೆ ಹೈಸ್ಕೂಲ್ ಸಮೀಪ ಮಲಸವಾರಿ ದೇವಸ್ಥಾನದ ತಿರುವಿನಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ಮಿನಿ ಪಿಕಪ್ ಚಾಲಕ ಮಧುವನ ಅಚ್ಲಾಡಿ ನಿವಾಸಿ ಸುರೇಶ್ ಮರಕಾಲ (40) ಮೃತ ದುರ್ದೈವಿ ಹಾಗೂ ಸಹಸವಾರ ರಾಜು ಮರಕಾಲ (60) ಬೈಕ್ ಸವಾರ ಶಿರಿಯಾರ ನಿವಾಸಿ ಸುಬ್ರಹ್ಮಣ್ಯ ಕುಲಾಲ್ (42) ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸುರೇಶ್ ಹಾಗೂ ರಾಜು ಮರಕಾಲ ಪ್ರತಿದಿನ ಮಲ್ಪೆಯಲ್ಲಿ ಮೀನು ಖರೀದಿಸಿ ಪಿಕಪ್ ನಲ್ಲಿ ತಂದು ಮಾರಾಟ ಮಾಡುತ್ತಿದ್ದರು. ಎಂದಿನಂತೆ ಇಂದೂ ಕೂಡ ಮಲ್ಪೆಯಲ್ಲಿ ಮೀನು ಖರೀದಿಸಿ ಸಾಹೇಬ್ರಕಟ್ಟಗೆ ಮರಳುವಾಗ ಮಾರುತಿ ಸ್ವಿಫ್ಟ್ ಕಾರು ಅತೀ ವೇಗವಾಗಿ ಬಂದು ಬೈಕು ಹಾಗೂ ಮಿನಿ ಪಿಕಪ್ ಗೆ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸುರೇಶ್ ಹಾಗೂ ರಾಜು ಮರಕಾಲ ಪಿಕಪ್ ಒಳಗಡೆ ಸಿಲುಕಿ ಹಾಕಿಕೊಂಡಿದ್ದರು. ಅವರನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸ ಪಟ್ಟರು. ನಂತರ ಅಂಬ್ಯಲೆನ್ಸ್ ನಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಸುರೇಶ್ ಮರಕಾಲ ಆಸ್ಪತ್ರೆಗೆ ಕೊಂಡೋಯ್ಯುವ ವೇಳೆಗೆ ಮೃತ ಪಟ್ಟಿದ್ದರು.
ಅಪಾಯಕಾರಿ ತಿರುವು
ಅಪಘಾತ ನಡೆದ ತಿರುವು ಅತ್ಯಂತ ಅಪಾಯಕಾರಿ ಹಾಗೂ ಇಕ್ಕಟ್ಟಿನಿಂದ ಕೂಡಿದ್ದು ಈ ಮೊದಲೇ ಹಲವು ಅಪಘಾತಗಳು ನಡೆದಿದೆ.
ಬ್ರಹ್ಮಾವರ ಪೋಲಿಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.