ರಸ್ತೆ ಬದಿಯಲ್ಲಿ ಸಂಶಯಾಸ್ಪದವಾಗಿ ಮಹಿಳೆ ಸಾವು

Team Udayavani, Nov 26, 2021, 5:45 PM IST

26women

ದಾಂಡೇಲಿ: ನಗರದ ಬೈಲುಪಾರು-ಜನತಾ ಕಾಲೋನಿಯ ಹತ್ತಿರ ರಸ್ತೆ ಬದಿಯಲ್ಲಿ ಸಂಶಯಾಸ್ಪದವಾಗಿ ಮಹಿಳೆಯೊರ್ವಳು ಸಾವನ್ನಪ್ಪಿದ ಘಟನೆ ಶುಕ್ರವಾರ ಬೆಳಿಗ್ಗೆ ವರದಿಯಾಗಿದೆ.

ದಾಂಡೇಲಿಯ ಆಜಾದ್ ನಗರದ ನಿವಾಸಿ ಲಕ್ಷ್ಮೀ ತುಕರಾಮ ರೇಡೆಕರ (27)  ಎಂಬ ವಿವಾಹಿತ ಮಹಿಳೆಯೆ ಸಾವನ್ನಪ್ಪಿದ ನತದೃಷ್ಟೆಯಾಗಿದ್ದಾಳೆ. ಬಡತನ ಕುಟುಂಬದವಳಾದ ಮೃತಳು ಅಲ್ಲಿ ಇಲ್ಲಿ ಎಂದು ಹೋಂ ಸ್ಟೇ, ಹೋಟೆಲ್, ಮನೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದಳು ಎನ್ನಲಾಗಿದೆ. ನಿನ್ನೆ ಸಂಜೆ 4 ಗಂಟೆಗೆ ಮನೆಯಿಂದ ಕೆಲಸಕ್ಕೆಂದು ಹೋಗಿದ್ದಳು ಎನ್ನುವ ಮಾಹಿತಿ ಲಭ್ಯವಾಗಿದೆ.

ಪತಿಯಿಂದ ದೂರವಾಗಿ ಎಳೆಯ ಮೂರ್ನಾಲ್ಕು ವರ್ಷದ ಹೆಣ್ಣು ಮಗುವಿನೊಂದಿಗೆ ಆಜಾದನಗರದ ತಾಯಿ ಮನೆಯಲ್ಲಿ ವಾಸ್ತವ್ಯದಲ್ಲಿದ್ದಳು.

ಇದನ್ನೂ ಓದಿ:ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಠಾಣೆಯ ಪಿಎಸೈಯಗಳಾದ ಐ.ಆರ್.ಗಡ್ಡೇಕರ ಹಾಗೂ ಯಲ್ಲಾಲಿಂಗ ಕುನ್ನೂರು ಅವರುಗಳು ಪೊಲೀಸ್ ತಂಡದ ಜೊತೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿವೈಎಸ್ಪಿ ಗಣೇಶ್.ಕೆ.ಎಲ್ ಹಾಗೂ ಪೊಲೀಸ್ ವೃತ್ತ ನಿರೀಕ್ಷಕರಾದ ಪ್ರಭು ಗಂಗನಹಳ್ಳಿಯವರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯ ಕ್ರಮವನ್ನು ಕೈಗೊಂಡಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಂತ್ರಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಹನ ಅಪಘಾತದಿಂದ ಸಾವನ್ನಪಿರುವುದು ಮೇಲ್ನೋಟಕ್ಕೆ ತಿಳಿದು ಬರುತ್ತಿದ್ದು, ಮೃತ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಅಪಘಾತದಿಂದ ಮೃತಪಟ್ಟಲ್ಲಿ ಅಪಘಾತ ನಡೆಸಿದ ವಾಹನ ಯಾವುದು? ಅಪಘಾತ ನಡೆಸಿದ ನಂತರ ವಾಹನ ಪರಾರಿಯಾಗಿದ್ದು ಯಾಕೆ? ಇನ್ನೂ ರಾತ್ರಿ ವೇಳೆ ಇಲ್ಲವೇ ಬೆಳಗ್ಗಿನ ಜಾವದಲ್ಲಿ ಅಪಘಾತ ನಡೆದಿದ್ದರೂ, ಮೃತ ಲಕ್ಷ್ಮೀ ಈ ರಸ್ತೆಯಲ್ಲಿ ಯಾಕೆ ಹೋದರೂ, ಎಲ್ಲಿಗೆ ಹೋಗಿದ್ದರು? ಎನ್ನುವ ಪ್ರಶ್ನೆಗಳಿಗೆ ಪೊಲೀಸ್ ತನಿಖೆಯಿಂದ ಸ್ಪಷ್ಟ ಉತ್ತರ ಸಿಗಲಿದೆ.

ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

ಎಳೆಯ ಮೂರ್ನಾಲ್ಕು ವರ್ಷದ ಮಗುವಿನ ತಾಯಿಯಾಗಿರುವ ಮೃತ ಲಕ್ಷ್ಮೀ ತುಕರಾಮ ರೇಡೆಕರ ಅವರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಕೂಲಿ ಮಾಡಿ ಬದುಕು ನಡೆಸುವ ಲಕ್ಷ್ಮೀಯವರ ತಾಯಿ ಸುಮನ ತುಕರಾಮ ರೇಡೆಕರ ಅವರ ಮೊಮ್ಮಗಳನ್ನು ನೋಡಿ, ಈ ಮಗುವಿನ ಮುಂದಿನ ಸ್ಥಿತಿ ಏನು ಎಂದು ಗೋಗೆರೆಯುತ್ತಿದ್ದಾರೆ.

ಟಾಪ್ ನ್ಯೂಸ್

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dandeli

Dandeli: ಗಾಂಜಾ ಅಕ್ರಮ ಮಾರಾಟ ಯತ್ನ; ಮಾಲು ಸಹಿತ ಆರೋಪಿಯ ಬಂಧನ

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

5-1

Mundgod: ಹಾವು ಕಡಿದು ಅಂಗನವಾಡಿ ಬಾಲಕಿ ಸಾವು

1-up

Dandeli; ಕುಸಿದು ಬಿದ್ದು ಯುಪಿ ಮೂಲದ ಯುವಕ ಸಾ*ವು

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.