ಮಲ್ಲೇಶ್ವರಂ ಸರ್ಕಾರಿ ಪ್ರೌಢಶಾಲೆಯಲ್ಲಿ ಪಾಠ ಮಾಡಿದ ರೋಬೊ!
ಬೋಧನೆಯಲ್ಲಿ ಚಾಕಚಕ್ಯತೆ, ಬೆರಗು ಮೂಡಿಸಿದ `ರೋಬೊ!
Team Udayavani, Mar 23, 2022, 7:20 PM IST
ಬೆಂಗಳೂರು: ಪಾಠ- ಪ್ರವಚನಗಳಲ್ಲಿ ಬೋಧಕರಿಗೂ ವಿದ್ಯಾರ್ಥಿಗಳಿಗೂ ಸಹಕರಿಸಿ, ಕಲಿಕೆಯನ್ನು ಸುಲಭವಾಗಿಸುವಂತಹ `ಈಗಲ್’ ರೋಬೊ ಪರೀಕ್ಷಾರ್ಥ ಪ್ರಾತ್ಯಕ್ಷಿಕೆಯು ಬುಧವಾರದಂದು ಮಲ್ಲೇಶ್ವರಂ 13ನೇ ಅಡ್ಡರಸ್ತೆಯಲ್ಲಿರುವ ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ಕ್ಷೇತ್ರದ ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.ಶಾಲೆಯ ಬೋಧಕರು ಮತ್ತು ವಿದ್ಯಾರ್ಥಿನಿಯರು ಇದರಲ್ಲಿ ಪಾಲ್ಗೊಂಡು, ರೋಬೋದ ಕಾರ್ಯಕ್ಷಮತೆಗೆ ಸಾಕ್ಷಿಯಾದರು. ಈ ಸಂದರ್ಭದಲ್ಲಿ ಅವರು `ರೋಬೊಗೆ ಹಲವು ಪ್ರಶ್ನೆಗಳನ್ನು ಕೇಳಿದರು; ಹಾಗೆಯೇ, ಅದು ನೀಡಿದ ಉತ್ತರ ಮತ್ತು ನೆರವನ್ನು ಕಂಡು ಬೆರಗಾದರು.
ನಂತರ ಮಾತನಾಡಿದ ಅಶ್ವತ್ಥನಾರಾಯಣ ಅವರು, `ಇದು ಪ್ರಾಯೋಗಿಕ ಕಾರ್ಯಕ್ರಮವಾಗಿದ್ದು, ರೋಬೋದ ಕಾರ್ಯ ಸಾಮರ್ಥ್ಯವನ್ನು ವೀಕ್ಷಿಸಲಾಗಿದೆ. ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಜಾಗತಿಕ ಗುಣಮಟ್ಟದ ಬೋಧನೆಯ ಸಲುವಾಗಿ, ಇಂತಹ ರೋಬೋ ಗಳು ಇದ್ದರೆ ಒಳ್ಳೆಯದು’ ಎಂದು ಅಭಿಪ್ರಾಯಪಟ್ಟರು.
ರೋಬೊ ಶಿಕ್ಷಕರಿಗೆ ಪರ್ಯಾಯ ಅಲ್ಲ. ಆದರೆ ಶಿಕ್ಷಕರಿಗೆ ಬೋಧನೆಯಲ್ಲಿ ಸಹಕರಿಸುವ ಕೆಲಸ ಮಾಡಲಿದೆ. ಇದರಿಂದ ವಿದ್ಯಾರ್ಥಿಗಳ ಕಲಿಕೆಯ ಮಟ್ಟ ಕೂಡ ಹೆಚ್ಚಾಗಲಿದೆ ಎಂದು ಹೇಳಿದರು.
21ನೇ ಶತಮಾನವು ತಂತ್ರಜ್ಞಾನದ ಯುಗವಾಗಿದ್ದು, ಬೋಧನೆಯಲ್ಲಿ ಇದರ ಅಳವಡಿಕೆ ಅಗತ್ಯವಾಗಿದೆ. ಇದರಿಂದಾಗಿ, ಸರಕಾರಿ ಶಾಲಾಕಾಲೇಜುಗಳು ಕೂಡ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕಡಿಮೆಯಿಲ್ಲದಂತೆ ವಿದ್ಯಾರ್ಥಿಗಳನ್ನು ಆಕರ್ಷಿಸಬಹುದು. ಇದರಿಂದ ಬಡಕುಟುಂಬಗಳ ಮಕ್ಕಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅವರು ನುಡಿದರು.
ಮುಂದಿನ ದಿನಗಳಲ್ಲಿ `ಈಗಲ್’ ರೋಬೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ತೋರಿಸಲಾಗುವುದು. ನಂತರ ಅವರಿಂದಲೇ ಈ ಯೋಜನೆಗೆ ಚಾಲನೆ ಕೊಡಿಸುವ ಉದ್ದೇಶ ಇದೆ. ಮಲ್ಲೇಶ್ವರ ಕ್ಷೇತ್ರದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಇದನ್ನು ಜಾರಿ ಮಾಡುವ ಉದ್ದೇಶ ಇದೆ ಎಂದು ಅವರು ವಿವರಿಸಿದರು.
ಇಂಡಸ್ ಟ್ರಸ್ಟ್ ನ ಸ್ಥಾಪಕ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕ ಲೆ.ಜನರಲ್ ಅರ್ಜುನ್ ರಾಯ್, ಮಲ್ಲೇಶ್ವರ ಬಿಇಒ ಉಮಾದೇವಿ, ಕಾಲೇಜಿನ ಪ್ರಾಂಶುಪಾಲರಾದ ಡಾ.ರವಿ, ಶಾಲೆ ಉಪ ಪ್ರಾಂಶುಪಾಲ ರವಿಕುಮಾರ್ ಈ ಸಂದರ್ಭದಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.