ಶ್ರೀಲಂಕಾ ಸರಣಿ: ರೋಹಿತ್ ಶರ್ಮಾ ಟೆಸ್ಟ್ ನಾಯಕ; ರಹಾನೆ, ಪೂಜಾರ ಔಟ್
ಜಸ್ಪ್ರೀತ್ ಬುಮ್ರಾ ಟಿ20 ಮತ್ತು ಟೆಸ್ಟ್ ಉಪನಾಯಕ, ಸಂಜು ಸ್ಯಾಮ್ಸನ್ ಪುನರಾಗಮನ
Team Udayavani, Feb 19, 2022, 4:40 PM IST
ಮುಂಬಯಿ: ಮುಂಬರುವ ಶ್ರೀಲಂಕಾ ಸರಣಿಗೆ ರೋಹಿತ್ ಶರ್ಮಾ ಟೆಸ್ಟ್ ನಾಯಕನಾಗಿ ನೇಮಕಗೊಂಡಿದ್ದಾರೆ. ಸರಣಿಯಿಂದ ದೀರ್ಘಕಾಲದವರೆಗೆ ಭಾರತದ ಮಧ್ಯಮ ಕ್ರಮಾಂಕದ ಆಧಾರವಾಗಿದ್ದ ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ ಪೂಜಾರ ಅವರನ್ನು ತಂಡದಿಂದ ಕೈಬಿಡಲಾಗಿದೆ.
ಶನಿವಾರ ಫೆ.19ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಸಿಸಿಐ ಆಯ್ಕೆಗಾರರು, ಟೆಸ್ಟ್ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ ಎಂದು ಘೋಷಿಸಿದ್ದಾರೆ. ಜಸ್ಪ್ರೀತ್ ಬುಮ್ರಾ ಟಿ20 ಮತ್ತು ಟೆಸ್ಟ್ ಉಪನಾಯಕರಾಗಿ ನೇಮಕಗೊಂಡಿದ್ದಾರೆ.
ಟೀಂ ಇಂಡಿಯಾ ಲಕ್ನೋ ಮತ್ತು ಧರ್ಮಶಾಲಾದಲ್ಲಿ ಮೂರು ಟಿ 20 ಪಂದ್ಯಗಳನ್ನು ಮತ್ತು ಮೊಹಾಲಿ ಮತ್ತು ಬೆಂಗಳೂರಿನಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಆಡಲು ಸಜ್ಜಾಗಿದೆ.
ನಿರೀಕ್ಷೆಯಂತೆ ವಿರಾಟ್ ಕೊಹ್ಲಿ ಮತ್ತು ರಿಷಬ್ ಪಂತ್ಟ್ವೆಂ ಅವರಿಗೆ ಟಿ-20 ಪಂದ್ಯಗಳಿಗೆ ವಿಶ್ರಾಂತಿ ನೀಡಲಾಗಿದೆ.
ಶ್ರೀಲಂಕಾ ಸರಣಿಗೆ ಆಯ್ಕೆಗಾರರು ತಂಡವನ್ನು ಆಯ್ಕೆ ಮಾಡಿದ್ದು, ತಂಡ ಇಂತಿದೆ
ಟಿ 20 ತಂಡ: ರೋಹಿತ್ ಶರ್ಮಾ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿ.ಕೀ), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಬುಮ್ರಾ (ಉಪನಾಯಕ), ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಹರ್ಷಲ್ ಪಟೇಲ್, ಸಿರಾಜ್, ಸಂಜು ಸ್ಯಾಮ್ಸನ್ (ವಿ.ಕೀ), ರವೀಂದ್ರ ಜಡೇಜಾ, ಯಜುವೇಂದ್ರ ಚಹಾಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅವೇಶ್ ಖಾನ್
ಟೆಸ್ಟ್ : ರೋಹಿತ್ ಶರ್ಮಾ, ಮಯಾಂಕ್ ಅಗರ್ವಾಲ್, ಪ್ರಿಯಾಂಕ್ ಪಾಂಚಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಭಮನ್ ಗಿಲ್, ರಿಷಬ್ ಪಂತ್, ಕೆ ಎಸ್ ಭರತ್, ಆರ್ ಅಶ್ವಿನ್ (ಫಿಟ್‌ನೆಸ್‌ಗೆ ಒಳಪಟ್ಟು), ಆರ್ ಜಡೇಜಾ, ಜಯಂತ್ ಯಾದವ್, ಕುಲದೀಪ್ ಯಾದವ್, ಜೆ ಬುಮ್ರಾ ( ಉಪನಾಯಕ), ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೌರಭ್ ಕುಮಾರ್.
ಪಂದ್ಯಗಳ ವೇಳಾಪಟ್ಟಿ
ಮೊದಲ ಟಿ 20- ಫೆಬ್ರವರಿ 24 ರಂದು ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋದಲ್ಲಿ ನಡೆಯಲಿದೆ.
ಎರಡನೇ ಟಿ 20 ಫೆ. 26 ರಂದು,ಮೂರನೇ ಟಿ 20 ಫೆ. 27 ರಂದು ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ಧರ್ಮಶಾಲಾದಲ್ಲಿ ನಡೆಯಲಿವೆ.
ಮೊದಲ ಟೆಸ್ಟ್ – ಮಾರ್ಚ್ 4 ರಿಂದ 8 ಪಂಜಾಬ್ ಕ್ರಿಕೆಟ್ ಸಂಸ್ಥೆ ಐಎಸ್ ಬಿಂದ್ರಾ ಸ್ಟೇಡಿಯಂ, ಮೊಹಾಲಿ, ಚಂಡೀಗಢದಲ್ಲಿ , ಎರಡನೇ ಟೆಸ್ಟ್ – ಮಾರ್ಚ್ 12 ರಿಂದ 16 ರವರೆಗೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್ ಸ್ಟೋರಿ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Airtel Outage:ದೇಶದ ಹಲವೆಡೆ ಏರ್ ಟೆಲ್ Network ಸಮಸ್ಯೆ; ಏರ್ ಟೆಲ್ ಗ್ರಾಹಕರಿಂದ ದೂರು
BBK11: ದಯವಿಟ್ಟು ಬಿಗ್ ಬಾಸ್ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Manipal: ಅಪಘಾತ ತಡೆಯಲು ಹೀಗೆ ಮಾಡಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.