ರಾಜರಾಜೇಶ್ವರಿ ನಗರ ಉಪ ಚುನಾವಣೆ : ಮುನಿರತ್ನ, ಕುಸುಮಾ, ಕೃಷ್ಣಮೂರ್ತಿ ನಾಮಪತ್ರ ಸಲ್ಲಿಕೆ
Team Udayavani, Oct 14, 2020, 1:41 PM IST
ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿದ ರಾಜರಾಜೇಶ್ವರಿ ನಗರ ಉಪ ಚುನಾವಣೆಗೆ ಬಿಜೆಪಿ ಪಕ್ಷದಿಂದ ಮುನಿರತ್ನ, ಕಾಂಗ್ರೆಸ್ ಪಕ್ಷದಿಂದ ಕುಸುಮಾ ಎಚ್ ಹಾಗೂ ಜೆಡಿಎಸ್ ಪಕ್ಷದಿಂದ ಕೃಷ್ಣ ಮೂರ್ತಿ ವಿ ಅವರು ರಾಜರಾಜೇಶ್ವರಿ ನಗರದ ಬಿಬಿಎಂಪಿ ಕಚೇರಿಯಲ್ಲಿ ತಮ್ಮ ನಾಮಪತ್ರಗಳನ್ನು ಸಲ್ಲಿಸಿದರು.
ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರಿಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಮತ್ತು ಕಂದಾಯ ಸಚಿವರಾದ ಆರ್.ಅಶೋಕ್ ಸಾಥ್ ನೀಡಿದರು.
ಕುಸುಮಾ ಅವರಿಗೆ ಬುಧವಾರ ತಾರಾಬಲ ಇಲ್ಲವೆಂಬ ಕಾರಣಕ್ಕೆ ಜ್ಯೋತಿಷಿ ಸಲಹೆ ಮೇರೆಗೆ ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕುಸುಮಾ ಹುಟ್ಟಿದ ದಿನ ಮಂಗಳವಾಗಿದ್ದರಿಂದ ಜ್ಯೋತಿಷಿ ಡಾ.ಬಿ.ಪಿ. ಆರಾಧ್ಯ ಸಲಹೆಯಂತೆ ಮಂಗಳವಾರ ಮಧ್ಯಾಹ್ನ 12 ರಿಂದ 12.15ರ ನಡುವೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬುಧವಾರ ಬೆಳಗ್ಗೆ 11.45 ಗಂಟೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಜೊತೆಯಲ್ಲಿ ತೆರಳಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು.
ಇದನ್ನೂ ಓದಿ:ಬಂಟ್ವಾಳ: ಧಾರಾಕಾರ ಮಳೆಯಿಂದ ಗುಡ್ಡ ಕುಸಿಯುವ ಭೀತಿ
ಅಂತೆಯೇ ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ ಕೃಷ್ಣಮೂರ್ತಿ ಅವರೊಂದಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮತ್ತು ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್. ಪ್ರಕಾಶ್ ಜೊತೆಗಿದ್ದರು.
ಉಪಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಇದೇ 16 ಕೊನೆಯ ದಿನವಾಗಿದ್ದು ಶಿರಾ ಕ್ಷೇತ್ರ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳಿಗೆ ನವೆಂಬರ್ 3ಕ್ಕೆ ಮತದಾನ ನಡೆಯಲಿದ್ದು, ನವೆಂಬರ್ 10ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.