ರಾಜರಾಜೇಶ್ವರಿ ನಗರ ಉಪಚುನಾವಣೆ: ನಾಲ್ವರು ಕೋವಿಡ್ ಸೋಂಕಿತರಿಂದ ಮತದಾನ
Team Udayavani, Nov 4, 2020, 6:00 AM IST
ಬೆಂಗಳೂರು : ರಾಜರಾಜೇಶ್ವರಿ ನಗರ ಉಪಚುನಾವಣೆಗೆ ನಾಲ್ವರು ಕೋವಿಡ್ ಸೋಂಕಿತರು ಮತದಾನ ಮಾಡಿದ್ದು, ಬಿಬಿಎಂಪಿ ಆಯುಕ್ತರು, ಸಿಬಂದಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಸೋಂಕಿತರ ಮತದಾನಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಸೋಂಕಿತರಿಗೆ ಸಂಜೆ 5ರಿಂದ 6 ಗಂಟೆಯ ವರೆಗಿನ ಅವಧಿಯಲ್ಲಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಮತದಾನಕ್ಕೆ ಹೆಚ್ಚು ಸೋಂಕಿತರು ಬರುವ ನಿರೀಕ್ಷೆ ಇತ್ತು. ಹೀಗಾಗಿ, ಪಾಲಿಕೆಯ ಅಧಿಕಾರಿಗಳು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಕೊರೊನಾ ಸೋಂಕು ದೃಢಪಡುವವರನ್ನು ಮತಗಟ್ಟೆಗೆ ಕರೆದುಕೊಂಡು ಬರುವುದು ಹಾಗೂ ಮತದಾನದ ಬಳಿಕ ಅವರನ್ನು ಮನೆಗೆ ತಲುಪಿಸಲು ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಇದಕ್ಕೆ ಕೊರೊನಾ ಸೋಂಕು ದೃಢಪಟ್ಟವರು ಹಾಗೂ ಸೋಂಕಿನ ಲಕ್ಷಣ ಇರುವರಿಂದ ನಿರೀಕ್ಷಿತ ಪ್ರಮಾಣದಲ್ಲಿ ಸ್ಪಂದನೆ ಸಿಗಲಿಲ್ಲ. ಆರ್. ಆರ್. ನಗರದಲ್ಲಿ ಒಟ್ಟು 1,500ಕ್ಕೂ ಹೆಚ್ಚು ಕೊರೊನಾ ಸಕ್ರಿಯ ಪ್ರಕರಣಗಳಿವೆ ಎಂದು ಅಂದಾಜಿಸಲಾಗಿತ್ತು. ಈ ಪೈಕಿ 148 ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಮತದಾರರು ಎಂದು ಗುರುತಿಸಲಾಗಿತ್ತು.
ಸೋಂಕು ದೃಢಪಟ್ಟವರನ್ನು ಮತದಾನ ಕೇಂದ್ರಕ್ಕೆ ಕರೆದುಕೊಂಡು ಬರುವ ಸಿಬಂದಿ, ಮತಗಟ್ಟೆಯ ಅಧಿಕಾರಿ ಸಿಬಂದಿ ಎಲ್ಲರಿಗೂ ಪಿಪಿಇ ಕಿಟ್ ನೀಡಲಾಗಿತ್ತು. ಸೋಂಕಿತರು ಮತ ಚಲಾಯಿಸಿದ ಬಳಿಕ ಇಡೀ ಮತಗಟ್ಟೆ ಹಾಗೂ ಆವರಣವನ್ನು ಸ್ಯಾನಿಟೈಸ್ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.