ಕೃಷಿಕರಿಗೆ ಕೇಂದ್ರದಿಂದ 3.70ಲಕ್ಷ ಕೋಟಿ ರೂ.: ಯೂರಿಯ ಸಬ್ಸಿಡಿಗಾಗಿಯೇ ಬಹುತೇಕ ಹಣ


Team Udayavani, Jun 29, 2023, 7:20 AM IST

FARMER URIA

ಹೊಸದಿಲ್ಲಿ: ದೇಶದಲ್ಲಿ ಕೃಷಿ ಚಟು­ವಟಿಕೆ­ಯನ್ನು ಉತ್ತಮ­ಗೊಳಿಸಲು, ಮುಖ್ಯ­ವಾಗಿ ಯೂರಿಯ ರಸ­ಗೊಬ್ಬರವನ್ನು ಎಲ್ಲರಿಗೂ ಸರಿಯಾಗಿ ತಲುಪುವಂತೆ ಮಾಡಲು ಕೇಂದ್ರ ಸರಕಾರ 3.70 ಲಕ್ಷ ಕೋಟಿ ರೂ. ಬಿಡುಗಡೆ ಮಾಡಿದೆ. ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ ಎಂದು ರಸಗೊಬ್ಬರ ಸಚಿವ ಮನ್‌ಸುಖ್‌ಮಾಂಡ­ವಿಯಾ ಹೇಳಿ­ದ್ದಾರೆ.

ಪ್ರಧಾನಿ ನರೇಂದ್ರ ಮೋದಿ­ಯವರು ರೈತರು ಸರಾಗ­ವಾಗಿ ಯೂರಿಯ ಪಡೆಯಬೇಕು, ಕೃಷಿ ಚಟುವಟಿಕೆಗಳು ಸುಸ್ಥಿರವಾಗಿ ಮುಂದು­ವರಿಯ­ಬೇಕೆಂದು ಬಯಸಿ­ದ್ದಾರೆ. ಅದಕ್ಕಾಗಿ ಭಾರೀ ಮೊತ್ತವನ್ನು ನೀಡಿದ್ದಾರೆ. 3.70 ಲಕ್ಷ ಕೋಟಿ ರೂ.ಗಳಲ್ಲಿ 3.68 ಲಕ್ಷ ಕೋಟಿ ರೂ.ಗಳನ್ನು ಯೂರಿಯ ಸಬ್ಸಿಡಿಗೆಂದೇ ಎತ್ತಿಡಲಾ­ಗಿದೆ. ಇದರಿಂದ 45 ಕೆ.ಜಿ.ಗಳ ಒಂದು ಯೂರಿಯ ಚೀಲ 242 ರೂ.ಗಳಿಗೇ ಸಿಗಲಿದೆ ಎಂದು ಮಾಂಡವಿಯಾ ಹೇಳಿ­ದ್ದಾರೆ. ಪ್ರಸ್ತುತ ದೇಶದಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಹೀಗಾಗಿ ರೈತರು ತಮ್ಮ ಚಟುವಟಿಕೆಯನ್ನು ಬಿರುಸು­ಗೊಳಿಸಲಿ­ದ್ದಾರೆ. ಹೀಗಾಗಿ ಈ ಹಣ ಬಿಡುಗಡೆ ಮಹತ್ವ ಪಡೆದು­ಕೊಂಡಿದೆ.

ರಸಗೊಬ್ಬರ ಬಳಕೆ ತಗ್ಗಿಸುವ ರಾಜ್ಯಗಳಿಗೆ ಪ್ರೋತ್ಸಾಹಧನ
“ಪಿಎಂ-ಪ್ರಣಾಮ್‌” ನೂತನ ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಈ ಯೋಜನೆ­ಯು ರಾಜ್ಯಗಳಲ್ಲಿ ರಾಸಾಯನಿಕ ಗೊಬ್ಬರಗಳಿಗೆ ಕಡಿವಾಣ ಹಾಕಿ, ಪರ್ಯಾಯ ರಸಗೊಬ್ಬರಗಳ ಬಳಕೆಗೆ ಉತ್ತೇಜನ ನೀಡುತ್ತದೆ. 2023-24ರ ಕೇಂದ್ರ ಬಜೆಟ್‌ನ ಭಾಗವಾಗಿ ಪಿಎಂ-ಪ್ರಣಾಮ್‌(ಭೂಮಿ ತಾಯಿಯ ಪುನಃಸ್ಥಾಪನೆ, ಜಾಗೃತಿ, ಉತ್ಪಾದನೆ, ಪೋಷಣೆ ಮತ್ತು ಸುಧಾರಣೆಗಾಗಿ ಪ್ರಧಾನಮಂತ್ರಿ ಕಾರ್ಯಕ್ರಮ) ಯೋಜನೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಫೆ.1ರಂದು ಘೋಷಿಸಿದ್ದರು.

“ಒಂದು ರಾಜ್ಯ 10 ಲಕ್ಷ ಟನ್‌ ರಾಸಾಯನಿಕ ಗೊಬ್ಬರ ಉಪಯೋಗಿ­ಸುತ್ತಿದ್ದು, ಅದನ್ನು 3 ಲಕ್ಷ ಟನ್‌ಗೆ ಇಳಿಸಿದರೆ, ಅದರ ಸಬ್ಸಿಡಿ ಉಳಿತಾಯ 3,000 ಕೋಟಿ ರೂ. ಆಗಲಿದೆ. ಈ ಪೈಕಿ ಶೇ.50ರಷ್ಟು ಅಂದರೆ 1,500 ಕೋಟಿ ರೂ.ಗಳನ್ನು ಕೇಂದ್ರ ಸರಕಾರ ಸಂಬಂಧಪಟ್ಟ ರಾಜ್ಯಕ್ಕೆ ನೀಡಲಿದೆ. ಇದನ್ನು ಪರ್ಯಾಯ ಗೊಬ್ಬರ ಮತ್ತು ಇತರ ಅಭಿವೃದ್ಧಿ ಕೆಲಸಗಳಿಗೆ ಬಳಸಬಹುದು” ಎಂದು ಮಾಂಡವಿಯಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

1-nikil

Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪ‌ಲಾಯನ ಮಾಡಲ್ಲ: ನಿಖಿಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.