ರಷ್ಯಾದ 5 ವಿಮಾನಗಳು, ಹೆಲಿಕ್ಯಾಪ್ಟರ್ ಹೊಡೆದುರುಳಿಸಿದ ಉಕ್ರೇನ್
Team Udayavani, Feb 24, 2022, 12:27 PM IST
ಮಾಸ್ಕೋ : ರಷ್ಯಾ ಸಮರ ಘೋಷಿಸಿ ದಾಳಿ ಆರಂಭಿಸಿದ ಬೆನ್ನಲ್ಲೇ ಲುಹಾನ್ಸ್ಕ್ ಪ್ರದೇಶದಲ್ಲಿ ಐದು ರಷ್ಯಾದ ವಿಮಾನಗಳು ಮತ್ತು ರಷ್ಯಾದ ಹೆಲಿಕ್ಯಾಪ್ಟರ್ ಅನ್ನು ಹೊಡೆದುರುಳಿಸಲಾಗಿದೆ ಎಂದು ಉಕ್ರೇನ್ ಮಿಲಿಟರಿ ಹೇಳಿಕೊಂಡಿದೆ.
ಉಕ್ರೇನ್‌ನ ಅಧ್ಯಕ್ಷರು ಗುರುವಾರ ಸಮರ ಕಾನೂನನ್ನು ಘೋಷಿಸಿ, ರಷ್ಯಾ ಮಿಲಿಟರಿ ದಾಳಿ ಪ್ರಾರಂಭಿಸುವುದರಿಂದ ಭಯಪಡಬೇಡಿ ಎಂದು ನಾಗರಿಕರಿಗೆ ಧೈರ್ಯ ತುಂಬಿದ್ದಾರೆ.
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್‌ನಲ್ಲಿ ಮಿಲಿಟರಿ ಕಾರ್ಯಾಚರಣೆಯನ್ನು ಘೋಷಿಸಿದ್ದು, ದೂರದರ್ಶನದ ಭಾಷಣದಲ್ಲಿ ಪುಟಿನ್, ಉಕ್ರೇನ್‌ನಿಂದ ಬರುತ್ತಿರುವ ಬೆದರಿಕೆಗಳಿಗೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಉಕ್ರೇನ್ ಅನ್ನು ವಶಪಡಿಸಿಕೊಳ್ಳುವ ಗುರಿಯನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ರಷ್ಯಾದ ಕ್ರಮದಲ್ಲಿ ಹಸ್ತಕ್ಷೇಪ ಮಾಡುವ ಯಾವುದೇ ಪ್ರಯತ್ನವು “ಅವರು ಎಂದಿಗೂ ನೋಡದ ಪರಿಣಾಮಗಳಿಗೆ” ಕಾರಣವಾಗಬಹುದು ಎಂದು ಪುಟಿನ್ ಇತರ ದೇಶಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಅಮೆರಿಕಾ ಅಧ್ಯಕ್ಷ ಜೋ ಬಿಡೆನ್ ಅವರು ಉಕ್ರೇನ್ ಮೇಲಿನ ದಾಳಿಯ ಬಗ್ಗೆ “ಜಗತ್ತು ರಷ್ಯಾವನ್ನು ಹೊಣೆಗಾರರನ್ನಾಗಿ ಮಾಡುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ ಮತ್ತು “ವಿಪತ್ತು ಜೀವಹಾನಿ ಉಂಟುಮಾಡುತ್ತದೆ” ಎಂದು ಅವರು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.