ವಿನಾಯಕ ನಗರದ ಮೃತ ಬಾಲಕನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಎಸ್.ಎಲ್.ಘೋಟ್ನೇಕರ್
Team Udayavani, Oct 27, 2021, 10:52 AM IST
ದಾಂಡೇಲಿ: ಮೊಸಳೆಯ ಕ್ರೌರ್ಯಕ್ಕೆ ಬಲಿಯಾದ ನಗರದ ವಿನಾಯಕನಗರದ ಬಾಲಕ ಮೊಹಿನ್ ಮೆಹಮೂದ್ ಅಲಿ ಮನೆಗೆ ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಘೋಟ್ನೇಕರ ಅವರು ಭೇಟಿ ಮಾಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ದುರ್ಘಟನೆಯ ಬಗ್ಗೆ ವಿಷಾಧ ವ್ಯಕ್ತಪಡಿಸಿದ ಘೋಟ್ನೇಕರ ಅವರು ಪ್ರಾರಂಭಿಕ ಹಂತದಲ್ಲಿ ವೈಯಕ್ತಿಕವಾಗಿ ಹತ್ತು ಸಾವಿರ ರೂಪಾಯಿ ಸಹಾಯಧನವನ್ನು ನೀಡಿದರು. ಇನ್ನೂ ಹೆಚ್ಚಿನ ರೀತಿಯಲ್ಲಿ ಆರ್ಥಿಕ ಸಹಾಯ ಮಾಡುವುದಾಗಿ ಹೇಳಿದ ಎಸ್.ಎಲ್.ಘೋಟ್ನೇಕರ ಅವರು ಬಾಡಿಗೆ ಮನೆಯಲ್ಲಿರುವ ಈ ಕುಟುಂಬಕ್ಕೆ ನಗರ ಸಭೆಯಡಿ ಆಶ್ರಯ ಮನೆಯನ್ನು ಮಂಜೂರು ಮಾಡಿ, ಆಶ್ರಯ ಮನೆಗೆ ಮೃತ ಬಾಲಕನ ಕುಟುಂಬದವರು ತುಂಬಬೇಕಾದ ವಂತಿಗೆ ಹಣವನ್ನು ತಾನು ಪಾವತಿಸುವುದಾಗಿ ಭರವಸೆ ನೀಡಿದರು. ಉಳಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿದ ಘೋಟ್ನೇಕರ ಅವರು ಈ ಕುಟುಂಬಕ್ಕೆ ವಿಶೇಷ ರೀತಿಯಲ್ಲಿ ಪರಿಹಾರ ಧನವನ್ನು ನೀಡುವ ನಿಟ್ಟಿನಲ್ಲಿ ಸಹಕರಿಸುವಂತೆ ಕೋರಿದರು. ಅರಣ್ಯ ಸಚಿವರು ಹಾಗೂ ಉಸ್ತುವಾರಿ ಸಚಿವರಲ್ಲಿ ಈ ಘಟನೆಯ ಬಗ್ಗೆ ಮಾತನಾಡಿ ಸೂಕ್ತ ರೀತಿಯಲ್ಲಿ ಪರಿಹಾರವನ್ನು ಕೊಡಿಸುವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ನಗರ ಸಭೆಯ ಅಧ್ಯಕ್ಷೆ ಸರಸ್ವತಿ ರಜಪೂತ್ ಅವರು ಈ ಕುಟುಂಬದ ಹೆಸರನ್ನು ಆಶ್ರಯ ಮನೆ ಯಾದಿಯಲ್ಲಿ ಸೇರಿಸುವುದಾಗಿ ಭರವಸೆ ನೀಡಿದರು.
ಇದನ್ನೂ ಓದಿ : ಪ್ರಧಾನಿ ನರೇಂದ್ರ ಮೋದಿ ಸಾಮಾನ್ಯ ವ್ಯಕ್ತಿಯಲ್ಲ, ಸರ್ವಶಕ್ತನ ಅವತಾರ: ಸಚಿವ ತಿವಾರಿ
ಆಶ್ರಯ ಮನೆಯ ವಂತಿಗೆ ಪಾವತಿಯ ಜವಾಬ್ದಾರಿಯನ್ನು ವಹಿಸಿಕೊಂಡ ಎಸ್.ಎಲ್.ಘೋಟ್ನೇಕರ ಮಾನವೀಯ ಸ್ಪಂದನೆಗೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದೆ. ದುಖ:ದಲ್ಲಿದ್ದ ಕುಟುಂಬಕ್ಕೆ ತನ್ನದೇ ಆದ ರೀತಿಯಲ್ಲಿ ಸ್ಪಂದಿಸುತ್ತಿರುವ ಘೋಟ್ನೇಕರ ಅವರ ಕಾರ್ಯಕ್ಕೆ ಮೃತ ಬಾಲಕನ ಕುಟುಂಬಸ್ಥರು, ಸಂಬಂಧಿಗಳು ಹಾಗೂ ಸ್ಥಳೀಯರು ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ನಗರ ಸಭೆಯ ಅಧ್ಯಕ್ಷೆ ಸರಸ್ವತಿ ರಜಪೂತ್, ಅರಣ್ಯ ಇಲಾಖೆಯ ಸಹಾಯಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಎಸ್.ನಿಂಗಾಣಿ, ವಲಯಾರಣ್ಯಾಧಿಕಾರಿ ವಿನಯ್ ಭಟ್, ಹಳಿಯಾಳ ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ ಚೌವ್ಹಾಣ್, ದಾಂಡೇಲಪ್ಪ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಪೂಜಾರಿ, ಯುವ ನ್ಯಾಯವಾದಿ ವಿಶ್ವನಾಥ ಜಾಧವ್, ಮುಖಂಡರುಗಳಾದ ಗಣೇಶ ಖಾನಪುರಿ, ಸಂದೀಪ್ ಭಂಡಾರಿ, ಗೌರೀಶ ನಾಯ್ಕ, ಸಚ್ಚಿನ್ ವ್ಹಾಜ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.