Rajasthan: ಹೊಸ ಪಕ್ಷ ಘೋಷಿಸದ ಸಚಿನ್
Team Udayavani, Jun 12, 2023, 7:19 AM IST
ಜೈಪುರ: ಕೆಲವೇ ದಿನಗಳ ಹಿಂದೆ ರಾಜಸ್ಥಾನದಲ್ಲಿ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಹೊಸ ಪಕ್ಷ ಸ್ಥಾಪಿಸಲಿದ್ದಾರೆ ಎಂಬ ವದಂತಿ ಸುಳ್ಳಾಗಿದೆ. ರಾಜಸ್ಥಾನದ ದೌಸಾದಲ್ಲಿ ಆಯೋಜಿಸಲಾಗಿದ್ದ ತಮ್ಮ ತಂದೆ ದಿ.ರಾಜೇಶ್ ಪೈಲಟ್ ಪುಣ್ಯತಿಥಿ ಪ್ರಯುಕ್ತದ ಕಾರ್ಯಕ್ರಮ ಸಂದರ್ಭದಲ್ಲಿ ಮಾತನಾಡಿದ ಅವರು, “ಜನರು ಹೊಂದಿರುವ ನಂಬಿಕೆಯೇ ನನ್ನ ದೊಡ್ಡ ಆಸ್ತಿ. ಆದರೆ, ನನ್ನ ಬೇಡಿಕೆಗಳಲ್ಲಿ ಯಾವುದೇ ರಿಯಾಯಿತಿ ಇಲ್ಲ. ಸರ್ಕಾರದಲ್ಲಿ ಲೋಪ ಉಂಟಾಗಿದ್ದರೆ, ಇತರರನ್ನು ದೂಷಿಸದೆ ಸರಿಪಡಿಸಿಕೊಳ್ಳಬೇಕು” ಎಂದು ಹೇಳಿದ್ದಾರೆ. ಈ ಮೂಲಕ ಸಿಎಂ ಅಶೋಕ್ ಗೆಹ್ಲೋಟ್ ವಿರುದ್ಧ ಆಕ್ಷೇಪವನ್ನೂ ಮಾಡಿದ್ದಾರೆ.
ದೇವರು ಒಂದಲ್ಲ ಒಂದು ದಿನ ನನಗೆ ನ್ಯಾಯವನ್ನು ನೀಡಲಿದ್ದಾರೆ ಎಂಬ ವಿಶ್ವಾಸ ಇದೆ. ಯುವಕರ ಉತ್ತಮ ಭವಿಷ್ಯಕ್ಕಾಗಿ ಹೋರಾಡುತ್ತೇನೆ. ನಾನು ದುರ್ಬಲ ಅಲ್ಲ, ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ. ರಾಜಕೀಯದಲ್ಲಿ ತಮ್ಮ ತಂದೆ ಸಚಿನ್ ಪೈಲಟ್ ಕೂಡ ಹಲವು ರೀತಿಯ ಏರಿಳಿತಗಳನ್ನು ಕಂಡಿದ್ದರು. ಆದರೆ ತತ್ವಾದರ್ಶಗಳಲ್ಲಿ ರಾಜಿ ಮಾಡಿಕೊಂಡಿರಲಿಲ್ಲ ಎಂದು ಹೇಳಿದ್ದಾರೆ. ಸಚಿನ್ ಪೈಲಟ್ ಹೊಸ ಪಕ್ಷ ಘೋಷಣೆ ಮಾಡದೇ ಇದ್ದುದರಿಂದ ರಾಜಸ್ಥಾನ ಕಾಂಗ್ರೆಸ್ ಘಟಕ ಸದ್ಯಕ್ಕೆ ಮುಜುಗರದಿಂದ ಪಾರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.