ಸಲೀಂ ಮಾತಿನಿಂದ ಮುಜುಗರವಾಗಿದೆ, ನನಗದು ಸಂಬಂಧಿಸಿಲ್ಲ: ಡಿಕೆಶಿ
Team Udayavani, Oct 13, 2021, 5:23 PM IST
ಬೆಂಗಳೂರು : ಮಾಧ್ಯಮ ಸಂಯೋಜಕರಾಗಿದ್ದ ಸಲೀಂ ಅವರು ಆಡಿದ ಕೆಲ ಮಾತುಗಳಿಂದ ಮುಜುಗರ ಆಗಿದ್ದು ನಿಜ. ಆದರೆ ಅವರ ಆರೋಪಕ್ಕೂ ನನಗೂ ಸಂಬಂಧವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬುಧವಾರ ಸುದ್ದಿಗೋಷ್ಠಿ ನಡೆಸಿ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್, ನಾನು ಯಾವ ಪರ್ಸಂಟೇಜ್ ವಿಚಾರದಲ್ಲಿ ಭಾಗಿಯಾಗಿಲ್ಲ.ಸಲೀಂ ಮಾತನಾಡಿರುವ ವಿಚಾರ ಕಾಂಗ್ರೆಸ್ ಪಕ್ಷಕ್ಕೂ, ನನಗೂ ಸಂಬಂಧಿಸುವುದಿಲ್ಲ ಎಂದರು.
ಸಲೀಂ ಹೇಳಿಕೆಯಿಂದ ಮುಜುಗರ ಆಗಿಲ್ಲ ಎಂದು ಹೇಳುವುದಿಲ್ಲ, ಮಾತನಾಡಿದ್ದಾರೆ, ರೆಕಾರ್ಡ್ ಕೂಡ ಇದೆ ಎಂದರು. ಉಗ್ರಪ್ಪ ಅವರು ಈಗಾಗಲೇ ಉತ್ತರ ಕೊಟ್ಟಿದ್ದಾರೆ ಎಂದು ಭಾವಿಸುತ್ತೇನೆ ಎಂದರು.
ಸಲೀಂ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರ ಆಗಿದೆ, ಮುಜುಗರ ಆಗಿದ್ದಕ್ಕೆ ನಾನು ಇಲ್ಲಿ ಮಾತನಾಡುತ್ತಿದ್ದೇನೆ. ಹೇಳಿಕೆ ನೀಡಿದ ಸಲೀಂ ವಿರುದ್ಧ ಪಕ್ಷದ ಶಿಸ್ತು ಸಮಿತಿ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡಿದೆ ಎಂದರು.
ರಾಜಕಾರಣದಲ್ಲಿ ಚಪ್ಪಾಳೆ ಹೊಡೆಯುವವರು, ಜೈಕಾರ ಹಾಕುವವರು, ಚಪ್ಪಲಿ ಎಸೆಯುವವರು, ಮೊಟ್ಟೆ ಎಸೆಯುವರು ಇರ್ತಾರೆ. ಇದು ಎಲ್ಲಾ ಪಕ್ಷಗಳಲ್ಲೂ ಇದೆ ಎಂದರು.
ಸಿದ್ದರಾಮಯ್ಯ ಅವರ ಜೊತೆ ಜಗಳವೂ ಇಲ್ಲ ಏನೂ ಇಲ್ಲ. ನಾನು ಯಾವುದೇ ಗುಂಪುಗಾರಿಕೆ ನಡೆಸುವವನಲ್ಲ. ನನ್ನ ವಿರುದ್ಧ ಷಡ್ಯಂತ್ರ ನಡೆದಿಲ್ಲ ಎಂದರು.
ನಾನು ಹಳ್ಳಿಯಿಂದ ಬಂದವನು. ನನ್ನ ಬಾಡಿ ಲ್ಯಾಂಗ್ವೇಜ್ ಬದಲಾವಣೆ ಮಾಡಲು ಸಾಧ್ಯವಿಲ್ಲ. ನನ್ನದೇ ಆದ ಶೈಲಿ ಇದೆ, ನನ್ನದೇ ಆದ ವ್ಯಕ್ತಿತ್ವ, ನನ್ನದೇ ಆದ ನಡತೆ, ನನ್ನದೇ ಆದ ಯಶಸ್ಸು ಇದೆ ಎಂದರು.
ಬಿಜೆಪಿ ವಿರುದ್ಧವೂ ಅವರದ್ದೇ ಪಕ್ಷದ ನಾಯಕರು ಭ್ರಷ್ಟಾಚಾರದ ಆರೋಪ ಮಾಡಿದ್ದರು,ಪಕ್ಷ ಕ್ರಮ ಕೈಗೊಂಡಿದೆಯೇ ಎಂದು ಸವಾಲು ಹಾಕಿದರು.
ಡಿಕೆಶಿ ಅವರು ಉತ್ತಮ ಆಡಳಿತಗಾರರು
ತೀವ್ರ ವಿವಾದಕ್ಕೆ ಗುರಿಯಾದ ಬಳಿಕ ವಿ. ಎಸ್. ಉಗ್ರಪ್ಪ ಅವರು ಸುದ್ದಿಗೋಷ್ಠಿ ನಡೆಸಿ, ನಡೆದ ಘಟನೆಗೆ ತೇಪೆ ಹಚ್ಚಲು ಪ್ರಯತ್ನಿಸಿದರು.
ಡಿ.ಕೆ.ಶಿವಕುಮಾರ್ ಅವರು ಆಸ್ತಿ ಗಳಿಸಿರುವುದು ರಾಜಕಾರಣದಿಂದ ಅಲ್ಲ. ಅವರ ವ್ಯವಹಾರ ಮತ್ತು ಉದ್ಯಮದಿಂದ ಮಾಡಿದ್ದಾರೆ. ರಾಜಕಾರಣದಲ್ಲಿ ಅವರು ವೆಚ್ಚ ಮಾಡಿ ಕಳೆದುಕೊಂಡು ಬರುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಕಮಿಷನ್ ಪ್ರವೃತ್ತಿ ಬೆಳೆಸಿದವರಲ್ಲ. ಪಿಸುಗುಟ್ಟಿದ ಮಾತನ್ನು ತೆಗೆದುಕೊಂಡು ಕೋಟಿಗಟ್ಟಲೆ ತೆಗೆದುಕೊಂಡಿದ್ದಾರೆ ಎಂದು ಬಿಂಬಿಸುವುದು ಮಾಧ್ಯಮಗಳಿಗೆ ಸಮಂಜಸವಲ್ಲ ಎಂದರು.
ಗೂಬೆ ಕೂರಿಸುವುದು ಬೇಡ , ನಾನು ಯಾರಿಗೂ ಗೂಬೆ ಕೂರಿಸುವುದಿಲ್ಲ. ಆಕಸ್ಮಿಕವಾಗಿ ಅವನು ಕಿವಿಯಲ್ಲಿ ಪಿಸುಗುಟ್ಟಿದ್ದನ್ನು ಪರಿಗಣಿಸಬೇಡಿ ಎಂದರು. ಕಮಿಷನ್, ಭ್ರಷ್ಟಾಚಾರ ಕಾಂಗ್ರೆಸ್ ಗೆ ದೂರ. ಭ್ರಷ್ಟಾಚಾರದ ಗಂಗೋತ್ರಿ ಹರಿಸುತ್ತಿದ್ದರೇ ಅದು ಬಿಜೆಪಿಯವರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಟಿಟಿ ರೋಡ್‌ನಲ್ಲಿವೆ 4 ಬಾವಿ; ನೀರಿದೆ, ನಿರ್ವಹಣೆಯೇ ಇಲ್ಲ!
Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್ ಸಿಟಿʼ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.