Samantha Prabhu: ಮತ್ತೆ ಮದುವೆಯ ಸಹವಾಸವೇ ಬೇಡ ಎಂದ್ರಾ ಸಮಂತಾ?
Team Udayavani, Dec 18, 2023, 1:33 PM IST
ಹೈದರಾಬಾದ್: ಬಹುಭಾಷಾ ನಟಿ ಸಮಂತಾ ಸದ್ಯ ಸಿನಿಮಾದಿಂದ ಬ್ರೇಕ್ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ನಿರ್ಮಾಣ ಸಂಸ್ಥೆಯೊಂದನ್ನು ಆರಂಭಿಸುವ ಮೂಲಕ ನಿರ್ಮಾಪಕಿಯಾಗಿ ಮೊದಲ ಹೆಜ್ಜೆಯಿಡಲು ಸಮಂತಾ ಮುಂದಾಗಿದ್ದಾರೆ.
ಆರೋಗ್ಯ ಸಮಸ್ಯೆಯಿದ್ದರೂ ಸಮಂತಾ ಖುಷ್ ಖುಷ್ ಆಗಿ ಪ್ರವಾಸ ಮಾಡುತ್ತಾ,ಟಿವಿ ಶೋಗಳಲ್ಲಿ ಭಾಗಿಯಾಗುತ್ತಾ ಸಮಯ ಕಳೆಯುತ್ತಿದ್ದಾರೆ. ಸದ್ಯ ಅವರು ಸಿನಿಮಾದಿಂದ ಕೆಲ ಸಮಯ ಬ್ರೇಕ್ ಪಡೆದುಕೊಂಡಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಸಮಂತಾ ಸಖತ್ ಆ್ಯಕ್ಟಿವ್ ಆಗಿರುತ್ತಾರೆ. ಭಾನುವಾರ ತನ್ನ ಇನ್ಸ್ಟಾಗ್ರಾಮ್ ನಲ್ಲಿ ಅಭಿಮಾನಿಗಳಿಗಾಗಿ ಕೆಲ ಸಮಯವನ್ನು ಮೀಸಲಿಟ್ಟಿದ್ದಾರೆ. ಇಲ್ಲಿ ಫ್ಯಾನ್ಸ್ ಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.
ಒಬ್ಬ ಅಭಿಮಾನಿ ಸಮಂತಾ ಅವರ ಬಳಿ ಅವರ ಮತ್ತೆ ಮದುವೆ ಆಗುವ ಬಗ್ಗೆ ಪ್ರಶ್ನೆ ಕೇಳಿದ್ದು, ಇದಕ್ಕೆ ಸಮಂತಾ ತಮಾಷೆಯ ರೀತಿಯಲ್ಲೇ ಉತ್ತರವನ್ನು ನೀಡಿದ್ದಾರೆ.
“ನೀವು ಮತ್ತೆ ಮದುವೆಯಾಗುವ ಬಗ್ಗೆ ಯೋಚಿಸುತ್ತೀರಾ?” ಎಂದು ಅಭಿಮಾನಿಯೊಬ್ಬರು ಕೇಳಿದ್ದಾರೆ. ಇದಕ್ಕೆ ಸಮಂತಾ ಅವರು ತಮಾಷೆಯ ರೀತಿಯಲ್ಲಿ “ಅಂಕಿಅಂಶಗಳ ಪ್ರಕಾರ, ಇದು ಕೆಟ್ಟ ಹೂಡಿಕೆಯಾಗಿದೆ” ಎನ್ನುವ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಕೆಲ ಅಂಕಿಅಂಶಗಳ ಉದಾಹರಣೆಯನ್ನು ನೀಡಿದ್ದಾರೆ.
ಪರಸ್ಪರ ಪ್ರೀತಿಸಿ, ಡೇಟ್ ಮಾಡಿ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು 2017 ರಲ್ಲಿ ನಾಗಚೈತನ್ಯ – ಸಮಂತಾ ಎಲ್ಲರ ಸಮ್ಮುಖದಲ್ಲಿ ಮದುವೆಯಾಗಿದ್ದರು. 2021 ರಲ್ಲಿ ತಾವು ಪ್ರತ್ಯೇಕವಾಗುವುದಾಗಿ ಇಬ್ಬರು ಘೋಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.