ಜ. 4ರಿಂದ ಚಂದನಾ ವಾಹಿನಿಯಲ್ಲಿ ಸಂವೇದಾ ಪಾಠಗಳ ಮರು ಪ್ರಸಾರ: ಸುರೇಶ್ ಕುಮಾರ್
Team Udayavani, Dec 30, 2020, 6:57 PM IST
ಬೆಂಗಳೂರು: ಕೋವಿಡ್-19 ಸೋಂಕು ಪ್ರಸರಣ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಭೌತಿಕ ತರಗತಿಗಳು ಆರಂಭವಾಗದೇ ಇರುವುದರಿಂದ ದೂರದರ್ಶನ ಚಂದನಾ ವಾಹಿನಿಯಲ್ಲಿ 8, 9 ಮತ್ತು 10ನೇ ತರಗತಿಯ ಸಂವೇದಾ ಪಾಠಗಳನ್ನು ಜ. 4ರಿಂದ ಮರು ಪ್ರಸಾರ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ತರಗತಿಗಳಿಗೆ ಕಳೆದ ಜುಲೈ 20ರಿಂದ ಚಂದನಾ ವಾಹಿನಿಯಲ್ಲಿ ಪ್ರಸಾರವಾದ ಪಾಠಗಳು 2021ರ ಜ. 1ಕ್ಕೆ ಪೂರ್ಣಗೊಳ್ಳಲಿವೆ. ಜ. 1ರಿಂದ 10ನೇ ತರಗತಿಗೆ ಶಾಲಾ ತರಗತಿಗಳು ಮತ್ತು 6ರಿಂದ 9ನೇ ತರಗತಿಗಳಿಗೆ ವಿದ್ಯಾಗಮ ತರಗತಿಗಳು ಆರಂಭವಾಗುತ್ತಿವೆ. ಇದರ ಜೊತೆಗೆ ಮಕ್ಕಳ ಕಲಿಕೆ ಹಿತದೃಷ್ಟಿಯಿಂದ ಚಂದನಾ ವಾಹಿನಿಯಲ್ಲಿ 8, 9 ಮತ್ತು 10ನೇ ತರಗತಿಗಳಿಗೆ ಪ್ರಸಾರವಾಗುತ್ತಿದ್ದ ಪಾಠಗಳನ್ನು ಜ. 4ರಿಂದ ಮರು ಪ್ರಸಾರ ಮಾಡಲಾಗುವುದೆಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:2021: ಹೊಸ ವರುಷ …ಹೊಸ ಹರುಷ…ಬದುಕಿನ ಹೊಸ ಪುಟದ ಆರಂಭ
ದೂರದರ್ಶನ ಚಂದನಾ ವಾಹಿನಿಯಲ್ಲಿ ಪಾಠಗಳು ಪ್ರಸಾರವಾಗುತ್ತಿರುವುದರಿಂದ ಉತ್ತೇಜಿತವಾಗಿರುವ ಜಿಯೋ ವಾಹಿನಿಯವರು 5ರಿಂದ 10ನೇ ತರಗತಿಯ ವಿಡಿಯೋ ಪಾಠಗಳನ್ನು ಉಚಿತವಾಗಿ ಪ್ರಸಾರ ಮಾಡಲು ಮುಂದೆ ಬಂದಿದ್ದು ಈ ಕುರಿತು ಕ್ರಮ ವಹಿಸಲಾಗುತ್ತಿದೆ. ಸದ್ಯದಲ್ಲೆ ಜಿಯೋ ವಾಹಿನಿ ಮೂಲಕ ಪ್ರಸಾರವಾಗುವ ತರಗತಿಗಳ ಕುರಿತು ವಿವರಣೆ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
1ರಿಂದ 4ನೇ ತರಗತಿಯ ವಿದ್ಯಾರ್ಥಿಗಳ ಕಲಿಕಾ ಹಿತದೃಷ್ಟಿಯಿಂದ ರೇಡಿಯೋ ಪಾಠಗಳನ್ನು ಸಿದ್ಧಪಡಿಸಲಾಗುತ್ತಿದೆ. ಜ. 2ನೇ ವಾರದಿಂದ ಆಕಾಶವಾಣಿಯ 13 ಕೇಂದ್ರಗಳ ಮೂಲಕ ಈ ರೇಡಿಯೋ ಪಾಠಗಳನ್ನು ಪ್ರಸಾರ ಮಾಡಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಚಂದನಾ ವಾಹಿನಿಯಲ್ಲಿ ರಿವಿಜನ್ ಪಾಠಗಳನ್ನು ಮತ್ತು ರೇಡಿಯೋ ಪಾಠಗಳ ಪ್ರಯೋಜನ ಪಡೆಯಬೇಕೆಂದು ಸಚಿವರು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Anmol Bishnoi; ಅಪರಾಧ ಜಾಲದ ಪ್ರಾಬಲ್ಯ ಸ್ಥಾಪಿಸಲು ಬಾಬಾ ಸಿದ್ದಿಕ್ ಹ*ತ್ಯೆ!
Ullala: ಲಾರಿ-ಬೈಕ್ ಅಪಘಾತ: ಮೆಡಿಕಲ್ ಅಂಗಡಿ ಮಾಲೀಕ ದಾರುಣ ಮೃತ್ಯು
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.