Allu Arjun: ಕಾಲ್ತುಳಿತ ಪ್ರಕರಣ- ಹೈದರಾಬಾದ್ ಪೊಲೀಸರಿಂದ ನಟ ಅಲ್ಲು ಅರ್ಜುನ್ ವಿಚಾರಣೆ
ಕಾಲ್ತುಳಿತ ಘಟನೆಯಲ್ಲಿ ಮಹಿಳೆಯೊಬ್ಬರು ಸಾವ*ನ್ನಪ್ಪಿದ್ದು, ಆಕೆಯ ಪುತ್ರ ಗಾಯಗೊಂಡಿದ್ದ.
Team Udayavani, Dec 24, 2024, 2:26 PM IST
ಹೈದರಾಬಾದ್: ಸಂಧ್ಯಾ ಥಿಯೇಟರ್ ನಲ್ಲಿ ಸಂಭವಿಸಿದ್ದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್(Actor Allu Arjun) ಅವರನ್ನು ಮಂಗಳವಾರ (ಡಿ.24) ಹೈದರಾಬಾದ್ ಪೊಲೀಸರು ವಿಚಾರಣೆ ನಡೆಸಿರುವುದಾಗಿ ವರದಿಯಾಗಿದೆ.
ಡಿಸೆಂಬರ್ 2ರಂದು ಸಂಧ್ಯಾ ಥಿಯೇಟರ್ ನಲ್ಲಿ ಪುಷ್ಪ 2 ಸಿನಿಮಾ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದ ತನಿಖೆಯ ಹಿನ್ನೆಲೆಯಲ್ಲಿ ಮಂಗಳವಾರ ಪೊಲೀಸ್ ವಿಚಾರಣೆಗೆ ಹಾಜರಾಗಬೇಕೆಂದು ಅಲ್ಲು ಅರ್ಜುನ್ ಗೆ ನೋಟಿಸ್ ನೀಡಲಾಗಿತ್ತು ಎಂದು ವರದಿ ವಿವರಿಸಿದೆ.
ಈ ಹಿನ್ನೆಲೆಯಲ್ಲಿ ನಟ ಅಲ್ಲು ಅರ್ಜುನ್ ಅವರು ಹೈದರಾಬಾದ್ ನಲ್ಲಿರುವ ಚಿಕ್ಕಡಪಲ್ಲಿ ಪೊಲೀಸ್ ಠಾಣೆಗೆ ಹಾಜರಾಗಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಸಂಧ್ಯಾ ಥಿಯೇಟರ್ ನಲ್ಲಿ ಪುಷ್ಪ 2 ಸಿನಿಮಾ ಪ್ರದರ್ಶನದ ವೇಳೆ ಸಂಭವಿಸಿದ್ದ ಕಾಲ್ತುಳಿತ ಘಟನೆಯಲ್ಲಿ ಮಹಿಳೆಯೊಬ್ಬರು ಸಾವ*ನ್ನಪ್ಪಿದ್ದು, ಆಕೆಯ ಪುತ್ರ ಗಾಯಗೊಂಡಿದ್ದ.
ಇದಕ್ಕೂ ಮೊದಲು ನಟ ಅಲ್ಲು ಅರ್ಜುನ್ ಅವರು, ನಾನು ತನಿಖೆಗೆ ಸಂಪೂರ್ಣವಾಗಿ ಸಹಕರಿಸುವುದಾಗಿ ತಿಳಿಸಿದ್ದರು. ಆದರೆ ಅಂದು ಥಿಯೇಟರ್ ನಲ್ಲಿ ಸಂಭವಿಸಿದ್ದ ಘಟನೆಯ ವಿಡಿಯೋವನ್ನು ಪೊಲೀಸ್ ಕಮಿಷನರ್ ಸಿ.ವಿ.ಆನಂದ್ ಬಿಡುಗಡೆಗೊಳಿಸಿದ ನಂತರ ನಟ ಅಲ್ಲು ಅರ್ಜುನ್ ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿತ್ತು.
#WATCH | Telangana: Actor Allu Arjun reaches Chikkadpally police station in Hyderabad to appear before the police in connection with the Sandhya theatre incident. pic.twitter.com/EjTvyN9eTi
— ANI (@ANI) December 24, 2024
ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಹಿಳೆಯ ಕುಟುಂಬಸ್ಥರು ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ನಟ ಅಲ್ಲು ಅರ್ಜುನ್, ಅವರ ಭದ್ರತಾ ಸಿಬಂದಿಗಳು ಹಾಗೂ ಥಿಯೇಟರ್ ಮಾಲೀಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯಡಿ ವಿವಿಧ ಕಲಂಗಳ ಪ್ರಕಾರ ದೂರು ದಾಖಲಿಸಿದ್ದರು.
ಡಿಸೆಂಬರ್ 11ರಂದು ನಡೆದ ಹೈಡ್ರಾಮಾದಲ್ಲಿ ನಗರ ಪೊಲೀಸರು ಮಹಿಳೆಯ ಸಾವಿನ ಪ್ರಕರಣದ ಸಂಬಂಧ ನಟ ಅಲ್ಲು ಅರ್ಜುನ್ ಅವರ ಮನೆಗೆ ದಾಳಿ ನಡೆಸಿ ಬಂಧಿಸಿದ್ದರು. ಆದರೆ ಅದೇ ದಿನ ತೆಲಂಗಾಣ ಹೈಕೋರ್ಟ್ ಅಲ್ಲು ಅರ್ಜುನ್ ಗೆ ನಾಲ್ಕು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ನಂತರ ಡಿಸೆಂಬರ್ 14ರ ಬೆಳಗ್ಗೆ ಅಲ್ಲು ಅರ್ಜುನ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tollywood: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್ ಬೌನ್ಸರ್ ಬಂಧನ
Sukumar: ಸಿನಿಮಾರಂಗಕ್ಕೆ ಸುಕುಮಾರ್ ಗುಡ್ ಬೈ?; ಸುಳಿವು ಕೊಟ್ಟ ʼಪುಷ್ಪʼ ಡೈರೆಕ್ಟರ್
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್
Belthangady: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಬಲಿಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.