ಮತ್ತಷ್ಟು ನಿರೀಕ್ಷೆ ಹುಟ್ಟಿಸಿದ…ಕೆಜಿಎಫ್ ಚಾಪ್ಟರ್-2, ಡಬ್ಬಿಂಗ್ ಕಾರ್ಯ ಪೂರ್ಣಗೊಳಿಸಿದ ಅಧೀರ
ಇದೀಗ ಸಿನಿಮಾ ಬಿಡುಗಡೆಯಾಗೋದು ಮಾತ್ರ ಬಾಕಿ ಎಂದು ಬರೆದುಕೊಂಡಿದ್ದಾರೆ.
Team Udayavani, Dec 7, 2021, 5:32 PM IST
ಮುಂಬಯಿ: 2022ನೇ ಸಾಲಿನ ಬಹುನಿರೀಕ್ಷಿತ, ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ ನಟಿಸಿರುವ ಕೆಜಿಎಫ್ ಚಾಪ್ಟರ್ -2 ಚಿತ್ರದ ಡಬ್ಬಿಂಗ್ ಕಾರ್ಯ ಮುಕ್ತಾಯಗೊಂಡಿದೆ. ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಚಾಪ್ಟರ್ 2ನಲ್ಲಿ ಅಧೀರನ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಬಾಲಿವುಡ್ ಸ್ಟಾರ್ ನಟ ಸಂಜಯ್ ದತ್ ಅವರು ಡಬ್ಬಿಂಗ್ ಕಾರ್ಯ ಪೂರ್ಣಗೊಳಿಸಿರುವುದಾಗಿ ಮಂಗಳವಾರ(ಡಿಸೆಂಬರ್ 07)ಇನ್ಸ್ ಸ್ಟಾಗ್ರಾಮ್ ನಲ್ಲಿ ವಿಷಯ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ:ಒಮಿಕ್ರಾನ್ ಅಪಾಯಕಾರಿಯಲ್ಲ: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 887 ಅಂಕ ಜಿಗಿತ, ನಿಫ್ಟಿ ಟಾಪ್
ಕೆಜಿಎಫ್ ಚಾಪ್ಟರ್ 2ರಲ್ಲಿನ ಡಬ್ಬಿಂಗ್ ಅವಧಿಯಲ್ಲಿನ ಕೆಲವು ಫೋಟೋಗಳನ್ನು ಸಂಜಯ್ ದತ್ ಇನ್ಸ್ ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದು, ಸಾಹಸದೊಂದಿಗೆ ಮತ್ತೆ ಮರಳಿದ ಅಧೀರ, ಕೆಜಿಎಫ್ ಚಾಪ್ಟರ್ 2ರ ಡಬ್ಬಿಂಗ್ ಸೆಷನ್ಸ್ ಮುಕ್ತಾಯಗೊಂಡಿದೆ. ಇದೀಗ ಸಿನಿಮಾ ಬಿಡುಗಡೆಯಾಗೋದು ಮಾತ್ರ ಬಾಕಿ ಎಂದು ಬರೆದುಕೊಂಡಿದ್ದಾರೆ.
ಕೆಜಿಎಫ್ ಚಾಪ್ಟರ್ 1 ಚಿತ್ರರಂಗದಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಿದ್ದು, ಇದೀಗ ಕೆಜಿಎಫ್ ಚಾಪ್ಟರ್ 2 ಸಿನಿಮಾ 2022ರ ಏಪ್ರಿಲ್ 14ರಂದು ವಿಶ್ವಾದ್ಯಂತ ತೆರೆ ಕಾಣಲಿದೆ. ಈ ನಿಟ್ಟಿನಲ್ಲಿ ಕೆಜಿಎಫ್ ಚಾಪ್ಟರ್ 2 ಸಿನಿಪ್ರಿಯರಲ್ಲಿ ಮತ್ತಷ್ಟು ಕುತೂಹಲ ಕೆರಳಿಸಿದೆ.
#Adheera is back ⚔
Thank you @duttsanjay sir.
See you all on April 14th 2022 on the big screens? #KGFChapter2 pic.twitter.com/0labcZ5kL3— Prashanth Neel (@prashanth_neel) December 7, 2021
ಈ ಮೊದಲೇ ನಿರ್ಧರಿಸಿದಂತೆ ಕೆಜಿಎಫ್ ಚಾಪ್ಟರ್ 2 ಸಿನಿಮಾ ಈ ವರ್ಷ ಜುಲೈ 16ರಂದು ಬಿಡುಗಡೆಯಾಗಬೇಕಿತ್ತು. ಆದರೆ ಕೋವಿಡ್ ಎರಡನೇ ಅಲೆಯ ಹಿನ್ನೆಲೆಯಲ್ಲಿ ಸಿನಿಮಾ ಶೂಟಿಂಗ್ ವಿಳಂಬವಾದ ಹಿನ್ನೆಲೆಯಲ್ಲಿ ಬಿಡುಗಡೆ ದಿನಾಂಕ ಮುಂದೂಡಿಕೆಯಾಗಿತ್ತು. ಇದೀಗ ಮುಂದಿನ ವರ್ಷ ಏಪ್ರಿಲ್ 14ರವರೆಗೆ ರಾಕಿ ಭಾಯ್ ವರ್ಸಸ್ ಅಧೀರನ ಕಾಳಗ ನೋಡಲು ಕಾಯಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.