ಸಂಕೇಶ್ವರದಲ್ಲಿ ಭೀಕರ ಅಪಘಾತ: ಒಂದೇ ಬೈಕ್ ನಲ್ಲಿದ್ದ ನಾಲ್ವರು ಯುವಕರ ಸಾವು
Team Udayavani, Feb 25, 2022, 11:50 AM IST
ಸಂಕೇಶ್ವರ : ನಗರದ ಹೊರ ವಲಯದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಮೃಪಟ್ಟಿರುವ ಘಟನೆ ನಡೆದಿದೆ.
ರಾತ್ರಿ 11.30 ರ ವೇಳೆ ನಡೆದ ಭೀಕರ ಅವಘಡದಲ್ಲಿ ಒಂದೇ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ನೇಹಿತರು ಸ್ಥಳದಲ್ಲಿಯೇ ಅಸುನಿಗಿದರೆ, ಇನ್ನೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮೃತ ದುರ್ದೈವಿಗಳು ಬಸವರಾಜ ಮಾಳಿ(26), ಪ್ರವೀಣ ಸನದಿ(29), ಮೆಹಬೂಬ ಸೆಗಡಿ(21), ಫರಾಣ ಜಮಾದಾರ (21) ಎನ್ನುವವರಾಗಿದ್ದಾರೆ.
ತಡರಾತ್ರಿ ನಾಲ್ವರು ಗೆಳೆಯರು ದ್ವಿಚಕ್ರ ವಾಹನದಲ್ಲಿ ಕಣಗಲಾ ಕಡೆಯಿಂದ ಸಂಕೇಶ್ವರ ಕಡೆಗೆ ಬರುತ್ತಿರುವಾಗ ಸಂಕೇಶ್ವರ ನಗರದ ಹೊರ ವಲಯದ ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಆವಘಡ ನಡೆದಿದೆ. ಯಾವ ವಾಹನ ಢಿಕ್ಕಿಯಾಗಿ ಅವಘಡ ನಡೆದಿದೆ ಎನ್ನುವ ಕುರಿತು ಸ್ಪಷ್ಟ ಚಿತ್ರಣ ಲಭ್ಯವಾಗಿಲ್ಲ. ಸ್ಥಳದಲ್ಲಿ ಯುವಕರು ಪ್ರಯಾಣಿಸುತ್ತಿದ್ದ ಬೈಕ್ ಜಖಂ ಆಗಿ ಬಿದ್ದಿರುವುದು ಕಂಡು ಬಂದಿದೆ.
ಘಟನಾ ಸ್ಥಳಕ್ಕೆ ಸಂಕೇಶ್ವರ ಸಿಪಿಐ ಪ್ರಹ್ಲಾದ ಚನ್ನಗಿರಿ, ಪಿಎಸ್.ಐ ಗಣಪತಿ ಕೊಂಗನೊಳಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತಪಟ್ಟಿರುವ ನಾಲ್ವರಲ್ಲಿ ಬಸವರಾಜ, ಪ್ರವೀಣ, ಮೆಹಬೂಬ್, ಈ ಮೂವರು ಮೂವರು ಸಂಕೇಶ್ವರದ ಅನಂತ ವಿದ್ಯಾ ನಗರದ ನಿವಾಸಿಗಳಾಗಿದ್ದು,ಇನ್ನೋರ್ವ ಫರಾಣ ಈತ ಬೆಳಗಾವಿಯ ಖಂಜರ್ ಗಲ್ಲಿಯ ಯುವಕನಾಗಿದ್ದಾನೆ ಎಂದು ತಿಳಿದು ಬಂದಿದೆ.
ಸಂಕೇಶ್ವರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.