ಸಂಕೇಶ್ವರ: ಮಹಿಳೆಯ ಶೂಟೌಟ್ ಪ್ರಕರಣ: ಪುರಸಭೆ ಸದಸ್ಯನ ಬಂಧನ
Team Udayavani, Jan 20, 2022, 2:27 PM IST
ಸಂಕೇಶ್ವರ: ಸಂಕೇಶ್ವರದ ಒಬ್ಬಂಟಿ ಮಹಿಳೆ ಇದ್ದ ಮನೆಗೆ ನುಗ್ಗಿ ಗುಂಡಿಕ್ಕಿ ಹತ್ಯೆ ಮಾಡಿರುವ ಪ್ರಕರಣದಲ್ಲಿ ಸಂಕೇಶ್ವರ ಪುರಸಭೆ ಸದಸ್ಯ ಉಮೇಶ ಕಾಂಬಳೆ ಎಂಬಾತನನ್ನು ಸಂಕೇಶ್ವರ ಪೊಲೀಸರು ಬಂಧಿಸಿದ್ದಾರೆ.
ಜ.16ರಂದು ಸಂಕೇಶ್ವರ ನಗರದ ಸಂಸುದ್ದಿ ಗಲ್ಲಿ ಕ್ರಾಸ್ ಹತ್ತಿರದ ಮನೆಯಲ್ಲಿದ್ದ ಶೈಲಜಾ ಸುಭೇದಾರ ಇವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹಾಗೂ ಹೆಚ್ಚುವರಿ ಎಸ್.ಪಿ ಮಹಾಲಿಂಗ ನಂದಗಾವಿ ಅವರು ಈ ಹತ್ಯೆಯ ತನಿಖೆಯ ಕುರಿತು ಯಮಕನಮರಡಿ ಸಿಪಿಐ ರಮೇಶ ಛಾಯಗೋಳ ಹಾಗೂ ಸಂಕೇಶ್ವರ ಪಿಎಸ್.ಐ ಗಣಪತಿ ಕೊಂಗನೊಳಿ ಅವರ ನೇತ್ರತ್ವದಲ್ಲಿ ತನಿಖಾ ತಂಡವನ್ನು ರಚನೆ ಮಾಡಿತ್ತು.
ಈ ತನಿಖಾ ತಂಡವು ಈ ಹತ್ಯೆಯ ಜಾಡು ಹಿಡಿದು ಹೋದಾಗ ಇದೊಂದು ಹಣಕಾಶಿನ ವ್ಯವಹಾರಕ್ಕೆ ಸಂಬಂಧಿಸಿದ ಹತ್ಯೆ ಎಂಬುವದು ತನಿಖೆಯಿಂದ ಹೊರಬಂದಿದೆ.
ಶೈಲಜಾ ಸುಭೇದಾರ ಹಾಗೂ ಸಂಕೇಶ್ವರ ಪುರಸಭೆ ಸದಸ್ಯ ಉಮೇಶ ಕಾಂಬಳೆ ಅವರ ನಡುವೆ ಹಣಕಾಶಿನ ವ್ಯವಹಾರದ ಇದ್ದ ಹಿನ್ನೆಲೆಯಲ್ಲಿ ಮನಸ್ತಾಪಗೊಂಡಿದ್ದ ಉಮೇಶ ಕಾಂಬಳೆ, ಶೈಲಜಾ ಮನೆಗೆ ನುಗ್ಗಿ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ.
ಈ ಹತ್ಯೆಗೆ ಕಂಟ್ರಿ ಪಿಸ್ತೂಲ್ ಬಳಸಿ ಶೈಲಜಾಳನ್ನು, ಉಮೇಶ ಕಾಂಬಳೆ ಹತ್ಯೆ ಮಾಡಿದ್ದಾನೆ ಎಂದು ತನಿಖೆ ವೇಳೆಯಲ್ಲಿ ಬಹಿರಂಗಗೊಂಡಿದೆ. ತನಿಖೆ ವೇಳೆಯಲ್ಲಿ ಕಂಟ್ರಿ ಪಿಸ್ತೂಲ್ ಸೇರಿದಂತೆ ಕೆಲವು ಮಹತ್ವದ ದಾಖಲೆಗಳನ್ನು ಪೊಲೀಸ್ ತನಿಖಾ ತಂಡ ವಶಕ್ಕೆ ಪಡೆದಿದೆ.
ಈ ಕೊಲೆ ಪ್ರಕರಣವನ್ನು ಕೇವಲ ಮೂರು ದಿನಗಳಲ್ಲಿ ಪೊಲೀಸ್ ತಂಡ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ. ಸದ್ಯ ಪೊಲೀಸ್ ವಶದಲ್ಲಿರುವ ಆರೋಪಿಯನ್ನು ಗುರುವಾರ ಪೊಲೀಸರು ನ್ಯಾಯಾಲಯದ ಮುಂದೆ ಹಾಜರು ಪಡಿಸುವ ಸಾದ್ಯತೆ ಇದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್ ನ್ಯೂಸ್ ಕೊಟ್ಟ ಚಿತ್ರತಂಡ
BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್; ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.