ಸಾಸ್ತಾನ ‘ರುಚಿ’ಸಂಸ್ಥೆಯಲ್ಲಿ ಓವನ್ ಸ್ಪೋಟಗೊಂಡು ಮಾಲೀಕ ರೋಬರ್ಟ್ ಪುಟಾರ್ಡೊ ಸಾವು
Team Udayavani, Aug 10, 2020, 12:19 PM IST
ಕೋಟ: ಸಾಸ್ತಾನ ಸಮೀಪ ಐರೋಡಿ ಅಲ್ಸೆಬೆಟ್ಟು ರಸ್ತೆಯಲ್ಲಿರುವ ಬೇಕರಿ ಉತ್ಪನ್ನಗಳ ತಯಾರಿಕಾ ಸಂಸ್ಥೆ ‘ರುಚಿ’ಯಲ್ಲಿ ಓವನ್ ಸ್ಪೋಟಗೊಂಡು ಸಂಸ್ಥೆಯ ಮಾಲೀಕ, ಉಡುಪಿ ಜಿಲ್ಲಾ ಬೇಕರಿ ಹಾಗೂ ಖ್ಯಾದ ತಿನಿಸುಗಳ ತಯಾರಕರ ಸಂಘದ ಜಿಲ್ಲಾಧ್ಯಕ್ಷ ರೋಬರ್ಟ್ ಪುಟಾರ್ಡೊ ಸ್ಥಳದ್ಲಲೇ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ.
ಎಂದಿನಂತೆ ಬೆಳಗ್ಗೆ 8ಗಂಟೆಯ ಸುಮಾರಿಗೆ ಪ್ಯಾಕ್ಟರಿಯಲ್ಲಿ ಕೆಲಸ ಆರಂಭಗೊಂಡಿದ್ದು ಓವನ್ ಚಾಲನೆ ಮಾಡಲು ಪುಟಾರ್ಡೊ ಅವರು ಪ್ರಯತ್ನಿಸುತ್ತಿದ್ದಾಗ ಸಿಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂದರ್ಭ ನಾಲ್ವರು ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು ಓರ್ವನಿಗೆ ಸಣ್ಣ ಗಾಯಗಳಾಗಿದೆ. ಸ್ಪೋಟದ ತೀವೃತೆಗೆ ತಲೆ ಛಿದ್ರಗೊಂಡಿದೆ. ಗ್ಯಾಸ್ ಲೀಕ್ ನಿಂದಾಗಿ ದುರಂತ ಸಂಭವಿಸಿದೆ ಎನ್ನಲಾಗಿದೆ. ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಸುಮಾರು ಮೂರು ದಶಕಗಳಿಂದ ಕಾರ್ಯನಿರ್ವಹಿಸುತ್ತಿದ್ದ ರುಚಿ ಸಂಸ್ಥೆ ಉಡುಪಿ, ಮಂಗಳೂರು, ಉತ್ತರಕನ್ನಡದಲ್ಲಿ ಬಹಳಷ್ಟು ಹೆಸರುಗಳಿಸಿತ್ತು ಹಾಗೂ ನೂರಾರು ಮಂದಿ ಕಾರ್ಮಿಕರಿಗೆ ಉದ್ಯೋಗವನ್ನು ನೀಡಿತ್ತು. ಸಂಸ್ಥೆಯ ಏಳಿಗೆಗೆ ಪುಟಾರ್ಡೊ ಅವರು ಸಾಕಷ್ಟು ಶ್ರಮಿಸಿದ್ದರು.
ಸ್ಥಳಕ್ಕೆ ಉಡುಪಿ ಡಿವೈಎಸ್ಪಿ ಕುಮಾರಚಂದ್ರ, ಬ್ರಹ್ಮಾವರ ವೃತ್ತ ನಿರೀಕ್ಷಕ ಆನಂತಪದ್ಮನಾಭ ಹಾಗೂ ಕೋಟ ಠಾಣೆಯ ಉಪನಿರೀಕ್ಷಕ ಸಂತೋಷ್ ಆಗಮಿಸಿ ತನಿಖೆ ನಡೆಸಿ ಪ್ರಕರಣ ದಾಖಲಿಸಿಕೊಂಡರು. ಅಗ್ನಿಶಾಮಕ ದಳ, ಮೆಸ್ಕಾಂ ಸಿಬಂದಿ, ಜೀವನ್ ಮಿತ್ರ ನಾಗರಾಜ್ ಪುತ್ರನ್ ಹಾಗೂ ಸ್ಥಳೀಯರು ಸಹಕರಿಸಿದರು. ಘಟನಾ ಸ್ಥಳದಲ್ಲಿ ನೂರಾರು ಮಂದಿ ಜಮಾಯಿಸಿ ಘಟನೆ ಕುರಿತು ಖೇದ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.