ಗಂಗೂಲಿಗೆ ಆ್ಯಂಜಿಯೊಪ್ಲಾಸ್ಟಿ, ಮತ್ತೆರಡು ಸ್ಟೆಂಟ್ ಅಳವಡಿಕೆ
Team Udayavani, Jan 29, 2021, 1:00 AM IST
ಕೋಲ್ಕತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಗುರುವಾರ ಮತ್ತೂಂದು ಆ್ಯಂಜಿಯೋಪ್ಲಾಸ್ಟಿ ನಡೆಸಿ, ಕಟ್ಟಿ ಕೊಂಡಿದ್ದ ಮತ್ತೆರಡು ಹೃದಯನಾಳಗಳಿಗೆ ಸ್ಟೆಂಟ್ ಅಳವಡಿಸಲಾಯಿತು.
ಈ ತಿಂಗಳ ಆರಂಭದಲ್ಲಿ ಲಘು ಹೃದಯಾ ಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸೌರವ್ ಗಂಗೂಲಿಗೆ ಬುಧವಾರ ಮತ್ತೆ ಎದೆನೋವು ಕಾಣಿಸಿಕೊಂಡಿತ್ತು. ಈ ಬಾರಿ ಅವರನ್ನು ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಗೂಲಿ ಆರೋಗ್ಯ ಸ್ಥಿರವಾಗಿದೆ ಎಂದು ಶಸ್ತ್ರಚಿಕಿತ್ಸೆಯ ಬಳಿಕ ವೈದ್ಯರು ತಿಳಿಸಿದ್ದಾರೆ.
ಜನವರಿ ಮೊದಲ ವಾರ ವುಡ್ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಾಗಿದ್ದಾಗ ಅವರಿಗೆ ಆ್ಯಂಜಿಯೋಪ್ಲಾಸ್ಟಿ ನಡೆಸಿ ಮೊದಲ ಸ್ಟೆಂಟ್ ಅಳವಡಿಸಲಾಗಿತ್ತು. ಆಗ ಐದು ದಿನ ಗಂಗೂಲಿ ಆಸ್ಪತ್ರೆಯಲ್ಲಿದ್ದರು. ಇನ್ನೂ ಎರಡು ನಾಳಗಳಿಗೆ ಮುಂದಿನ ಮೂರು ವಾರಗಳೊಳಗೆ ಸ್ಟೆಂಟ್ ಅಳವಡಿಸಲಾಗಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka sports meet: ಈಜು ಸ್ಪರ್ಧೆ ಆರಂಭ; ದಕ್ಷಿಣ ಕನ್ನಡ ಮೇಲುಗೈ
Under-19 Women’s T20 World Cup: ವೈಷ್ಣವಿ ಹ್ಯಾಟ್ರಿಕ್, 5 ರನ್ನಿಗೆ 5 ವಿಕೆಟ್ ದಾಖಲೆ
Australia Open: 50ನೇ ಬಾರಿಗೆ ಗ್ರ್ಯಾನ್ಸ್ಲಾಮ್ ಸೆಮೀಸ್ಗೇರಿದ ಜೋಕೋ
Women’s ODI rankings: ಅಗ್ರಸ್ಥಾನಕ್ಕೆ ಮಂಧನಾ ಸನಿಹ
Rinku Singh: ತಂದೆಗೆ ಸೂಪರ್ ಬೈಕ್ ಗಿಫ್ಟ್ ನೀಡಿದ ರಿಂಕು ಸಿಂಗ್… ಬೆಲೆ ಎಷ್ಟು ಗೊತ್ತಾ?