ಪಲಾಯನಗೈದ ಆರ್ಥಿಕ ಅಪರಾಧಿ: ವಿಜಯ್ ಮಲ್ಯ ಅರ್ಜಿ ವಜಾಗೊಳಿಸಿದ ಸುಪ್ರೀಂ
Team Udayavani, Mar 3, 2023, 4:33 PM IST
ನವದೆಹಲಿ: ತನ್ನನ್ನು ”ಪರಾರಿಯಾದ ಆರ್ಥಿಕ ಅಪರಾಧಿ“ ಎಂದು ಪರಿಗಣಿಸುವುದು ಮತ್ತು ತನ್ನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಮುಂಬೈ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ಪ್ರಶ್ನಿಸಿ ಸಂಕಷ್ಟದಲ್ಲಿರುವ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಈ ವಿಷಯದಲ್ಲಿ ಅರ್ಜಿದಾರರಿಂದ ಯಾವುದೇ ಸೂಚನೆಗಳನ್ನು ಪಡೆಯುತ್ತಿಲ್ಲ ಎಂದು ಮಲ್ಯ ಪರ ವಕೀಲರು ಸಲ್ಲಿಸಿದ ನಂತರ ಸುಪ್ರೀಂ ಕೋರ್ಟ್ ನಾನ್ ಪ್ರಾಸಿಕ್ಯೂಷನ್ ಅರ್ಜಿಯನ್ನು ವಜಾಗೊಳಿಸಿದೆ.
ಅರ್ಜಿದಾರರ ಪರ ವಕೀಲರಿಗೆ ಯಾವುದೇ ಸೂಚನೆಗಳನ್ನು ನೀಡುತ್ತಿಲ್ಲ ಎಂದು ಅರ್ಜಿದಾರರ ಪರ ವಕೀಲರು ಹೇಳಿದ್ದಾರೆ. ಈ ಹೇಳಿಕೆಯನ್ನು ಪರಿಗಣಿಸಿ, ಪ್ರಾಸಿಕ್ಯೂಷನ್ ಇಲ್ಲದ ಕಾರಣ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ರಾಜೇಶ್ ಬಿಂದಾಲ್ ಅವರ ಪೀಠ ಹೇಳಿದೆ.
ಮಲ್ಯ ಅವರ ಮನವಿಯ ಮೇರೆಗೆ ಡಿಸೆಂಬರ್ 7, 2018 ರಂದು ಜಾರಿ ನಿರ್ದೇಶನಾಲಯಕ್ಕೆ (ಇಡಿ) ನೋಟಿಸ್ ಜಾರಿಗೊಳಿಸಿದ್ದ ಸುಪ್ರೀಂ ಕೋರ್ಟ್, ಮುಂಬೈನ ವಿಶೇಷ ಪ್ರಿವೆನ್ಶನ್ ಆಫ್ ಮನಿ ಲಾಂಡರಿಂಗ್ ಆಕ್ಟ್ (ಪಿಎಂಎಲ್‌ಎ) ನ್ಯಾಯಾಲಯದ ಮುಂದೆ ತನಿಖಾ ಸಂಸ್ಥೆಯ ಅರ್ಜಿಯ ವಿಚಾರಣೆಯನ್ನು ತಡೆಯಲು ನಿರಾಕರಿಸಿತ್ತು. ಪ್ಯುಗಿಟಿವ್ ಆರ್ಥಿಕ ಅಪರಾಧಿಗಳ ಕಾಯಿದೆ, 2018 ರ ಅಡಿಯಲ್ಲಿ ಅವರಿಗೆ ‘ಪ್ಯುಗಿಟಿವ್’ ಟ್ಯಾಗ್ ನೀಡಲಾಗಿತ್ತು.
ಜನವರಿ 5, 2019 ರಂದು, ಮುಂಬೈ ವಿಶೇಷ ನ್ಯಾಯಾಲಯವು ಮಲ್ಯ ಅವರನ್ನು ಈ ಕಾಯ್ದೆಯಡಿ ‘ಪರಾರಿ’ ಎಂದು ಘೋಷಿಸಿತ್ತು. ಕಾಯಿದೆಯ ನಿಬಂಧನೆಗಳ ಅಡಿಯಲ್ಲಿ, ಒಬ್ಬ ವ್ಯಕ್ತಿಯನ್ನು ಪರಾರಿಯಾದ ಆರ್ಥಿಕ ಅಪರಾಧಿ ಎಂದು ಘೋಷಿಸಿದ ನಂತರ, ಪ್ರಾಸಿಕ್ಯೂಟಿಂಗ್ ಏಜೆನ್ಸಿಯು ಆ ವ್ಯಕ್ತಿಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಅಧಿಕಾರವನ್ನು ಹೊಂದಿರುತ್ತದೆ.
ಮಾರ್ಚ್ 2016 ರಲ್ಲಿ ಲಂಡನ್ ಗೆ ಪಲಾಯನ ಮಾಡಿದ ಮಲ್ಯ, ಹಲವಾರು ಬ್ಯಾಂಕ್‌ಗಳಿಂದ ಕಿಂಗ್‌ಫಿಶರ್ ಏರ್‌ಲೈನ್ಸ್ (ಕೆಎಫ್‌ಎ) ಗೆ ಸಾಲ ಪಡೆದ 9,000 ಕೋಟಿ ರೂ. ಮರುಪಾವತಿಸದ ಕಾರಣ ‘ಆರ್ಥಿಕ ಅಪರಾಧಿ” ಎಂದು ಘೋಷಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.