ಕೋವಿಡ್ ಓಡಿಸೋಣ… ನಮ್ಮ ವಿದ್ಯಾರ್ಥಿಗಳ ಸುರಕ್ಷತೆಯಲ್ಲಿ ಓದಿಸೋಣ : ಸುರೇಶ್ ಕುಮಾರ್
Team Udayavani, Dec 23, 2020, 6:12 PM IST
ಬೆಂಗಳೂರು : ಈಗಾಗಲೇ ರಾಜ್ಯ ಸರಕಾರ ನಿರ್ಧರಿಸಿದಂತೆ ಜನವರಿ 1 ರಿಂದಲೇ ಶಾಲಾ ಕಾಲೇಜುಗಳನ್ನು ಆರಂಭಿಸಲು ಎಲ್ಲಾ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಸುರೇಶ ಕುಮಾರ್ ಹೇಳಿದ್ದಾರೆ.
ಶಾಲಾರಂಭದ ಕುರಿತು ಕೋವಿಡ್ ರಾಜ್ಯ ತಾಂತ್ರಿಕ ಸಲಹಾ ಸಮಿತಿ ಮಾರ್ಗದರ್ಶನದೊಂದಿಗೆ ಬುಧವಾರ ಬೆಳಗ್ಗೆ ರಾಜ್ಯದ ಎಲ್ಲ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಡಿಡಿಪಿಐ ಮತ್ತು ಬಿಇಒಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಕೈಗೊಳ್ಳಬೇಕಾದ ಕ್ರಮಗಳನ್ನು ವಿವರಿಸಿ ಅವರಿಂದ ಸಲಹೆಗಳನ್ನು ಪಡೆದುಕೊಂಡು ಮಾತನಾಡಿದ ಸಚಿವರು ಮಹಾಮಾರಿ ಕರೋನಾ ಓಡಿಸೋಣ… ನಮ್ಮ ವಿದ್ಯಾರ್ಥಿಗಳ ಸುರಕ್ಷತೆಯಲ್ಲಿ ಓದಿಸೋಣ..’ ಎಂಬ ಧ್ಯೇಯದೊಂದಿಗೆ ಸುರಕ್ಷಿತ ವಾತಾವರಣದಲ್ಲಿ ಜ. 1 ರಿಂದ ಶಾಲೆಗಳನ್ನು ಆರಂಭಿಸಲು ವಿವಿಧ ಇಲಾಖೆಗಳ ಸಹಯೋಗದಲ್ಲಿ ಶಿಕ್ಷಣ ಇಲಾಖೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು.
ಶಾಲಾರಂಭದ ಬಳಿಕ ಎಷ್ಟೇ ಮಕ್ಕಳು ಶಾಲೆಗೆ ಬರಲಿ ಅವರು ಸುರಕ್ಷಿತವಾಗಿರುವಂತೆ ಎಲ್ಲ ಉಪಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತಗಳು ಸಿದ್ಧತೆ ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ:ಬೀದರ್ ಗೆ ಆಗಮಿಸಿದ ಬ್ರಿಟನ್ ಯಾತ್ರಾರ್ಥಿ ಮೇಲೆ ನಿಗಾ : ಜಿಲ್ಲಾಧಿಕಾರಿ ರಾಮಚಂದ್ರನ್ ಆರ್
ಭರವಸೆ ಮೂಡಿಸುವ ಕೆಲಸಗಳಾಗಲಿ
ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳು ಸುರಕ್ಷಿತ ವಾತಾವರಣದಲ್ಲಿ ಆರಂಭಗೊಂಡು ತರಗತಿಗಳು ಸಾಮಾಜಿಕ ಅಂತರದಲ್ಲಿ ನಡೆಯುತ್ತವೆ ಎಂಬ ಕುರಿತು ಪೋಷಕರಲ್ಲಿ ಮತ್ತು ಸಮಾಜದಲ್ಲಿ ಭರವಸೆ ಮೂಡಿಸುವ ಪ್ರಯತ್ನಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಚಿವರು ಸಲಹೆ ನೀಡಿದರು.
ಡಿ. 24ರ ಗುರುವಾರ ಬೆಳಗ್ಗೆ ಆಯಾ ಜಿಲ್ಲಾ ಡಿಡಿಪಿಐ ಮತ್ತು ಡಿಡಿಪಿಯುಗಳು ತಮ್ಮ ವ್ಯಾಪ್ತಿಯ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳು ಮತ್ತು ಪಿಯು ಕಾಲೇಜುಗಳ ಮುಖ್ಯಸ್ಥರ ಸಭೆ ನಡೆಸಿ 10 ಮತ್ತು 12ನೇ ತರಗತಿಗಳ ಮತ್ತು 6ರಿಂದ 9ನೇ ತರಗತಿಗಳ ವಿದ್ಯಾಗಮ ತರಗತಿಗಳನ್ನು ಸುರಕ್ಷಿತ ವಾತಾವರಣದಲ್ಲಿ ನಡೆಸುವ ಮತ್ತು ಎಸ್ಒಪಿಗಳನ್ನು ಪಾಲಿಸುವ ಸಂಬಂಧದಲ್ಲಿ ಮಾರ್ಗದರ್ಶನ ನೀಡಲಿದ್ದಾರೆ ಎಂದು ಶಿಕ್ಷಣ ಸಚಿವರು ತಿಳಿಸಿದರು.
ಪ್ರತಿಷ್ಠೆಯ ವಿಷಯವಲ್ಲ:
ಶಾಲಾರಂಭ ಸರ್ಕಾರಕ್ಕೆ ಬದ್ಧತೆಯ ವಿಷಯ ಮಾತ್ರವೇ ಆಗಿದ್ದು, ಅದು ಪ್ರತಿಷ್ಠೆಯ ವಿಷಯವಾಗಿಲ್ಲ ಎಂದು ಸ್ಪಷ್ಟ ಪಡಿಸಿದ ಸಚಿವರು, ಇನ್ನೊಂದು ವಾರದಲ್ಲಿ ಶಾಲಾ ತರಗತಿಗಳ ಪೀರಿಯಡ್ ಸಮಯ, ಪಠ್ಯಕ್ರಮ ನಿಗದಿ ಮಾಡಲಾಗುತ್ತದೆ ಮತ್ತು 10 ಮತ್ತು 12ನೇ ತರಗತಿಗಳ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.