School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಒತ್ತಾಯ
Team Udayavani, Nov 22, 2024, 5:28 PM IST
ಕಲಬುರಗಿ: ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನಗಳ ಕಾಲ ಮೊಟ್ಟೆ, ಬಾಳೆಹಣ್ಣು ಹಾಗೂ ಶೇಂಗಾ ಚಿಕ್ಕಿ ವಿತರಿಸುವ ಜವಾಬ್ದಾರಿ ಮುಖ್ಯ ಶಿಕ್ಷಕರ ಮತ್ತು ಶಿಕ್ಷಕರನ್ನು ಬಿಡುಗಡೆಗೊಳಿಸಿ ಯಾವುದಾದರೂ ಸಂಘ- ಸಂಸ್ಥೆಗೆ ವಹಿಸಿಕೊಡುವಂತೆ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಕೇಂದ್ರ ಹಾಗೂ ನಗರ ಪ್ರದೇಶ ಹೊರತುಪಡಿಸಿದರೆ ಗ್ರಾಮೀಣ ಭಾಗದಲ್ಲಿ ಪ್ರತಿನಿತ್ಯ ಅಗತ್ಯ ತಕ್ಕ ಮೊಟ್ಟೆ, ಬಾಳೆಹಣ್ಣು ಲಭ್ಯವಿರುವುದಿಲ್ಲ. ಹೀಗಾಗಿ ಖರೀದಿ ಮಾಡಿ ಮಕ್ಕಳಿಗೆ ವಿತರಿಸುವುದೇ ಒಂದು ಕಾಯಕವಾಗಿ ಪರಿಣಮಿಸುತ್ತಿದೆ. ಇದರಿಂದ ಶೈಕ್ಷಣಿಕ ಕಾರ್ಯಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತಿದೆ. ಎಲ್ಲಕ್ಕಿಂತ ಮುಖ್ಯವಾಗಿ ಶಿಕ್ಷಕರಿಗೆ ಈ ಜವಾಬ್ದಾರಿ ವಹಿಸುವ ಮುನ್ನ ಯಾರದ್ದೇ ಅಭಿಪ್ರಾಯ ಕೇಳಿಲ್ಲ ಎಂದರು.
ಎಲ್ಲಕ್ಕಿಂತ ಮುಖ್ಯವಾಗಿ ಮೊಟ್ಟೆಗೆ 5 ರೂ. ದರ ನಿಗದಿ ಮಾಡಲಾಗಿದೆ. ಅದೇ ತೆರನಾಗಿ 6 ರೂ. ಗೆ ಎರಡು ಬಾಳೆ ಹಣ್ಣು ಖರೀದಿಗೆ ಲಭ್ಯವಿರುವುದಿಲ್ಲ. ವ್ಯತ್ಯಾಸದ ಮೊತ್ತವನ್ನು ಶಿಕ್ಷಕರೇ ಭರಿಸುವ ಸ್ಥಿತಿ ನಿರ್ಮಾಣವಾಗಿದೆ. ಮೊಟ್ಟೆ, ಬಾಳೆಹಣ್ಣು ದಾಸ್ತಾನು ಮಾಡಲು ಅಗತ್ಯ ವ್ಯವಸ್ಥೆ ಇರೋದಿಲ್ಲ. ಒಂದು ಮೊಟ್ಟೆ ಕೆಟ್ಟರೆ ಪಕ್ಕದ ಮೊಟ್ಟೆ ಕೆಡಲಾರಂಭಿಸುತ್ತದೆ. ಮೊಟ್ಟೆ ಇಂತಿಷ್ಟೆ ಭಾರ ಇರಬೇಕು ಎನ್ನಲಾಗುತ್ತದೆ. ಅದಲ್ಲದೇ ವಿತರಣಾ ಮಾಹಿತಿಯನ್ನು ಅದೇ ದಿನ ಆನ್ಲೈನ್ ಗೆ ದಾಖಲು ಮಾಡಬೇಕು. ಹೀಗೆ ಹತ್ತಾರು ಸಮಸ್ಯೆಗಳು ಶಿಕ್ಷಕರು ಎದುರಿಸುವಂತಾಗಿದೆ. ಆದ್ದರಿಂದ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆಯ ಜವಾಬ್ದಾರಿ ಕಾರ್ಯವನ್ನು ಯಾವುದಾದರೂ ಸಂಘ ಸಂಸ್ಥೆ ಇಲ್ಲವೇ ಶಾಲಾ ಮಕ್ಕಳ ಪೌಷ್ಠಿತಕೆ ಹೆಚ್ಚಿಸುವ ನಿಟ್ಟಿನಲ್ಲಿ1500 ಕೋ.ರೂ ಅನುದಾನ ನೀಡಿರುವ ಅಜಿಂ ಪ್ರೇಮಜಿ ಅವರಿಂದಲೇ ವಿತರಣಾ ವ್ಯವಸ್ಥೆ ಮಾಡಿಕೊಳ್ಳುವಂತೆ ಹೇಳಿದರೂ ಅನುಕೂಲ ಆಗುತ್ತದೆ ಎಂದು ಈ ಸಂದರ್ಭದಲ್ಲಿ ನಮೋಶಿ ವಿವರಣೆ ನೀಡಿದರು.
ಸದನದಲ್ಲಿ ಪ್ರಸ್ತಾಪ
ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣಾ ಕಾರ್ಯದ ಜವಾಬ್ದಾರಿಯನ್ನು ಶಿಕ್ಷಕರಿಗೆ ವಹಿಸದೇ ಅವರನ್ನು ಬಿಡುಗಡೆಗೊಳಿಸಿ ಯಾವುದಾದರೂ ಸಂಘ ಸಂಸ್ಥೆಗೆ ವಹಿಸುವಂತೆ ಬೆಳಗಾವಿ ಅಧಿವೇಶನದಲ್ಲೇ ಪ್ರಸ್ತಾಪಿಸಿ ದೊಡ್ಡ ಮಟ್ಟದಲ್ಲಿ ಹೋರಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ನಮೋಶಿ ತಿಳಿಸಿದರು. ಸರ್ಕಾರಕ್ಕೆ ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಅಭಿವೃದ್ದಿಗೆ ನಿಜವಾದ ಕಾಳಜಿ ಇದ್ದರೆ ಈ ಕೂಡಲೇ ಶಿಕ್ಷಕರಿಗೆ ಮೊಟ್ಟೆ – ಬಾಳೆಹಣ್ಣು ವಿತರಣಾ ಕಾರ್ಯದಿಂದ ವಿಮುಕ್ತಿಗೊಳಿಸಬೇಕೆಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್ನೆಸ್ ಸರ್ಟಿಫಿಕೇಟ್ಗಿನ್ನು ಆರ್ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು
Bantwal: ಸಾಹಿತ್ಯವನ್ನು ಮಕ್ಕಳ ಮನ ಮುಟ್ಟುವಂತೆ ಬೋಧಿಸುವ ಶಿಕ್ಷಕರು ಬೇಕು
Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು
TeamIndia; ಮುಗಿಯಿತಾ ರೋಹಿತ್ ವೃತ್ತಿಜೀವನ? ಮೆಲ್ಬೋರ್ನ್ ಗೆ ಬಂದ ಅಗರ್ಕರ್ ಹೇಳಿದ್ದೇನು?
Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್ ಸ್ಟಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.