ಜನವರಿ ಬಳಿಕವೇ ಶಾಲೆ ? ಸಿಎಂ ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ನಿರ್ಧಾರ
Team Udayavani, Nov 24, 2020, 7:05 AM IST
ಬೆಂಗಳೂರು: ಶಾಲಾರಂಭದ ಕುರಿತು ಮೂಡಿದ್ದ ಗೊಂದಲಗಳಿಗೆ ಕೊನೆಗೂ ತೆರೆಬಿದ್ದಿದೆ. ಕೊರೊನಾ ಎರಡನೇ ಅಲೆ ವ್ಯಾಪಿ ಸುವ ಭೀತಿಯ ಹಿನ್ನೆಲೆಯಲ್ಲಿ ಡಿ. 31ರ ವರೆಗೆ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯುಸಿ ತರಗತಿಗಳನ್ನು ಆರಂಭಿಸುವುದಿಲ್ಲ ಎಂದು ಸರಕಾರ ಸೋಮವಾರ ಘೋಷಿಸಿದೆ.
ಡಿಸೆಂಬರ್ 3ನೇ ವಾರದಲ್ಲಿ ಪರಿಸ್ಥಿತಿ ಅವಲೋಕಿಸಿ ಖಚಿತ ನಿರ್ಧಾರಕ್ಕೆ ಬರಲಿದ್ದು, ಅಲ್ಲಿ ವರೆಗೆ ಆನ್‌ಲೈನ್ ತರಗತಿ ಹಾಗೂ ಸಂವೇದಾ, ಯೂ-ಟ್ಯೂಬ್ ಕ್ಲಾಸ್‌ಗಳು ಮುಂದುವರಿಯಲಿವೆ ಎಂದು ಸರಕಾರ ಹೇಳಿದೆ.
ಶಾಲೆಗಳ ಆರಂಭ ಸಂಬಂಧ ವಿಧಾನಸೌಧದಲ್ಲಿ ಸೋಮವಾರ ಸಿಎಂ ಯಡಿಯೂರಪ್ಪ ಅವರು ಶಿಕ್ಷಣ, ಆರೋಗ್ಯ ಸಹಿತ ವಿವಿಧ
ಇಲಾಖೆಗಳ ಸಭೆ ನಡೆಸಿದರು. ಸಭೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತು ಆರೋಗ್ಯ ಸಚಿವ ಡಾ| ಕೆ.ಸುಧಾಕರ್ ಭಾಗವಹಿಸಿದ್ದರು.
ಸಭೆಯಲ್ಲಿ ಡಿಸೆಂಬರ್ ಅಂತ್ಯದ ವರೆಗೆ ಪ್ರಾಥಮಿಕ, ಪ್ರೌಢಶಾಲೆ, ಪಿಯು ತರಗತಿ ಆರಂಭ ಮಾಡುವುದು ಬೇಡ ಎಂಬ ನಿರ್ಧಾರಕ್ಕೆ ಬರಲಾಯಿತು. ಜತೆಗೆ ಡಿಸೆಂಬರ್ 3ನೇ ವಾರದಲ್ಲಿ ಇನ್ನೊಮ್ಮೆ ಸಭೆ ಸೇರಿ ತಜ್ಞರ ಸಲಹೆ, ಪರಿಸ್ಥಿತಿ ಅವಲೋಕಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಕೋವಿಡ್ ನಿರ್ವಹಣೆಗೆ ರಚಿಸಿರುವ ತಜ್ಞರ ಸಲಹಾ ಸಮಿತಿಯ ಶಿಫಾರಸಿನಂತೆ ಸರಕಾರ ಈ ತೀರ್ಮಾನ ತೆಗೆದುಕೊಂಡಿದೆ ಎಂದರು.
ಎರಡನೇ ಅಲೆ ಆತಂಕ
ರಾಜ್ಯದಲ್ಲಿ ಎಂಜಿನಿಯರಿಂಗ್, ಪದವಿ ತರಗತಿಗಳು ಆರಂಭವಾಗಿದ್ದರೂ ಶೇ. 5ರಷ್ಟು ವಿದ್ಯಾರ್ಥಿಗಳು ಕೂಡ ಕಾಲೇಜಿಗೆ ಬರುತ್ತಿಲ್ಲ.
ಕಾಲೇಜು ಆರಂಭ, ಕೋವಿಡ್ ಎರಡನೇ ಅಲೆ ಯಾವುದೇ ಸಂದರ್ಭದಲ್ಲಿ ಜಾಸ್ತಿಯಾಗ ಬಹುದಾಗಿದ್ದು, ಪುಟ್ಟ ಮಕ್ಕಳಿಗೆ ಸಮಸ್ಯೆ ಆಗಬಾರದೆಂದು ತಜ್ಞರು ಡಿಸೆಂಬರ್ ಅಂತ್ಯದ ವರೆಗೂ ಶಾಲಾರಂಭ ಬೇಡ ಎಂದಿದ್ದಾರೆ. ಮುಂದೆ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಸಿಎಂ ಹೇಳಿದರು.
ಈಗ ಶಾಲೆ ಆರಂಭಿಸಿದರೆ ಮಕ್ಕಳಿಗೆ ಸಮಸ್ಯೆ ಯಾಗುವ ಸಾಧ್ಯತೆಯಿದೆ ಎಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾದ ವೈದ್ಯಕೀಯ ಮತ್ತು ಆರೋಗ್ಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್ ಸಭೆಗೆ ಮನದಟ್ಟು ಮಾಡಿದರು. ಶಾಲಾರಂಭದ ಬಗ್ಗೆ ನಿರ್ಧರಿಸಲು ಸಭೆ ಕರೆದಿಲ್ಲ, ಚರ್ಚೆ ಮಾಡಲು ಸಭೆ ಮಾಡಿದ್ದೇವೆ. ತಜ್ಞರ ಸಮಿತಿ ರವಿವಾರವೇ ಶಿಫಾರಸು ನೀಡಿದೆ. ತಜ್ಞರ ಶಿಫಾರಸಿಗೂ ಸಭೆಗೂ ಸಂಬಂಧವಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಎಲ್ಲರೊಂದಿಗೂ ಚರ್ಚೆ
ಶಾಲೆ ಆರಂಭಿಸಬೇಕು ಮತ್ತು ಬೇಡ ಎಂಬ ಎರಡು ವರ್ಗದ ಒತ್ತಾಯದ ಹಿನ್ನೆಲೆಯಲ್ಲಿ ಮಕ್ಕಳು, ಪೋಷಕರು, ಎಸ್‌ಡಿಎಂಸಿ, ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು, ಶಿಕ್ಷಣ ತಜ್ಞರು, ಖಾಸಗಿ ವಿದ್ಯಾಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಿ ವರದಿ ಸಿದ್ಧಪಡಿಸಿ ಸಿಎಂಗೆ ಸಲ್ಲಿಸಿದ್ದೆವು. ಸಿಎಂ ಸಮ್ಮುಖದಲ್ಲೇ ತೀರ್ಮಾನ ಆಗಬೇಕು ಎಂಬ ಹಿನ್ನೆಲೆಯಲ್ಲಿ ಸಭೆ ನಡೆದಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಹೆಚ್ಚುವರಿ ಶುಲ್ಕ ಕೇಳಿದರೆ ದೂರು ನೀಡಿ
ಮಕ್ಕಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವುದಿಲ್ಲ ಎಂದು ಶಾಲಾ ಆಡಳಿತ ಮಂಡಳಿ ಹೇಳುವಂತಿಲ್ಲ. ಆನ್‌ಲೈನ್ ಶಿಕ್ಷಣಕ್ಕೆ ಹೆಚ್ಚುವರಿ ಶುಲ್ಕ ಪಡೆಯುವಂತಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಶಿಕ್ಷಣ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದ್ದಾರೆ. ಆನ್‌ಲೈನ್ ಶಿಕ್ಷಣಕ್ಕಾಗಿ ಹೆಚ್ಚುವರಿ ಶುಲ್ಕ ಕೇಳುವಂತಿಲ್ಲ, ಆನ್‌ಲೈನ್ ಶಿಕ್ಷಣ ಪಡೆಯಲೇಬೇಕು ಎಂದು ಬಲವಂತ ಮಾಡುವಂತಿಲ್ಲ. ಶಾಲಾ ಆಡಳಿತ ಮಂಡಳಿಗಳು ಹೆಚ್ಚುವರಿ ಶುಲ್ಕ ಕೇಳಿದರೆ ಹೆತ್ತವರು ದೂರು ನೀಡಬಹುದು ಎಂದೂ ಅವರು ಹೇಳಿದ್ದಾರೆ.
ಸಮಿತಿ ಹೇಳಿದ್ದೇನು?
1 ವಿವಿಧ ರಾಜ್ಯಗಳಲ್ಲಿ ಕೊರೊನಾ 2ನೇ ಅಲೆ ಕಾಣಿಸಿಕೊಂಡಿದೆ. ರಾಜ್ಯದಲ್ಲಿ ಈಗ ಸೋಂಕು ಇಳಿಮುಖವಾಗಿದ್ದರೂ ಮುಂದೆ ಹೆಚ್ಚಾಗುವ ಆತಂಕವಿದೆ.
2 ಚಳಿಗಾಲದಲ್ಲಿ ಕೊರೊನಾ ಹರಡುವಿಕೆ ಹೆಚ್ಚು ಮತ್ತು ಶ್ವಾಸಕೋಶ ಸಂಬಂಧಿ ರೋಗಗಳು ತೀವ್ರವಾಗಿ ಬಾಧಿಸುತ್ತವೆ.
3 ಹೀಗಾಗಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಡಿಸೆಂಬರ್‌ನಲ್ಲೂ ಶಾಲೆಗಳನ್ನು ತೆರೆಯುವುದು ಸೂಕ್ತವಲ್ಲ.
4 ಡಿಸೆಂಬರ್ ಕೊನೆಯ ವಾರದಲ್ಲಿ ಕೊರೊನಾ ಪರಿಸ್ಥಿತಿ ನೋಡಿಕೊಂಡು ಶಾಲೆಗಳನ್ನು ತೆರೆಯಲು ನಿರ್ಧಾರ ಕೈಗೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.