ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10 , ಪಿಯುಸಿ ತರಗತಿ ಪ್ರಾರಂಭ


Team Udayavani, Aug 14, 2021, 8:23 PM IST

ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10 , ಪಿಯುಸಿ ತರಗತಿ ಪ್ರಾರಂಭ

ಬೆಂಗಳೂರು : ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10 , ಪಿಯುಸಿ ತರಗತಿ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಹಾಗೂ ಗಡಿ ಭಾಗದ ತಾಲೂಕಿನಲ್ಲಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಶಾಲೆಗಳಲ್ಲಿ ಶೇ. 2ಕ್ಕಿಂತ ಹೆಚ್ಚು ಪ್ರಕರಣ ವರದಿಯಾದರೆ, ಒಂದು ವಾರ ಕಾಲ ಶಾಲೆ ಮುಚ್ಚಿ, ಸ್ವಚ್ಛಗೊಳಿಸಿದ ನಂತರ ತೆರೆಯಲು ಕ್ರಮ ವಹಿಸಲಾಗುವುದು,  ಶಾಲಾ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಪೋಷಕರು ಆದ್ಯತೆ ಮೇರೆಗೆ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಿಳಿಸಿದರು.

ಕೋವಿಡ್ ನಿರ್ವಹಣೆಗೆ ಜಿಲ್ಲಾವಾರು ಯೋಜನೆ ರೂಪಿಸಲು ಆಯಾ ಜಿಲ್ಲೆಗಳ ಪರಿಸ್ಥಿತಿಗೆ ಅನುಗುಣವಾಗಿ ಜಿಲ್ಲೆಯ ಅಗತ್ಯಕ್ಕೆ ತಕ್ಕಂತೆ ಯೋಜನೆ ರೂಪಿಸಲಾಗುವುದು ಎಂದರು.

ಇದನ್ನೂ ಓದಿ :ದಾಂಡೇಲಿಯಲ್ಲಿ ಚರಿತ್ರೆ ನಿರ್ಮಿಸಿದ ಮೆಗಾ ಲೋಕ್ ಅದಾಲತ್

ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಹಾಕಿಸಲು ಹಾಗೂ ಪರೀಕ್ಷಾ ಪ್ರಮಾಣ ಹೆಚ್ಚಿಸಲು ತಿಳಿಸಲಾಗಿದೆ ಎಂದರು.

ಕೇರಳ ಮತ್ತು ಮಹಾರಾಷ್ಟ್ರ ಗಡಿ ಭಾಗದಿಂದ 10 ಕಿ.ಮೀ. ವ್ಯಾಪ್ತಿಯಲ್ಲಿರುವ ರಾಜ್ಯದ ಹಳ್ಳಿಗಳಲ್ಲಿ ಲಸಿಕೆ ನೀಡುವುದನ್ನು ತೀವ್ರಗೊಳಿಸಲು ಹಾಗೂ ಪರೀಕ್ಷಾ ಪ್ರಮಾಣ ಹೆಚ್ಚಿಸಲು ತೀರ್ಮಾನಿಸಲಾಗಿದ್ದು ರಾಯಚೂರು, ಕಲಬುರಗಿ, ಬಳ್ಳಾರಿ, ಬೀದರ್, ಕೊಪ್ಪಳ, ಹಾವೇರಿ, ವಿಜಯಪುರ, ತುಮಕೂರು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಪರಿಕ್ಷಾ ಪ್ರಮಾಣ ಹೆಚ್ಚಿಸಲು ನಿರ್ಧರಿಸಲಾಯಿತು.

ಮುಂದಿನ ಎರಡು ವಾರದಲ್ಲಿ ರಾಜ್ಯದಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ, ಕಲಬುರಗಿ, ಬೆಳಗಾವಿ, ಹುಬ್ಬಳ್ಳಿಗಳಲ್ಲಿ ಆರು ಜಿನೋಮ್ ಪರೀಕ್ಷಾ ಪ್ರಯೋಗಾಲಯಗಳನ್ನು ಸ್ಥಾಪಿಸಲು ಸೂಚಿಸಲಾಗಿದೆ. ಡೆಲ್ಟಾ ವೇರಿಯೆಂಟ್ ವೈರಸ್ ಅಧ್ಯಯನ ಹಾಗೂ ಇತರ ವೇರಿಯೆಂಟ್ ಗಳನ್ನು ಪತ್ತೆ ಹಚ್ಚಲು ಇದರಿಂದ ಅನುಕೂಲವಾಗಲಿದೆ.

ರಾಜ್ಯದಲ್ಲಿ ಇಂದಿನ ವರೆಗೆ ಸುಮಾರು 4 ಕೋಟಿ ಲಸಿಕೆ ಹಾಕಲಾಗಿದೆ. 14.89 ಲಕ್ಷ ಡೋಸ್ ಲಸಿಕೆ ಲಭ್ಯವಿದೆ. ಮುಂದಿನ ವಾರ ದೆಹಲಿಗೆ ತೆರಳಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಹಂಚಿಕೆಯಾಗುವ ಲಸಿಕೆ ಡೋಸ್ ಗಳನ್ನು 65 ಲಕ್ಷದಿಂದ 1 ಕೋಟಿಗೆ ಹೆಚ್ಚಿಸುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಬೆಂಗಳೂರು ನಗರದಲ್ಲಿ ಕೋವಿಡ್ ನಿರ್ವಹಣೆ ಕುರಿತಂತೆ ಮಕ್ಕಳ ಐಸಿಯು ಬೆಡ್ ಗಳನ್ನು ಮೀಸಲಿರಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಸದ್ಯ 0.75 ಪಾಸಿಟಿವಿಟಿ ದರ ಇದೆ. ಶೆ. 2 ರಷ್ಟು ಪಾಸಿಟಿವಿಟಿ ದರ ಹಾಗೂ ಶೆ. 40 ರಷ್ಟು ಆಕ್ಸಿಜನೇಟೆಡ್ ಬೆಡ್ ಗೆ ಸೋಂಕಿತರಾದರೆ ದಾಖಲಾದರೆ, ಮುಂದಿನ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಅಧಿಕಾರ ನೀಡಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.