ಯೋಗಿಯದ್ದು ರಕ್ತ ಹೀರುವ ರಾಕ್ಷಸ ಸರ್ಕಾರ:ಮಾಜಿ ರಾಜ್ಯಪಾಲ ಖುರೇಷಿ ವಿರುದ್ಧ ದೇಶದ್ರೋಹ ಕೇಸ್

ಸಮಾಜದಲ್ಲಿ ಅಶಾಂತಿ ತಲೆದೋರಬಹುದು ಎಂದು ಸಕ್ಸೇನಾ ದೂರಿನಲ್ಲಿ ಹೇಳಿದ್ದರು.

Team Udayavani, Sep 6, 2021, 1:17 PM IST

ಯೋಗಿಯದ್ದು ರಕ್ತ ಹೀರುವ ರಾಕ್ಷಸ ಸರ್ಕಾರ:ಮಾಜಿ ರಾಜ್ಯಪಾಲ ಖುರೇಷಿ ವಿರುದ್ಧ ದೇಶದ್ರೋಹ ಕೇಸ್

ಲಕ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಉತ್ತರಪ್ರದೇಶದ ಮಾಜಿ ರಾಜ್ಯಪಾಲ ಅಜೀಜ್ ಖುರೇಷಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ (ಸೆಪ್ಟೆಂಬರ್ 06) ತಿಳಿಸಿದ್ದಾರೆ.

ಇದನ್ನೂ ಓದಿ:ಅನಂತನಾಗ್‌ ಬರ್ತ್‌ಡೇಗೆ ‘ವಿಜಯಾನಂದ’ ಲುಕ್‌ ಹೊರಕ್ಕೆ

ಮಾಜಿ ರಾಜ್ಯಪಾಲ ಖುರೇಷಿ ವಿರುದ್ಧ ಬಿಜೆಪಿ ಮುಖಂಡ ಆಕಾಶ್ ಕುಮಾರ್ ಸಕ್ಸೇನಾ ರಾಮ್ ಪುರ್ ಜಿಲ್ಲೆಯ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಇದರ ಆಧಾರದ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ ಎಂದು ವರದಿ ಹೇಳಿದೆ.

ಸಕ್ಸೇನಾ ನೀಡಿದ ದೂರಿನ ಪ್ರಕಾರ, ಖುರೇಷಿ ಅವರು ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ನಿವಾಸಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅಜಂ ಪತ್ನಿ ತಾಜೀನ್ ಪಾತ್ಮಾ ಅವರ ಬಳಿ ಮಾತುಕತೆ ನಡೆಸಿದ್ದರು.

ಮಾತುಕತೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಖುರೇಷಿ, ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಷ್ಟೇ ಅಲ್ಲ ಯೋಗಿ ಆದಿತ್ಯನಾಥ್ ಸರ್ಕಾರ ರಾಕ್ಷಸ ಸರ್ಕಾರ, ಇದೊಂದು ಜನರ ರಕ್ತರ ಹೀರುವ ಸರ್ಕಾರವಾಗಿದೆ ಎಂದು ಹೋಲಿಕೆ ಮಾಡಿದ್ದು ವಿವಾದಕ್ಕೆ ಕಾರಣವಾಗಿರುವುದಾಗಿ ತಿಳಿಸಿದ್ದಾರೆ.

ಮಾಜಿ ರಾಜ್ಯಪಾಲರು ನೀಡಿರುವ ಹೇಳಿಕೆಯಿಂದ ಎರಡು ಕೋಮಿನ ನಡುವೆ ಉದ್ವಿಗ್ನತೆ ಹುಟ್ಟುಹಾಕಲು ಕಾರಣವಾಗುವ ಮೂಲಕ ಸಮಾಜದಲ್ಲಿ ಅಶಾಂತಿ ತಲೆದೋರಬಹುದು ಎಂದು ಸಕ್ಸೇನಾ ದೂರಿನಲ್ಲಿ ಹೇಳಿದ್ದರು.

ಅವಹೇಳನಕಾರಿ ಹೇಳಿಕೆ ನೀಡಿರುವ ಮಾಜಿ ರಾಜ್ಯಪಾಲ ಖುರೇಷಿ ವಿರುದ್ಧ ಭಾರತೀಯ ದಂಡ ಸಂಹಿತೆ ಪ್ರಕಾರ ದೇಶದ್ರೋಹ ಸೇರಿದಂತೆ ಹಲವಾರು ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಖುರೇಷಿ (81ವರ್ಷ) ಕಾಂಗ್ರೆಸ್ ಹಿರಿಯ ಮುಖಂಡರಾಗಿದ್ದು, 2014ರಿಂದ 2015ರವರೆಗೆ ಮಿಜೋರಾಂ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ ಉತ್ತರಪ್ರದೇಶದಲ್ಲಿಯೂ ಕೆಲ ಕಾಲ ರಾಜ್ಯಪಾಲರಾಗಿದ್ದರು ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

voter

Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು

stalin

DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್‌ ವಿರುದ್ಧ ಸ್ಟಾಲಿನ್‌ ಕಿಡಿ

mob

WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್‌ ಅಧಿಕಾರಿ ದೂರು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Suvarna-obama

Belagavi Session: ಬರಾಕ್‌ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.