ಪ್ರೀತಿಸಿ ಮದುವೆಯಾದ ಪತ್ನಿಯಿಂದ ಕಿರುಕುಳ! ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಪತಿ
Team Udayavani, Nov 5, 2020, 2:57 PM IST
ಮೈಸೂರು: ಮೊಬೈಲ್ ಮೂಲಕ ಸೆಲ್ಫಿ ವಿಡಿಯೋ ಮಾಡಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ಜರುಗಿದೆ.
ಮೈಸೂರಿನ ಟಿ.ಕೆ. ಲೇಔಟ್‌ನ ನಿವಾಸಿ, ಕೂಲಿ ಕಾರ್ಮಿಕ ನಾಗರಾಜ್ (42) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರೀತಿಸಿ ಮದುವೆಯಾದ ಪತ್ನಿಯಿಂದ ಅವಮಾನ, ಕಿರುಕುಳ, ಹಿಂಸೆಗೀಡಾದ ನಾಗರಾಜ್, ತಾನು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುದರ ಬಗ್ಗೆ ಸೆಲ್ಫಿ ವಿಡಿಯೋ ಮಾಡಿ, ತನ್ನ ಸ್ನೇಹಿತರಿಗೆ ಕಳುಹಿಸಿದ ಬಳಿಕ ಮನೆಯಲ್ಲಿ ನೇಣು
ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
8 ವರ್ಷದ ಹಿಂದೆ ನಂಜನಗೂಡಿನ ನಿವಾಸಿ ಮಂಜುಳಾ ಅವರನ್ನು ಪ್ರೀತಿಸಿ ವಿವಾಹವಾಗಿದ್ದ ನಾಗರಾಜ್‌ಗೆ ಇಬ್ಬರು ಮಕ್ಕಳು ಇದ್ದಾರೆ. ಪ್ರಾರಂಭದಲ್ಲಿ ಚೆನ್ನಾಗಿಯೇ ಇದ್ದ ನಾಗರಾಜ್ ನಂತರ ಸಣ್ಣ ಪುಟ್ಟ ವಿಷಯಗಳಿಗೆ ಪತ್ನಿಯೊಂದಿಗೆ ಮನಸ್ತಾಪ
ಹೆಚ್ಚಾಗಿ ನಿತ್ಯ ಜಗಳ ನಡೆಯುತ್ತಿತ್ತು. ಅಲ್ಲದೇ ಪತ್ನಿ ಕೂಡ ನೀನು ಚೆನ್ನಾಗಿಲ್ಲ. ನಿನ್ನ ಆಸ್ತಿ ಮಾರಾಟ ಮಾಡಿ ನನ್ನ ಪಾಲು ಕೊಡು ಎಂದು ನಿತ್ಯ ಜಗಳವಾಡುತ್ತಿದ್ದರು. ಇದಕ್ಕೆ ನಾಗರಾಜ್ ಅವರ ಅತ್ತೆ, ಇಬ್ಬರು ಬಾವಮೈದುನರು ಮತ್ತು ನೆರೆ ಮನೆ ನಿವಾಸಿ ನಾಗಮಣಿ ಕೂಡ ಕುಮ್ಮಕ್ಕು ನೀಡುತ್ತಿದ್ದರು.
ಇದನ್ನೂ ಓದಿ:ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು: ಕುಮಾರಸ್ವಾಮಿ ಒತ್ತಾಯ
ಇದರಿಂದ ರೋಸಿಹೋಗಿ ಕುಡಿತಕ್ಕೆ ಬಲಿಯಾಗಿ ಮಾನಸಿಕ ಖನ್ನತೆಗೆ ಒಳಗಾಗಿದ್ದ ನಾಗರಾಜ್, ತನ್ನ ಆತ್ಮಹತ್ಯೆಗೆ ಕಾರಣವೇನು ಮತ್ತು ಯಾರು ಕಾರಣ ಎಂಬುದರ ಬಗ್ಗೆ ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು
ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ನಾಗರಾಜ್ ಅವರ ಪತ್ನಿ ಮಂಜುಳಾ ಅವರನ್ನು ಬಂಧಿಸಿರುವ ಪೊಲೀಸರು, ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.