ಕಳಚಿದ ಕೊಂಡಿ : ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ವಿಧಿವಶ
Team Udayavani, Dec 4, 2021, 2:21 PM IST
ಬೆಂಗಳೂರು : ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ಸಾಧಕರಲ್ಲೊಬ್ಬರಾದ ನಟ, ನಿರ್ಮಾಪಕ ಶಿವರಾಂ(84) ಅವರು ಶನಿವಾರ ಇಹಲೋಕ ತ್ಯಜಿಸಿದ್ದಾರೆ.
ಮನೆಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರು ವಿದ್ಯಾಪೀಠ ಬಳಿ ಇರುವ ಪ್ರಶಾಂತ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಶಿವರಾಂ ಅವರ ಮೆದುಳಿಗೆ ಗಂಭೀರ ಹಾನಿಯಾಗಿತ್ತು, ಜೀವರಕ್ಷಕ ಸಾಧನದ ನೆರವಿನಲ್ಲಿ ಅವರನ್ನು ಇಡಲಾಗಿತ್ತು. ಹೃದಯವೂ ಸ್ಪಂದಿಸುತ್ತಿರಲಿಲ್ಲ.
ಶಿವರಾಂ ಅವರ ಪುತ್ರ ಲಕ್ಷ್ಮೀಶ್ , ತಂದೆ ನಿಧನ ಹೊಂದಿರುವ ವಿಚಾರವನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ನಮ್ಮ ತಂದೆ ಭಗವಂತನ ಪಾದ ಸೇರಿದ್ದಾರೆ ಎಂದು ಭಾವುಕವಾಗಿ ನುಡಿದಿದ್ದಾರೆ.
ಶಿವರಾಂ ಅವರು ನಟ ಮಾತ್ರವಲ್ಲದೆ ನಿರ್ಮಾಪಕ ಮತ್ತು ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ಆರು ದಶಕಗಳ ಸೇವೆ ಸಲ್ಲಿಸಿದ್ದಾರೆ. ಅವರು ನಾಯಕನ ಪಾತ್ರಗಳು, ಹಾಸ್ಯ ಪಾತ್ರಗಳು ಮತ್ತು ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದರು.
ತಮ್ಮ ಹಿರಿಯ ಸಹೋದರ, ಎಸ್. ರಾಮನಾಥನ್ ಅವರೊಂದಿಗೆ ಸೇರಿಕೊಂಡು 1972 ರಲ್ಲಿ ‘ಹೃದಯ ಸಂಗಮ’ವನ್ನು ನಿರ್ದೇಶಿಸುವುದರ ಜೊತೆಗೆ ರಾಶಿ ಬ್ರದರ್ಸ್ ಹೆಸರಿನಲ್ಲಿ ಹಲವಾರು ಚಲನಚಿತ್ರಗಳನ್ನು ನಿರ್ಮಿಸಿದ್ದರು.
ಸಹೋದರರು ಕನ್ನಡ ಮಾತ್ರವಲ್ಲದೆ ಬಾಲಿವುಡ್ ಚಲನಚಿತ್ರಗಳನ್ನೂ ನಿರ್ಮಿಸಿದ್ದರು.ನಟನಾಗಿ, ಶಿವರಾಮ್ ಅವರು ಅನೇಕ ಧೀಮಂತ ನಿರ್ದೇಶಕರೊಂದಿಗೆ ಕೆಲಸ ಮಾಡಿದ ಹೆಗ್ಗಳಿಕೆಯನ್ನು ಹೊಂದಿದ್ದು, ಪುಟ್ಟಣ್ಣ ಕಣಗಾಲ್ ಅವರೊಂದಿಗಿನ ಅವರ ಒಡನಾಟವು ಹೆಚ್ಚು ನೆನಪಿನಲ್ಲಿ ಉಳಿಯುತ್ತದೆ. ರಾಜಕುಮಾರ್ ಅಭಿನಯದ ಸಂಗೀತಂ ಶ್ರೀನಿವಾಸ ರಾವ್ ನಿರ್ದೇಶನದ ಎಲ್ಲಾ ಏಳು ಕನ್ನಡ ಚಲನಚಿತ್ರಗಳಲ್ಲಿ ಅವರು ಮುಖ್ಯ ಭಾಗವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.