ಸರಣಿ ಅಪಘಾತ; ಸವಾರ ಬ್ಯಾಂಕ್ ಉದ್ಯೋಗಿ ಸಾವು
Team Udayavani, Jun 23, 2023, 5:40 AM IST
ಕೈಕಂಬ/ಮಂಗಳೂರು: ಮಂಗಳೂರು-ಮೂಡುಬಿದಿರೆ ರಸ್ತೆಯ ಗುರುಪುರ ಪೇಟೆ ಬಳಿ ಖಾಸಗಿ ಬಸ್ಸು, ಪಿಕಪ್ ವಾಹನ, ಶಾಲಾ ಬಸ್ಸಿಗೆ ಹಾಗೂ ಬೈಕ್‌ಗೆ ಢಿಕ್ಕಿ ಹೊಡೆದ ಕಾರಣ ಬೈಕ್ ಸವಾರ ಗಂಭೀರ ಗಾಯಗೊಂಡು ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಸಾವನ್ನ ಪ್ಪಿದ ಘಟನೆ ಗುರುವಾರ ಬೆಳಗ್ಗೆ ಸುಮಾರು 9.15ಕ್ಕೆ ನಡೆದಿದೆ.
ಬೈಕ್ ಸವಾರ ಪೊಳಲಿಯ ಕರಿಯಂಗಳ ಗ್ರಾಮದ ದಿ| ಅಣ್ಣಿ ಪೂಜಾರಿ ಅವರ ಪುತ್ರ ಸಂತೋಷ್ (34) ಮೃತಪಟ್ಟವರು. ಅವರು 8 ತಿಂಗಳ ಹೆಣ್ಣು ಮಗು ಹಾಗೂ ಪತ್ನಿ, ತಾಯಿ, ಇಬ್ಬರು ಸಹೋದರರು ಮತ್ತು ಸಹೋದರಿಯನ್ನು ಅಗಲಿದ್ದಾರೆ. ಸಂತೋಷ್ 2021ರ ಡಿಸೆಂಬರ್ ತಿಂಗಳಿನಲ್ಲಿ ಮದುವೆಯಾಗಿದ್ದರು. ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರಾಗಿದ್ದರು. ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ವಾಮಂಜೂರು ಶಾಖೆಯಲ್ಲಿ ಉದ್ಯೋಗಿಯಾಗಿದ್ದರು.
ಗುರುಪುರ ಸಹಕಾರಿ ಸಂಘದ ಎದುರು ರಸ್ತೆ ಉಬ್ಬು ಸಮೀಪ ಖಾಸಗಿ ಬಸ್, ಪಿಕಪ್ ವಾಹನ, ಶಾಲಾ ಬಸ್ಸಿಗೆ ಹಿಂದಿನಿಂದ ಢಿಕ್ಕಿ ಹೊಡೆದು ಬೈಕ್‌ಗೆ ಢಿಕ್ಕಿಯಾದ ಕಾರಣ ಬೈಕ್ ಹಾಗೂ ಸವಾರನನ್ನು ಸುಮಾರು ದೂರ ಬಸ್ ಎಳೆದುಕೊಂಡು ಹೋಗಿತ್ತು. ಇದರಿಂದ ಸಂತೋಷ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಶಾಲಾ ಬಸ್ಸಿನ ಹಿಂಬದಿಗೆ ಹಾನಿಯಾಗಿದೆ.
ಸಂಚಾರ ವ್ಯತ್ಯಯ
ಈ ಘಟನೆಯಿಂದ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಸುಮಾರು ಗಂಟೆಗಳ ಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಜೂ. 15ರಂದು ಅಲ್ಲಿಯೇ ಸಮೀಪದಲ್ಲಿ ಮಣ್ಣು ಹೇರಿಕೊಂಡು ಹೋಗುತ್ತಿದ್ದ ಲಾರಿ ಮಗುಚಿ ಬಿದ್ದಿತ್ತು. ಬಂಟ್ವಾಳ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಮನೆ-ಮಂದಿಗೆ ಸಾಂತ್ವನ ಹೇಳಿದರು.
ಕಚೇರಿ ಮುಂಭಾಗದಲ್ಲೇ ನಡೆದ ಅಪಘಾತ
ಸಂತೋಷ್ ಅವರು ಕೆಲಸ ಮಾಡುತ್ತಿದ್ದ ಸಹಕಾರಿ ಸಂಘದ ಗುರುಪುರ ಪ್ರಧಾನ ಕಚೇರಿ ಮುಂಭಾಗದಲ್ಲೇ ಅಪಘಾತ ಸಂಭವಿಸಿದೆ. ಘಟನೆ ನಡೆದ ಸ್ಥಳದಲ್ಲಿ ರಸ್ತೆಯಲ್ಲಿ ವೇಗ ತಡೆಗಾಗಿ ನಾಲ್ಕೈದು ಹಂಪ್‌ಗ್ಳನ್ನು ಅಳವಡಿಸಲಾಗಿದ್ದು, ಬೈಕ್ ನಿಧಾನ ಮಾಡಿದಾಗ ಹಿಂದೆ ಕೈಕಂಬದಿಂದ ಮಂಗಳೂರಿನ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ಸು ಢಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬಜಪೆ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ
Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ
ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ
Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.