Karnataka: ಇಂದಿನಿಂದ ಅಧಿವೇಶನ- ಕದನ “ಗ್ಯಾರಂಟಿ”

ಏಳು ಮಸೂದೆಗಳ ಮಂಡನೆ, ಜು. 14ರ ವರೆಗೆ ಕಲಾಪ

Team Udayavani, Jul 3, 2023, 7:49 AM IST

vidhana soudha

ಬೆಂಗಳೂರು: ಸರಕಾರದ ಗ್ಯಾರಂಟಿಗಳ ವಿಚಾರದಲ್ಲಿ ಆಡಳಿತಾರೂಢ ಮತ್ತು ವಿಪಕ್ಷಗಳ ನಡುವೆ ಸದನದ ಹೊರಗಡೆ ರಾಜಕೀಯ ಸಂಘರ್ಷ ಉತ್ತುಂಗದಲ್ಲಿರುವಂತೆಯೇ ಸೋಮವಾರ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಈಗ ಸದನದ ಒಳಕ್ಕೂ ಈ ಸಂಘರ್ಷ ಪ್ರವೇಶ ಮಾಡಲಿದೆ. ಸದನದ ಕಲಾಪಗಳು ಗ್ಯಾರಂಟಿ ಜಗಳಕ್ಕೆ ವೇದಿಕೆಯಾಗುವುದು ಖಚಿತ.

ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಗೊಂದಲವನ್ನು ಪ್ರಮುಖ ಅಸ್ತ್ರವನ್ನಾಗಿ ಮಾಡಿಕೊಳ್ಳಲು ಬಿಜೆಪಿ ರಣತಂತ್ರ ರೂಪಿಸಿಕೊಂಡಿದ್ದರೆ, ಹಿಂದಿನ ಸರಕಾರದ ಅವಧಿಯ ಹಗರಣಗಳನ್ನು ಗುರಾಣಿಯನ್ನಾಗಿ ಮಾಡಿಕೊಂಡು ಬಿಜೆಪಿಯನ್ನು ಕಟ್ಟಿಹಾಕಲು ಆಡಳಿತ ಪಕ್ಷ ಕಾಂಗ್ರೆಸ್‌ ಪ್ರತಿತಂತ್ರ ಹೆಣೆದಿದೆ. ಸರಕಾರದ ವಿರುದ್ಧ ವಿಷಯಾಧಾರಿತ ಹೋರಾಟ ಮಾಡಲು ಜೆಡಿಎಸ್‌ ನಿರ್ಧರಿಸಿದೆ. ಒಟ್ಟಿನಲ್ಲಿ ಸದನಲ್ಲಿ ಜಂಗಿ ಕುಸ್ತಿ ನಡೆಯುವುದಂತೂ ಗ್ಯಾರಂಟಿ.

ಇದೇ ವೇಳೆ ವಿವಾದಾತ್ಮಕ ಮತಾಂತರ ನಿಷೇಧ ಕಾಯ್ದೆಯನ್ನು ನಿರಸನಗೊಳಿಸುವ ತಿದ್ದುಪಡಿ ಮಸೂದೆ ಈ ಅಧಿವೇಶನದಲ್ಲಿ ಮಂಡನೆಯಾಗಲಿದ್ದು. ಆಡಳಿತ ಮತ್ತು ವಿಪಕ್ಷಗಳ ನಡುವೆ ಇದು ಧರ್ಮ ಯುದ್ಧಕ್ಕೆ ಕಾರಣವಾಗಲಿದೆ. ಇದರ ಜತೆಗೆ ಕರ್ನಾಟಕ ಕರಾವಳಿ ಅಭಿವೃದ್ಧಿ ಮಂಡಳಿ ಮಸೂದೆ-2023 ಸೇರಿದಂತೆ 7 ಮಸೂದೆಗಳು ಸದನದ ಮುಂದೆ ಬರಲಿವೆ.

12 ಗಂಟೆಗೆ ರಾಜ್ಯಪಾಲರ ಭಾಷಣ
ಸಂಪ್ರದಾಯದಂತೆ ಸೋಮವಾರ ಮಧ್ಯಾಹ್ನ 12 ಗಂಟೆಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಉಭಯ ಸದನಗಳನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ರಾಜ್ಯಪಾಲರ ಭಾಷಣದ ಬಳಿಕ ವಿಧಾನಪರಿಷತ್‌ ಕಲಾಪ ನಡೆಯಲಿದ್ದು, ಅಲ್ಲಿ ರಾಜ್ಯಪಾಲರ ಭಾಷಣದ ಪ್ರತಿ ಸದನದಲ್ಲಿ ಮಂಡನೆಯಾಗಲಿದೆ. ಅನಂತರ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗುತ್ತದೆ. ಜು. 3ರಿಂದ 14ರ ವರೆಗೆ ಅಧಿವೇಶನ ಇರಲಿದ್ದು, ಜು. 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್‌ ಮಂಡಿಸಲಿದ್ದಾರೆ. ಮೇ 24ರಂದು ಕೊನೆಗೊಂಡಿದ್ದ ಅಧಿವೇಶನ ನೂತನ ಶಾಸಕರ ಪ್ರಮಾಣವಚನ ಹಾಗೂ ಸ್ಪೀಕರ್‌ ಆಯ್ಕೆಗೆ ಸೀಮಿತವಾಗಿತ್ತು. ಹಾಗಾಗಿ 16ನೇ ವಿಧಾನಸಭೆಗೆ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿರುವ 70 ಮಂದಿಗೆ ಇದು ಮೊದಲ ಅಧಿವೇಶನ ಮತ್ತು ಹೊಸ ಅನುಭವ ಆಗಲಿದೆ.

ಏಳು ಮಸೂದೆ
ರಾಜ್ಯದಲ್ಲಿ ಬಲವಂತದ ಹಾಗೂ ಆಮಿಷದ ಮತಾಂತರ ನಿಷೇಧಿಸುವ ಉದ್ದೇಶದಿಂದ ಹಿಂದಿನ ಬಿಜೆಪಿ ಸರಕಾರ 2022ರಲ್ಲಿ ಜಾರಿಗೆ ತಂದಿದ್ದ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣ ಕಾಯ್ದೆಯನ್ನು ರದ್ದುಗೊಳಿಸಲಿರುವ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣ ಮಸೂದೆ-2023 ಸದನದಲ್ಲಿ ಮಂಡನೆಯಾಗಲಿದೆ. ಇದಲ್ಲದೆ ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯೂ ಸದನದ ಮುಂದೆ ಬರಲಿದೆ. ಜತೆಗೆ ಬಹುದಿನದ ಬೇಡಿಕೆಯಾಗಿದ್ದ ಕರಾವಳಿ ಅಭಿವೃದ್ದಿ ಮಂಡಳಿ ಮಸೂದೆಯನ್ನು ಹೊಸದಾಗಿ ತರಲಾಗುತ್ತಿದೆ. ಅಧಿವೇಶನ ಮುಗಿಯುವುದರೊಳಗೆ ಈ ಪಟ್ಟಿಯಲ್ಲಿ ಕೆಲವು ಸೇರ್ಪಡೆಗಳಾದರೂ ಆಗಬಹುದು.

ಅಧಿವೇಶನದಲ್ಲಿ ಮಂಡನೆಯಾಗುವ ಮಸೂದೆಗಳು
– ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣ (ನಿರಸನ) ಮಸೂದೆ-2023
– ಕರ್ನಾಟಕ ಗೋಹತ್ಯೆ ತಡೆ ಹಾಗೂ ಜಾನುವಾರು ಸಂರಕ್ಷಣ (ತಿದ್ದುಪಡಿ) ಮಸೂದೆ-2023
– ಕರಾವಳಿ ಅಭಿವೃದ್ಧಿ ಮಂಡಳಿ ಮಸೂದೆ-2023
– ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ (ತಿದ್ದುಪಡಿ) ಮಸೂದೆ-2023
– ಬಯಲುಸೀಮೆ ಅಭಿವೃದ್ಧಿ ಮಂಡಳಿ (ತಿದ್ದುಪಡಿ) ಮಸೂದೆ-2023
– ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ಮಸೂದೆ-2023
– ವೈದ್ಯಕೀಯ ಕೋರ್ಸ್‌ ಮುಗಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವೆ (ತಿದ್ದುಪಡಿ) ಮಸೂದೆ-2023
– ಶಾಸಕರ (ಅನರ್ಹತೆ ತಡೆ) ತಿದ್ದುಪಡಿ ಮಸೂದೆ-2023
—————-
ಬೆಳಿಗ್ಗೆ 11.55-ವಿಧಾನಸೌಧಕ್ಕೆ ರಾಜ್ಯಪಾಲರ ಆಗಮನ
ಮಧ್ಯಾಹ್ನ 12: ರಾಜ್ಯಪಾಲರ ಭಾಷಣ

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

vidhana-soudha

CM office ನವೀಕರಣ: ಮತ್ತೊಂದು ವಿವಾದ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.