ಕೋವಿಡ್ ಲಸಿಕೆ ತಯಾರಿಕೆ ಫಾರ್ಮುಲಾ ಬೇರೆ ಕಂಪನಿಗಳ ಜತೆಗೂ ಹಂಚಿಕೊಳ್ಳಿ: ಕೇಜ್ರಿವಾಲ್
ಈ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.
Team Udayavani, May 11, 2021, 2:42 PM IST
ನವದೆಹಲಿ:ದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಉತ್ಪಾದಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇತರ ಕಂಪನಿಗಳ ಜತೆಗೂ ಕೋವಿಡ್ ಲಸಿಕೆ ಉತ್ಪಾದನೆಯ ಫಾರ್ಮುಲಾವನ್ನು ಹಂಚಿಕೊಳ್ಳಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲಹೆ ನೀಡಿದ್ದಾರೆ.
ಕೇಂದ್ರ ಸರ್ಕಾರ ಕೇವಲ ಎರಡು ಕಂಪನಿಗಳ ಜತೆ ಮಾತ್ರ ಲಸಿಕೆ ಉತ್ಪಾದನೆಗೆ ಒಪ್ಪಂದ ಮಾಡಿಕೊಂಡಿದೆ. ಆದರೆ ಇನ್ನಷ್ಟು ಕಂಪನಿಗಳ ಜತೆ ಕೋವಿಡ್ ಲಸಿಕೆ ಉತ್ಪಾದನೆಯ ಫಾರ್ಮುಲಾವನ್ನು ಹಂಚಿಕೊಳ್ಳುವ ಮೂಲಕ ಹೆಚ್ಚು ಲಸಿಕೆ ಉತ್ಪಾದನೆಗೆ ಮುಂದಾಗಬೇಕು ಎಂದು ಹೇಳಿದರು.
ಕೇಂದ್ರ ಸರ್ಕಾರ ಈ ಎರಡು ಕಂಪನಿಗಳಿಂದ ಲಸಿಕೆ ಉತ್ಪಾದನೆಯ ಫಾರ್ಮುಲಾವನ್ನು ಸಂಗ್ರಹಿಸಿ ಬೇರೆ, ಬೇರೆ ಕಂಪನಿಗಳ ಜತೆ ಹಂಚಿಕೊಳ್ಳಬೇಕು. ಇದರಿಂದ ದೇಶದಲ್ಲಿ ಹೆಚ್ಚು ಲಸಿಕೆ ಉತ್ಪಾದಿಸಲು ಸಾಧ್ಯವಾಗುತ್ತದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಈ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.