ಲಾಭ ಗಳಿಸಿದ ಟೈಟಾನ್, ಏಷ್ಯನ್ ಪೇಂಟ್ಸ್ ಷೇರು;ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 125 ಅಂಕ ಜಿಗಿತ
ಪವರ್ ಗ್ರಿಡ್, ಎಚ್ ಸಿಎಲ್ ಟೆಕ್, ಕೋಟಕ್ ಬ್ಯಾಂಕ್ ಷೇರುಗಳು ನಷ್ಟ ಅನುಭವಿಸಿದೆ.
Team Udayavani, May 26, 2021, 11:53 AM IST
ಮುಂಬಯಿ: ಏಷ್ಯನ್ ಮಾರುಕಟ್ಟೆಯ ಷೇರುಪೇಟೆಯ ಭರ್ಜರಿ ವಹಿವಾಟಿನ ಪರಿಣಾಮ ಮುಂಬಯಿ ಷೇರುಪೇಟೆಯ ಮೇಲೆ ಬೀರಿದ್ದು, ಬುಧವಾರ(ಮೇ 26) ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 125 ಅಂಕ ಏರಿಕೆ ಕಂಡಿದೆ.
ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 125.76 ಅಂಕಗಳಷ್ಟು ಏರಿಕೆಯಾಗಿದ್ದು, 50,763.29 ಅಂಕಗಳ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 25.75 ಅಂಕ ಏರಿಕೆಯೊಂದಿಗೆ 15,234.20ರ ಗಡಿ ದಾಟಿದೆ.
ಸೆನ್ಸೆಕ್ಸ್ ಏರಿಕೆಯಿಂದ ಟೈಟಾನ್, ಸನ್ ಫಾರ್ಮಾ, ಮಹೀಂದ್ರ ಆ್ಯಂಡ್ ಮಹೀಂದ್ರಾ, ಎಲ್ ಆ್ಯಂಡ್ ಟಿ, ಬಜಾಜ್ ಫಿನ್ ಸರ್ವ್, ಎಚ್ ಯುಎಲ್ ಮತ್ತು ಏಷ್ಯನ್ ಪೇಂಟ್ಸ್ ಷೇರುಗಳು ಲಾಭಗಳಿಸಿವೆ. ಮತ್ತೊಂದೆಡೆ ಪವರ್ ಗ್ರಿಡ್, ಎಚ್ ಸಿಎಲ್ ಟೆಕ್, ಕೋಟಕ್ ಬ್ಯಾಂಕ್ ಷೇರುಗಳು ನಷ್ಟ ಅನುಭವಿಸಿದೆ.
ಮಂಗಳವಾರ ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ ಅತೀ ಕಡಿಮೆ ಪ್ರಮಾಣದ 14.37 ಅಂಕಗಳ ಏರಿಕೆಯೊಂದಿಗೆ 50,637.53 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿತ್ತು. ನಿಫ್ಟಿ ಕೂಡಾ 10.75 ಅಂಕಗಳ ಏರಿಕೆಯೊಂದಿಗೆ 15,208.45ರ ಗಡಿ ತಲುಪಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
Stock Market: ಟ್ರಂಪ್ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!
US elections ಎಫೆಕ್ಟ್: ಷೇರುಪೇಟೆ ಸೂಚ್ಯಂಕ 1,300 ಅಂಕ ಕುಸಿತ, 8 ಲಕ್ಷ ಕೋಟಿ ರೂ. ನಷ್ಟ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.