ಹೂಡಿಕೆದಾರರಿಗೆ ಲಾಭ; ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಅಲ್ಪ ಏರಿಕೆಯೊಂದಿಗೆ ವಹಿವಾಟು ಅಂತ್ಯ
ರಿಲಯನ್ಸ್ ಇಂಡಸ್ಟ್ರೀಸ್, ಇಂಡಸ್ ಇಂಡ್ ಬ್ಯಾಂಕ್, ಎಚ್ ಡಿಎಫ್ ಸಿ, ಐಟಿಸಿ ಷೇರುಗಳು ನಷ್ಟ ಅನುಭವಿಸಿದೆ.
Team Udayavani, May 25, 2021, 4:24 PM IST
ಮುಂಬಯಿ: ಮುಂಬಯಿ ಷೇರುಪೇಟೆಯಲ್ಲಿನ ಸೆನ್ಸೆಕ್ಸ್ ಏರಿಕೆಯ ನಂತರ ಹೂಡಿಕೆದಾರರು ಹೆಚ್ಚಿನ ಮಟ್ಟದಲ್ಲಿ ಲಾಭ ಪಡೆದ ಹಿನ್ನೆಲೆಯಲ್ಲಿ ಮಂಗಳವಾರ(ಮೇ 25) ಷೇರುಪೇಟೆಯ ಸಂವೇದಿ ಸೂಚ್ಯಂಕ ಮತ್ತು ನಿಫ್ಟಿ ಸಮನಾಂತರ ವಹಿವಾಟಿನಲ್ಲಿ ಕೊನೆಗೊಂಡಿದೆ.
ಇದನ್ನೂ ಓದಿ:ನಿಯಮ ಉಲ್ಲಂಘಿಸಿ ಮದುವೆ:ಅಧಿಕಾರಿಗಳನ್ನು ಕಂಡು ವೇದಿಕೆಯಲ್ಲೇ ವಧುವನ್ನು ಬಿಟ್ಟು ವರ ಎಸ್ಕೇಪ್!
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 14.37 ಅಂಕಗಳ ಅಲ್ಪ ಏರಿಕೆಯೊಂದಿಗೆ 50,637.53 ಅಂಕಗಳೊಂದಿಗೆ ವಹಿವಾಟು ಮುಕ್ತಾಯಗೊಂಡಿದೆ. ಎನ್ ಎಸ್ ಇ ನಿಫ್ಟಿ ಕೂಡಾ 10.75 ಅಂಕಗಳ ಏರಿಕೆಯೊಂದಿಗೆ 15,208.45ರ ಗಡಿ ದಾಟಿದೆ.
ಏಷ್ಯನ್ ಪೇಂಟ್ಸ್, ಟೈಟಾನ್, ಬಜಾಜ್ ಫಿನ್ ಸರ್ವ್, ಒಎನ್ ಜಿಸಿ, ಇನ್ಫೋಸಿಸ್ ಮತ್ತು ಟಿಸಿಎಸ್ ಷೇರುಗಳು ಹೆಚ್ಚಿನ ಲಾಭಗಳಿಸಿದೆ. ಅಲ್ಲದೇ ಎಚ್ ಡಿಎಫ್ ಸಿ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್, ಇಂಡಸ್ ಇಂಡ್ ಬ್ಯಾಂಕ್, ಎಚ್ ಡಿಎಫ್ ಸಿ, ಐಟಿಸಿ ಷೇರುಗಳು ನಷ್ಟ ಅನುಭವಿಸಿದೆ.
ದೇಶೀಯವಾಗಿ ಷೇರುಮಾರುಕಟ್ಟೆಯಲ್ಲಿ ಕಳೆದ ಎರಡು ದಿನಗಳಿಂದ ಸೆನ್ಸೆಕ್ಸ್ ಏರಿಕೆಯಾಗಿದ್ದು, ಹೂಡಿಕೆದಾರರಲ್ಲಿ ಭರವಸೆ ಮೂಡಿಸಿತ್ತು. ಇದರಿಂದಾಗಿ ಷೇರುಪೇಟೆಯಲ್ಲಿ ಉತ್ತಮ ವಹಿವಾಟು ನಡೆದಿರುವುದಾಗಿ ರಿಲಯನ್ಸ್ ಸೆಕ್ಯುರಿಟೀಸ್ ನ ಬಿನೋದ್ ಮೋದಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.