ಶ್ರೀನಗರ: ಬರೋಬ್ಬರಿ 31 ವರ್ಷಗಳ ಬಳಿಕ ಶೀತಲ್‌ನಾಥ್ ದೇಗುಲ ಓಪನ್
Team Udayavani, Feb 19, 2021, 7:15 AM IST
ಶ್ರೀನಗರ: ಬರೋಬ್ಬರಿ 31 ವರ್ಷಗಳ ಬಳಿಕ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿರುವ ದೇವಾಲಯದಲ್ಲಿ ಗಂಟೆಯನಾದ ಕೇಳಿಸಿದೆ!
ಕ್ರಲಾಖುದ್ ಪ್ರದೇಶದಲ್ಲಿರುವ ಶೀತಲ್‌ನಾಥ್ ದೇವಾಲಯವನ್ನು ವಸಂತ ಪಂಚಮಿಯ ಹಿನ್ನೆಲೆಯಲ್ಲಿ ಭಕ್ತರಿಗಾಗಿ ತೆರೆಯಲಾಗಿದೆ. 1990ರ ಅವಧಿಯಲ್ಲಿ ಕಣಿವೆ ರಾಜ್ಯದಲ್ಲಿ ಉಗ್ರರ ಉಪಟಳ ಆರಂಭ ಆದಾಗಿನಿಂದ ಈ ದೇಗುಲದ ಬಾಗಿಲನ್ನು ಮುಚ್ಚಲಾಗಿತ್ತು. ಅಂದಿನಿಂದ ಇಲ್ಲಿ ಯಾವುದೇ ಪೂಜೆ, ಹವನಗಳು ನಡೆದಿರಲಿಲ್ಲ. ಆದರೆ, ಸತತ 31 ವರ್ಷಗಳ ಬಳಿಕ ದೇಗುಲವನ್ನು ಭಕ್ತಾದಿಗಳಿಗೆ ಮುಕ್ತವಾಗಿಸಲಾಗಿದೆ. ಸುಮಾರು 30 ಮಂದಿ ಕಾಶ್ಮೀರಿ ಪಂಡಿತರು ಪೂಜೆಯಲ್ಲಿ ಪಾಲ್ಗೊಂಡಿದ್ದು, ನಂತರ ಭಕ್ತರಿಗೆ ಪ್ರಸಾದವನ್ನೂ ಹಂಚಲಾಗಿದೆ.
ಇದೊಂದು ಆತ್ಮವಿಶ್ವಾಸ ಮೂಡಿಸುವ ಮಹತ್ವದ ಹೆಜ್ಜೆಯಾಗಿದ್ದು, “ಕಾಶ್ಮೀರವು ಸುರಕ್ಷಿತವಾಗಿದೆ’ ಎಂಬ ಸಂದೇಶವನ್ನು ಹೊರ ಜಗತ್ತಿಗೆ ರವಾನಿಸಲಿದೆ ಎಂದು ಇಲ್ಲಿನ ಅರ್ಚಕ ಉಪೇಂದ್ರ ಹಂದೂ ಹೇಳಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಅಟ್ಟಹಾಸ ಆರಂಭವಾಗುವುದಕ್ಕೂ ಮೊದಲು ಶೀತಲ್‌ನಾಥ್ ದೇಗುಲದಲ್ಲಿ ವಸಂತ ಪಂಚಮಿ ಪೂಜೆ ಅದ್ಧೂರಿಯಾಗಿ ನಡೆಯುತ್ತಿತ್ತು. ನೂರಾರು ಕಾಶ್ಮೀರಿ ಪಂಡಿತರು ಭಾಗಿಯಾಗುತ್ತಿದ್ದರು. ಪಟಾಕಿಗಳನ್ನು ಸಿಡಿಸಲಾಗುತ್ತಿತ್ತು. ಹಲವು ವ್ಯಾಪಾರಿಗಳು ಅಂಗಡಿಗಳನ್ನು ಇಟ್ಟು ವ್ಯಾಪಾರ ಮಾಡುತ್ತಿದ್ದರು ಎಂದೂ ಅರ್ಚಕರು ತಿಳಿಸಿದ್ದಾರೆ.
“1991ರಲ್ಲಿ ಅಗ್ನಿ ಅವಘಡ ಸಂಭವಿಸಿದಾಗ ದೇವಾಲಯಕ್ಕೆ ಹಾನಿಯಾಗಿತ್ತು. ಹವನ ಶಾಲೆಯೂ ಹಾನಿಗೀಡಾಗಿತ್ತು. ಸಂಕಷ್ಟದ ಸಮಯದಲ್ಲಿ ಭೂ ಮಾಫಿಯಾವು ಈ ದೇವಾಲಯವನ್ನು ಕಬಳಿಸಲೂ ಯತ್ನಿಸಿತ್ತು. ಆದರೆ, ಈ ಪ್ರದೇಶದಲ್ಲಿರುವ ಮುಸ್ಲಿಂ ಬಾಂಧವರು ದೇವಾಲಯವನ್ನು ಮತ್ತು ಅದಕ್ಕೆ ಸೇರಿದ ಜಾಗವನ್ನು ರಕ್ಷಣೆ ಮಾಡಿದರು’ ಎಂದು ಪೂಜೆಯಲ್ಲಿ ಭಾಗಿಯಾಗಿದ್ದ ರವೀಂದರ್ ರಜಾªನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ
Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.