ಶಿವಮೊಗ್ಗ ಹತ್ಯೆ ಕೇಸ್:ಈಶ್ವರಪ್ಪ ಹೇಳಿಕೆ ಸಮರ್ಥಿಸಿಕೊಳ್ಳದ ಸಿಎಂ
ಅವರು ಹೇಳಿದ ಮಾತ್ರಕ್ಕೆ ನಾನು ಹೇಳಬೇಕು ಅಂತಿಲ್ಲ
Team Udayavani, Feb 21, 2022, 12:02 PM IST
ಬೆಂಗಳೂರು : ಶಿವಮೊಗ್ಗದಲ್ಲಿ ಭಾನುವಾರ ರಾತ್ರಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಗೆ ‘ಮುಸ್ಲಿಂ ಗೂಂಡಾಗಳೇ ಕಾರಣಕರ್ತರು’ ಎಂಬ ಹೇಳಿಕೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಮರ್ಥಿಸಿಕೊಳ್ಳಲು ನಿರಾಕರಿಸಿದ್ದು,’ಅವರು ಹೇಳಿದ ಮಾತ್ರಕ್ಕೆ ನಾನು ಹೇಳಬೇಕು ಅಂತಿಲ್ಲ, ತನಿಖೆ ನಡೆದ ಬಳಿಕ ಎಲ್ಲವೂ ಹೊರಗೆ ಬರಲಿದೆ’ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ‘ರಾತ್ರಿ ಹರ್ಷ ಅನ್ನೋ ಹುಡುಗ ಹತ್ಯೆಯಾಗಿದ್ದು, ಅವನ ಹೆಸರೇ ಹಿಂದೂ ಹರ್ಷ ಅಂತ. ಈಗಾಗಲೇ ತನಿಖೆ ನಡೆಯುತ್ತಿದೆ.ಯಾರೆಲ್ಲಾ ಭಾಗಿಯಾಗಿದ್ದಾರೆ ಅನ್ನೋ ಪ್ರಾಥಮಿಕ ಮಾಹಿತಿ ಕಲೆ ಹಾಕಲಾಗುತ್ತಿದೆ.ಈ ನಡುವೆ ಯಾವುದೇ ಅಹಿತ ಕರ ಘಟನೆ ನಡೆಯದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಶೀಘ್ರವೇ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ’ ಎಂದರು.
ಇದನ್ನೂ ಓದಿ : ಸಚಿವ ಈಶ್ವರಪ್ಪರಿಂದ ಅಶಾಂತಿ ಸೃಷ್ಟಿಸುವ ಹೇಳಿಕೆ: ಬಿ.ಕೆ ಹರಿಪ್ರಸಾದ್ ಟೀಕೆ
‘ಶಿವಮೊಗ್ಗದಲ್ಲಿ ಇಬ್ಬರು ಸಚಿವರಿದ್ದಾರೆ ಅವರೇ ಘಟನೆಗೆ ಕಾರಣ’ ಅನ್ನೋ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ ‘ಸಿದ್ದರಾಮಯ್ಯ ಯವಾಗಲೂ ತರ್ಕ ಬಿಟ್ಟೆ ಮಾತಾಡ್ತಾರೆ’ ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.