ಶಿವಮೊಗ್ಗ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಕೆ: ಅಗತ್ಯ ವಸ್ತು ಖರೀದಿ ಅವಧಿ 1ಗಂಟೆ ಹೆಚ್ಚಳ
Team Udayavani, Jun 13, 2021, 7:11 PM IST
ಶಿವಮೊಗ್ಗ: ಜಿಲ್ಲೆಯಲ್ಲಿ ಕರೋನಾ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್ಡೌನ್ ಈಗಿರುವಂತೆ ಒಂದು ವಾರ ಕಾಲ ಮುಂದುವರೆಯಲಿದ್ದು, ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಬೆಳಿಗ್ಗೆ 6ರಿಂದ 9ರವರೆಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.
ಅವರು ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಾಕ್ಡೌನ್ ಮುಂದುವರಿಕೆ ಕುರಿತು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಜಿಲ್ಲೆಯಲ್ಲಿ ಕರೋನಾ ಪಾಸಿಟಿವಿ ಪ್ರಮಾಣ ನಿಧಾನವಾಗಿ ಕಡಿಮೆಯಾಗುತ್ತಿದೆ. ಆದರೆ ಶಿವಮೊಗ್ಗ ನಗರದಲ್ಲಿ ಈಗಲೂ ಶೇ.13ರ ಆಸುಪಾಸಿನಲ್ಲಿದ್ದು, ಭದ್ರಾವತಿಯಲ್ಲಿ ಸುಮಾರು ಶೇ.10ರಷ್ಟು ಪಾಸಿಟಿವಿಟಿ ಪ್ರಮಾಣ ಇದೆ. ಈ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರಗಳ ಕಾಲ ಲಾಕ್ಡೌನ್ ಇದೇ ರೀತಿ ಮುಂದುವರೆಸಲು ಎಲ್ಲಾ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಒಪ್ಪಿಗೆ ಸೂಚಿಸಿದ್ದಾರೆ. ಲಾಕ್ಡೌನ್ ಜಾರಿಯಲ್ಲಿರುವ ಜಿಲ್ಲೆಗಳಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಅನುಮತಿ ನೀಡಲಾಗಿರುವ ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಮಾತ್ರ ಅವಕಾಶವಿದೆ. ಪ್ರಸ್ತುತ ತರಕಾರಿ, ದಿನಸಿಯಂತಹ ಅಗತ್ಯ ವಸ್ತುಗಳ ಮಾರಾಟಕ್ಕೆ ಬೆಳಿಗ್ಗೆ 6ರಿಂದ 8ರವರೆಗೆ ಅವಕಾಶವಿದ್ದು, ಅದನ್ನು ಒಂದು ಗಂಟೆ ವಿಸ್ತರಿಸಲಾಗಿದೆ ಎಂದರು.
ಇದನ್ನೂ ಓದಿ :ಹಾರುವ ಓತಿಯ ಬೆನ್ನು ಕಚ್ಚಿದ ವಿಜ್ಞಾನಿಯ ಕಥೆ ಕರ್ವಾಲೋ
ಇನ್ನುಳಿದಂತೆ ಕೈಗಾರಿಕಾ ಚಟುವಟಿಕೆಗಳಿಗೆ ಈಗಿರುವಂತೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಸಗಟು ದಿನಸಿ ವ್ಯಾಪಾರಕ್ಕೆ ಬುಧವಾರ ಮತ್ತು ಶನಿವಾರ ಬೆಳಿಗ್ಗೆ 6ರಿಂದ 9ರವರೆಗೆ ಅವಕಾಶವಿದೆ. ಅಡಿಕೆ ಮಂಡಿಯಲ್ಲಿ ಸಗಟು ವ್ಯಾಪಾರಕ್ಕೆ ಹಾಗೂ ಟೆಂಡರ್ನಲ್ಲಿ ಭಾಗವಹಿಸುವವರಿಗೆ ಪಾಸು ನೀಡಲಾಗುವುದು. ಎಪಿಎಂಸಿಯಲ್ಲಿ ಬೆಳಿಗ್ಗೆ 6ರಿಂದ 8ರವರೆಗೆ ವ್ಯವಹಾರಕ್ಕೆ ಅವಕಾಶವಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.