ಸಾರಿಗೆ ನೌಕರರಿಗೆ ಶಿವರಾತ್ರಿ ಸಂಭ್ರಮ! ಅಂತರ್ ನಿಗಮಗಳ ವರ್ಗಾವಣೆಗೆ ಅಸ್ತು
Team Udayavani, Mar 11, 2021, 6:50 AM IST
ಬೆಂಗಳೂರು: ಶಿವರಾತ್ರಿ ಸಂದರ್ಭದಲ್ಲೇ ರಾಜ್ಯ ಸಾರಿಗೆ ನೌಕರರಿಗೆ ಸರಕಾರ ಸಿಹಿ ಸುದ್ದಿ ನೀಡಿದೆ. ಅಂತರ್ ನಿಗಮಗಳ ವರ್ಗಾವಣೆಗೆ ಸರಕಾರ ಬುಧವಾರ ಆದೇಶಿಸಿದ್ದು, ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದರಿಂದ ಸುಮಾರು 20-25 ಸಾವಿರ ನೌಕರರಿಗೆ ಅನುಕೂಲ ಆಗಲಿದೆ ಎಂದು ಅಂದಾಜಿಸಲಾಗಿದೆ.
ಮಾತೃಸಂಸ್ಥೆಯಲ್ಲಿ ಕನಿಷ್ಠ 10 ವರ್ಷ ಸೇವೆ ಸಲ್ಲಿಸಿದ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ವೃಂದದ ಖಾಯಂ ನೌಕರರಿಗೆ ನಿಬಂಧನೆಗಳಿಗೆ ಒಳಪಟ್ಟ ಅಂತರ್ ನಿಗಮಗಳ ವರ್ಗಾವಣೆ ಭಾಗ್ಯ ಕಲ್ಪಿಸಲಾಗಿದೆ. ಇನ್ನು ಮುಂದೆ ಪ್ರತೀ ವರ್ಷ ಎ.1ರಿಂದ 30ರ ವರೆಗೆ ಈ ಪ್ರಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ. ವರ್ಷದಲ್ಲಿ ಒಟ್ಟು ಸಿಬಂದಿ ಪ್ರಮಾಣದ ಶೇ. 2ರಷ್ಟು ಮಂದಿಯ ವರ್ಗಾವಣೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಡಿಸೆಂಬರ್‌ನಲ್ಲಿ ಮುಷ್ಕರ ನಡೆಸಿದ್ದ ಸಾರಿಗೆ ನೌಕರರು, 6ನೇ ವೇತನ ಪರಿಗಣನೆ ಸಹಿತ ಒಂಬತ್ತು ಬೇಡಿಕೆಗಳನ್ನು ಸರಕಾರದ ಮುಂದಿಟ್ಟಿದ್ದರು. ಈ ಪೈಕಿ ಏಳು ಈಡೇರಿದಂತಾಗಿದೆ. 6ನೇ ವೇತನ ಆಯೋಗದ ಶಿಫಾರಸು ಅನ್ವಯಿಸುವುದು ಮತ್ತು ತರಬೇತಿ ಅವಧಿ ಇಳಿಕೆ ಬಾಕಿ ಇವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.