BJP ಸೋಲಿಸಲು ಹೊಸ ರಂಗಕ್ಕೆ ಶ್ರೀಕಾರ: ಖರ್ಗೆ ನಿವಾಸದಲ್ಲಿ ನಿತೀಶ್, ತೇಜಸ್ವಿ ಭೇಟಿ
Team Udayavani, Apr 13, 2023, 7:50 AM IST
ಹೊಸದಿಲ್ಲಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ವಿಪಕ್ಷಗಳೆಲ್ಲ ಒಟ್ಟಾಗಿ ಸೆಣಸುವ ನಿಟ್ಟಿನಲ್ಲಿ ಹೊಸ ರಾಜಕೀಯ ರಂಗ ರಚನೆ ಮಾಡುವ ಹೊಸ ಪ್ರಯತ್ನ ಶುರುವಾಗಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಆರ್‌ಜೆಡಿ ನಾಯಕ ಮತ್ತು ಡಿಸಿಎಂ ತೇಜಸ್ವಿ ಯಾದವ್ ಅವರು ಬುಧವಾರ ಹೊಸದಿಲ್ಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಎಲ್ಲ ವಿಪಕ್ಷಗಳನ್ನು ಒಂದೇ ವೇದಿಕೆಯ ವ್ಯಾಪ್ತಿಯಲ್ಲಿ ತರುವ ಬಗ್ಗೆ ಮಾತು ಕತೆಗಳನ್ನು ನಡೆಸಲಾಗಿದೆ. ಇದೇ ಮೊದಲ ಬಾರಿಗೆ ವಿಪಕ್ಷಗಳೆಲ್ಲವೂ ಒಟ್ಟಾಗುವ ಬಗ್ಗೆ ಮಾತುಕತೆಗಳು ನಡೆದಿವೆ.
ಬಳಿಕ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ “ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭು ತ್ವದ ರಕ್ಷಣೆಗಾಗಿ ಎಲ್ಲ ವಿಪಕ್ಷಗಳೂ ಒಗ್ಗೂಡಲಿವೆ. ಮಾತ್ರವಲ್ಲದೆ, ದೇಶಕ್ಕೆ ಒಂದು ಹೊಸ ದಾರಿಯನ್ನು ತೋರಿಸಲಿವೆ” ಎಂದು ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, “ವಿಪಕ್ಷಗಳೆಲ್ಲವೂ ಒಂದೇ ವೇದಿಕೆಯಡಿ ಬರಲಿದ್ದು, ಅಲ್ಲಿ ದೇಶಕ್ಕಾಗಿ ಒಂದು ದಿಕ್ಸೂಚಿ ಚಿಂತನೆಯ ಬಗ್ಗೆ ಚರ್ಚೆ ಮಾಡಿ ಅಂತಿಮಗೊಳಿಸಲಿವೆ. ಬಳಿಕ ಅದನ್ನು ದೇಶದ ಜನರ ಮುಂದೆ ಇರಿಸಲಿವೆ” ಎಂದರು. ಇದೊಂದು ಐತಿಹಾಸಿಕ ಹೆಜ್ಜೆ ಎಂದು ರಾಹುಲ್ ಗಾಂಧಿ ಹೇಳಿಕೊಂಡರು.
ಐಕ್ಯಮತದಲ್ಲಿ ಕೆಲಸಕ್ಕೆ ಸಿದ್ಧ: ಬಿಹಾರ ಸಿಎಂ ನಿತೀಶ್ ಮಾತನಾಡಿ “ವಿಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮುಂದುವರಿಯಲಿದೆ. ಮುಂದಿನ ಹಂತದಲ್ಲಿ ಎಲ್ಲರೂ ಕುಳಿತು ಮಾತಾಡಲಿದ್ದೇವೆ. ಬುಧವಾರದ ಸಭೆ ಎಲ್ಲದಕ್ಕೂ ಶ್ರೀಕಾರವಾಗಲಿದೆ” ಎಂದು ಹೇಳಿದ್ದಾರೆ.
ಖರ್ಗೆ ನಿವಾಸದಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್, ಡಿಸಿಎಂ ತೇಜಸ್ವಿ ಯಾದವ್, ರಾಹುಲ್ ಗಾಂಧಿ ಮತ್ತು ಇತರ ಪ್ರಮುಖರು ಮಧ್ಯಾಹ್ನದ ಭೋಜ ನವನ್ನೂ ಸವಿದಿದ್ದಾರೆ. ಡಿಎಂಕೆ ಹಾಗೂ ಇತರ ಪಕ್ಷಗಳ ಜತೆ ಮಾತನಾಡುವ ಹೊಣೆ ಖರ್ಗೆ ಅವರಿಗೆ ವಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.