ಶ್ರೀರಂಗಪಟ್ಟಣ : ಜನರನ್ನು ಭಯಭೀತರನ್ನಾಗಿಸಿದ್ದ ಬೃಹದಾಕಾರದ ಮೊಸಳೆ ಬಲೆಗೆ
Team Udayavani, Nov 22, 2021, 8:17 PM IST
ಶ್ರೀರಂಗಪಟ್ಟಣ: ಹಲವು ತಿಂಗಳುಗಳಿಂದ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುವುದಲ್ಲದೆ, ಪ್ರವಾಸಿಗರು ಹಾಗೂ ಸಾರ್ವಜನಿಕರನ್ನು ಭಯಭೀತರನ್ನಾಗಿಸಿದ್ದ ಬೃಹದಾಕಾರದ ಮೊಸೆಳೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿಯುವಲ್ಲಿ ಸೋಮವಾರ ಯಶಸ್ವಿಯಾಗಿದ್ದಾರೆ.
ತಾಲೂಕಿನ ವಿಶ್ವ ವಿಖ್ಯಾತ ರಂಗನತಿಟ್ಟು ಪಕ್ಷಿದಾಮದ ಆಸು ಪಾಸಿನಲ್ಲಿ ಹಲವು ತಿಂಗಳುಗಳಿಂದ ಸಾರ್ವಜನಿಕವಾಗಿ ರಸ್ತೆ ಹಾಗೂ ಜಮೀನುಗಳಲ್ಲಿ ಕಾಣಿಸಿಕೊಂಡು ರೈತರ ಕುರಿ, ಮೇಕೆ ಸೇರಿದಂತೆ ಇತರೆ ಪ್ರಾಣಿಗಳನ್ನು ತಿಂದು ಹಾಕಿ ರೈತರ ಸಂಕಷ್ಟಕ್ಕೆ ಕಾರಣವಾಗಿತ್ತು.
ಈ ಸಂಬಂಧ ರೈತರು ಹಲವು ಭಾರಿ ಮೊಸಳೆ ಸೆರೆ ಹಿಡಿಯುವಂತೆ ಮನವಿ ಮಾಡಿದ್ದರು. ಅಲ್ಲದೇ ಸಂಜೆ ವೇಳೆ ರಂಗನತಿಟ್ಟು ಪಕ್ಷಿಧಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮೇಲೆ ನಿತ್ಯ ಕಾಣಿಸಿಕೊಳ್ಳುತ್ತಿರುವುದರನ್ನು ಪ್ರವಾಸಿಗರು ಪೋಟೊ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ವೈರಲ್ ಸಹ ಆಗಿತ್ತು.
ಅಧಿಕಾರಿಗಳು ಮೊಸಳೆ ಸೆರೆ ಹಿಡಿಯುವ ಸಲುವಾಗಿ ಬೋನ್ ಇಟ್ಟು, ಕಾರ್ಯಪ್ರವೃತ್ತರಾಗಿದ್ದರು. ಸಂಜೆ ಸ್ಥಳೀಯ ರೈತರ ಮಾಹಿತಿ ಮೇರೆಗೆ ವಲಯ ಅರಣ್ಯಾಧಿಕಾರಿ ಕೆ. ಸುರೇಂದ್ರ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಬಲೆ ಸೇರಿದಂತೆ ಇತರೆ ಸಲಕರೆಗಳೊಂದಿಗೆ ಸುಮಾರು 35 ರಿಂದ 40 ವರ್ಷದ, 7.6 ಅಡಿ ಉದ್ದದ, ಮೊಸಳೆಯನ್ನು ಸೆರೆ ಡಿಯುವ ಮೂಲಕ ರೈತರು ಹಾಗೂ ಸಾರ್ವಜನಿಕರ ಆತಂಕವನ್ನು ಅರಣ್ಯ ಇಲಾಖೆ ಸಿಬ್ಬಂದಿ ದೂರಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.