ಕಾಂಗ್ರೆಸ್‌ ಕ್ಯಾಂಪ್‌ನಲ್ಲಿ ಸಿದ್ದು ಸದ್ದು!

ಭಾವೋದ್ವೇಗದ ಮಾತುಗಳು ವೈರಿಗಳನ್ನು ಮೌನವಾಗಿಸುವ ತಂತ್ರವೇ?

Team Udayavani, Jan 26, 2023, 6:05 AM IST

ಕಾಂಗ್ರೆಸ್‌ ಕ್ಯಾಂಪ್‌ನಲ್ಲಿ ಸಿದ್ದು ಸದ್ದು!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  “ಇದು ತನ್ನ ಕೊನೆಯ ಚುನಾವಣೆ. ಕೊಟ್ಟ ಭರವಸೆ ಈಡೇರಿಸದಿದ್ದರೆ ರಾಜಕೀಯದಿಂದ ನಿವೃತ್ತನಾಗುತ್ತೇನೆ’ ಎಂದು ಘೋಷಿಸಿದ್ದರು. ಈಗ ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಒಂದೇ ಕಲ್ಲಿಗೆ ಎರಡು ಹಕ್ಕಿಯನ್ನು ಹೊಡೆದುರುಳಿಸುವ ಹಾಗೆ  “ತನ್ನ ವಿರುದ್ಧದ ಭ್ರಷ್ಟಾಚಾರ ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಮತ್ತು ರಾಜಕೀಯ ಸನ್ಯಾಸತ್ವ ಸ್ವೀಕರಿಸುತ್ತೇನೆ’ ಎಂದೂ ಪ್ರಕಟಿಸಿದ್ದಾರೆ. ಇವೆಲ್ಲ ಅವರು ಭಾವೋದ್ವೇಗದಿಂದ ಆಡಿದ ಮಾತುಗಳೇ ಅಥವಾ ಪಕ್ಷದೊಳಗಿನ ಮತ್ತು ಹೊರಗಿನ ರಾಜಕೀಯ ವೈರಿಗಳನ್ನು ಮೌನವಾಗಿಸಲು ಹೂಡಿದ ತಂತ್ರವೇ? ಇವೆಲ್ಲದರ ನಡುವೆ ಅವರು ನಿವೃತ್ತಿ ಮಾತನ್ನೂ ಆಡಿದ್ದಾರೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರು ಚುನಾವಣ ಅಖಾಡದಲ್ಲಿ ಮುಂಚೂಣಿಗೆ ಬಂದು ನಿಂತಿರುವುದು ಸ್ಪಷ್ಟವಾಗಿ ಗೋಚರಿಸಿದೆ. ಅವರು ಇತ್ತೀಚಿನ ದಿನಗಳಲ್ಲಿ ಸೂಕ್ಷ್ಮವಾಗಿ ಮತ್ತು ಲೆಕ್ಕಾಚಾರದ ಹೆಜ್ಜೆಗಳನ್ನಿಡುತ್ತಿದ್ದಾರೆ. ಪ್ರತೀ ಮಾತಿನಲ್ಲೂ ಪಕ್ಷದೊಳಗಿನ ವಿರೋಧಿಗಳನ್ನು ಮಣಿಸಲು ಅಗತ್ಯವಾದ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಇದಕ್ಕೆ ಇತ್ತೀಚಿನ ಸೇರ್ಪಡೆ “ಭ್ರಷ್ಟಾಚಾರ ಮಾಡಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ’ ಹೇಳಿಕೆ. ಆದರೆ ಮುಖ್ಯಮಂತ್ರಿ ಆಗಿದ್ದಾಗ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿದ್ದುಂಟು. ಅವರು ಈಗ ಭ್ರಷ್ಟಾಚಾರದ ಕುರಿತು ಪ್ರಸ್ತಾವಿಸಿರುವುದರ ಹಿಂದೆ  “ಹಿರಿಯ ನಾಯಕ’ನಿಗೆ ಸಡ್ಡು ಹೊಡೆದು ಮೌನವಾಗಿಸುವ ತಂತ್ರವಿದೆ ಎಂದು ಪಕ್ಷದೊಳಗೆ ವ್ಯಾಖ್ಯಾನಿಸಲಾಗುತ್ತಿದೆ.

ಸಿದ್ದರಾಮಯ್ಯ ಅವರು  “ಪ್ರಜಾಧ್ವನಿ’ ರ್ಯಾಲಿಯಲ್ಲೂ ಹೆಚ್ಚು  ಸದ್ದು ಮಾಡುತ್ತಿದ್ದಾರೆ. ಹೋದಲ್ಲೆಲ್ಲ ಮತದಾರರನ್ನು ಸೆಳೆಯಲು ತಾವೇ ಹೊಸ ಹೊಸ ಚುನಾವಣ ಘೋಷಣೆಗಳನ್ನು

ಮಾಡುತ್ತಾ, ಇನ್ನೂ ಕೆಲವೆಡೆ ಭಾವನಾತ್ಮಕ ತಂತ್ರಗಳನ್ನು ಬಳಸುತ್ತಿರುವುದು ಅವರ ಇತ್ತೀಚಿನ ನಡೆ. ಶತಾಯಗತಾಯ ಪ್ರತಿಯೊಂದು ಹಂತದಲ್ಲೂ ತಮಗೆ ತೊಡಕಾಗಬಹುದಾದ ನಾಯಕರನ್ನು ಬದಿಗೆ ಸರಿಸಿ ತಮ್ಮ ಪರ ಒಲವುಳ್ಳ ನಾಯಕರನ್ನು ಪ್ರಚೋದಿಸುವ ಸೂತ್ರವನ್ನು ಹೆಣೆಯುತ್ತಿದ್ದಾರೆ.

ಬಿಜೆಪಿ, ಹಿಂದುತ್ವ  ಮತ್ತು ಆರೆಸ್ಸೆಸ್‌ ವಿರುದ್ಧ ಗಟ್ಟಿಧ್ವನಿಯಲ್ಲಿ ಮಾತನಾಡುತ್ತಾ ನಿಷೇಧಿತ ಪಿಎಫ್‌ಐ ಸಂಘಟನೆಯನ್ನು

ಆರೆಸ್ಸೆಸ್‌ ಜತೆ ಹೋಲಿಸುವ ಮೂಲಕ ಮತ್ತು ಅಲ್ಪಸಂಖ್ಯಾಕ‌ ಸಮುದಾಯದ ಏಳ್ಗೆಗೆ ಯೋಜನೆಗಳನ್ನು ಪ್ರಸ್ತಾವಿಸುತ್ತಾ ಅಲ್ಪಸಂಖ್ಯಾಕರ ಪರವಾಗಿರುವ ಏಕೈಕ ನಾಯಕ ಎಂಬುದನ್ನು ಮತ್ತೆ ಮತ್ತೆ ಸಾರ್ವಜನಿಕ ವೇದಿಕೆಗಳಲ್ಲಿ ಬಿಂಬಿಸುತ್ತಲೇ ಇದ್ದಾರೆ. ತಮ್ಮನ್ನು ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಮಾಡುವವರನ್ನು ಮೌನವಾಗಿದ್ದು ಬೆಂಬಲಿಸುತ್ತಿದ್ದಾರೆ. ಸ್ಥಳೀಯ ಬೆಂಬಲಿಗರ

ಮೂಲಕ ಜೈಕಾರ ಹಾಕಿಸುತ್ತಿದ್ದಾರೆ. ಕೋಲಾರದಲ್ಲೂ ಬಲಪ್ರದರ್ಶನ/ಸಭೆ ನಡೆಸಿ ತಾನೇ ಅಭ್ಯರ್ಥಿ ಎಂದು ಘೋಷಿಸುವ ಮೂಲಕ ಪಕ್ಷದ ನಾಯಕರಿಗೇ ಸವಾಲೆಸೆದಿದ್ದಾರೆ.

ಸಿದ್ದರಾಮಯ್ಯ ಅವರು ಜೆಡಿಎಸ್‌ನಿಂದ ಹೊರಬಿದ್ದು ಕಾಂಗ್ರೆಸ್‌ ಸೇರಿದ ಅನಂತರ ನಿಧಾನವಾಗಿ ಆ ಪಕ್ಷವನ್ನು ಆಕ್ರಮಿಸಿಕೊಂಡಿದ್ದಾರೆ. ಪ್ರಾರಂಭದಲ್ಲಿ ಮೂಲ ನಿವಾಸಿಗಳು, ವಲಸಿಗರು ಎಂಬ ಅಪಸ್ವರ ಕೇಳಿಬಂದರೂ ಈಗ ಆ ಪ್ರಶ್ನೆ ಹೆಚ್ಚು ಕೇಳಿಬರುತ್ತಿಲ್ಲ. ಕಾಂಗ್ರೆಸ್‌ನಲ್ಲಿ ತಮ್ಮದೇ ಬೆಂಬಲಿಗರ ಪಡೆಯನ್ನು ಕಟ್ಟಿಕೊಳ್ಳುವಲ್ಲಿಯೂ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್‌ನಲ್ಲಿರುವ ಮೂಲ ಜನತಾಪರಿವಾರದವರಿಗೆ ಅವರೇ ಪ್ರಶ್ನಾತೀತ ನಾಯಕ.

ಈ ನಡುವೆ ರಾಜ್ಯಮಟ್ಟದ ಕೆಲವು ನಾಯಕರು ಏಕಾಏಕಿ ಸಕ್ರಿಯ ರಾಜಕೀಯದಲ್ಲಿ ಸಿದ್ಧರಾಮಯ್ಯ ಪರವಾಗಿ ಅಖಾಡಕ್ಕಿಳಿದಿರುವುದು ಕಾಂಗ್ರೆಸ್‌ನ ಇನ್ನುಳಿದ ನಾಯಕರಿಗೆ ನುಂಗಲಾರದ ತುತ್ತಾಗಿದೆ. ನಿರಾಶೆಯೂ ಆಗಿದೆ. ಈ ವಾದಕ್ಕೆ ಪೂರಕವೆಂಬಂತೆ  “ಪ್ರಜಾಧ್ವನಿ’ ರ್ಯಾಲಿ ವೇಳೆ ಏಕಾಏಕಿಯಾಗಿ ಬಡವರಿಗೆ ಹತ್ತು ಕಿಲೋ ಉಚಿತ ಅಕ್ಕಿ ಹಾಗೂ ಅಲ್ಪಸಂಖ್ಯಾಕ‌ ಸಮುದಾಯಕ್ಕೆ ಹೆಚ್ಚಿನ ಅನುದಾನ ಘೋಷಣೆ ಹಿರಿಯ ನಾಯಕರಲ್ಲಿ ಗೊಂದಲ ಉಂಟುಮಾಡಿದೆ. ಮತದಾರರು ತಮ್ಮ ಪರವಾಗಿ ನಿಲ್ಲುವಂತೆ ಮಾಡುವ ತಂತ್ರ ಸಿದ್ದರಾಮಯ್ಯ ಅವರಿಗೇನೂ ಹೊಸದಲ್ಲ. ಅಹಿಂದ ಮತಗಳನ್ನೇ ಬಲವಾಗಿ ನೆಚ್ಚಿಕೊಂಡಿರುವ ಸಿದ್ದರಾಮಯ್ಯ ಹಿಂದುಳಿದ ಸಮುದಾಯ ಹಾಗೂ ಕುರುಬ ನಾಯಕರನ್ನು ಸೆಳೆದು ಆಪ್ತವರ್ಗಕ್ಕೆ ಸೇರಿಸಿಕೊಳ್ಳುತ್ತಾ ಪಕ್ಷದ ಮೇಲೆ ಬಿಗಿ ಹಿಡಿತ ಸಾಧಿಸುತ್ತಿದ್ದಾರೆ. ಒಂದೊಮ್ಮೆ ಪಕ್ಷದ ಸರಕಾರ ಬಂದರೆ ಸಿಎಂ ಗಾದಿಗೇರುವ ಹಾದಿ ಸುಲಭವಾಗಿಸಿಕೊಳ್ಳಲು ಹೊರಟಿದ್ದಾರೆ.

ಇನ್ನು ಸಿದ್ದರಾಮಯ್ಯ ಕಳೆದ ಎರಡೂ¾ರು ಚುನಾವಣೆಗಳಿಂದ ಇದೇ ತಮ್ಮ ಕೊನೆಯ ಚುನಾವಣೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳುತ್ತಿದ್ದರೂ ಸ್ಪರ್ಧಾ ಕಣದಿಂದ ದೂರ ಸರಿದಿಲ್ಲ. ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂಬ ಒತ್ತಡ ಅವರ ಬೆಂಬಲಿಗರಿಂದಲೂ ಇದೆ. ಕಳೆದ ಬಾರಿ ಚಾಮುಂಡೇಶ್ವರಿಯಲ್ಲಿ ಸೋತರೂ ಕೈಹಿಡಿದ ದೂರದ ಬಾದಾಮಿ ಕ್ಷೇತ್ರವನ್ನು ಬಿಟ್ಟು ಈ ಬಾರಿ ರಾಜಧಾನಿಗೆ ಸನಿಹದ ಕೋಲಾರದತ್ತ ನಡೆದಿದ್ದಾರೆ. ಕಡೇ

ಕ್ಷಣ ಮೈಸೂರಿನತ್ತ ವಾಲಿದರೂ ಆಶ್ಚರ್ಯವಿಲ್ಲ ಎಂದೂ ಹೇಳಲಾಗುತ್ತಿದೆ. ಅತ್ತ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಹಣಿಯಲು ಕೆಲವು ಹಿರಿಯ ಕಾಂಗ್ರೆಸಿಗರೇ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಯಾರು ಮೇಲುಗೈ ಸಾಧಿಸುತ್ತಾರೆ ಎಂಬುದು ಸದ್ಯಕ್ಕೆ ಕಾಡುತ್ತಿರುವ ಪ್ರಶ್ನೆ.

-ಎ.ವಿ.ಬಾಲಕೃಷ್ಣ ಹೊಳ್ಳ

ಟಾಪ್ ನ್ಯೂಸ್

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.