ಸೋನಿಯಾ ಗಾಂಧಿ ನಾಯಕತ್ವಕ್ಕೆ ಜೈ ಎಂದ ಸಿದ್ದರಾಮಯ್ಯ
ಕಾಂಗ್ರೆಸ್ ಪ್ರಬಲ ರಾಜಕೀಯ ಶಕ್ತಿಯಾಗಿ ಎದ್ದು ಬರಲಿದೆ
Team Udayavani, Mar 17, 2022, 1:50 PM IST
ಬೆಂಗಳೂರು : ಕಾಂಗ್ರೆಸ್ ಪಕ್ಷ, ಇತ್ತೀಚಿನ ಕೆಲವು ಚುನಾವಣಾ ಸೋಲುಗಳ ತಾತ್ಕಲಿಕವಾದ ಹಿನ್ನಡೆಯನ್ನು ಎದುರಿಸಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ದೇಶವನ್ನು ಮತ್ತೆ ಮುನ್ನಡೆಸುವ ಪ್ರಬಲ ರಾಜಕೀಯ ಶಕ್ತಿಯಾಗಿ ಎದ್ದು ಬರಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಪಕ್ಷದ ನಾಯಕರಿಂದ ಹಿಡಿದು ಕಾರ್ಯಕರ್ತರ ವರೆಗೆ ಪ್ರತಿಯೊಬ್ಬರೂ ಶ್ರೀಮತಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ನಾಯಕತ್ವವನ್ನು ಬೆಂಬಲಿಸುತ್ತಿದ್ದಾರೆ. ಇದೇ ನಂಬಿಕೆ ಮತ್ತು ಆತ್ಮ ವಿಶ್ವಾಸದಿಂದ ರಾಜ್ಯದಲ್ಲಿ ಮುಂದಿನ ಚುನಾವಣೆಯನ್ನು ಎದುರಿಸಿ ಪಕ್ಷಕ್ಕೆ ಗೆಲುವಿನ ಉಡುಗೊರೆ ನೀಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹೊರಗಿನ ವಿರೋಧ ಪಕ್ಷಗಳ ಅಪಪ್ರಚಾರ ಮತ್ತು ಕೆಲವು ಒಳಗಿನ ಹಿತಶತ್ರುಗಳ ಕುಟಿಲ ಕಾರಸ್ತಾನಗಳಿಂದ ವಿಚಲಿತರಾಗದೆ ಶ್ರೀಮತಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಭರವಸೆ ಇಟ್ಟು ಪಕ್ಷಕ್ಕೆ ಶಕ್ತಿತುಂಬಲು ಪ್ರತಿಯೊಬ್ಬ ಕಾಂಗ್ರೆಸಿಗನು ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.
ಈಗ ಶ್ರೀಮತಿ ಸೋನಿಯಾ ಗಾಂಧಿಯವರ ನಾಯಕತ್ವವನ್ನು ಪ್ರಶ್ನಿಸುತ್ತಿರುವವರು, ಅವರದ್ದೇ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಸತತ ಎರಡು ಬಾರಿ ಲೋಕಸಭಾ ಚುನಾವಣೆಗಳನ್ನು ಗೆದ್ದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವುದನ್ನು ಮರೆತಿರುವುದು ಆತ್ಮದ್ರೋಹವಲ್ಲದೆ ಮತ್ತೇನು? ಎಂದು ಪ್ರಶ್ನಿಸಿದರು.
ಸೋನಿಯಾ ಗಾಂಧಿಯವರ ನಾಯಕತ್ವದಲ್ಲಿಯೇ ಕೇಂದ್ರದಲ್ಲಿ ಮಾತ್ರವಲ್ಲ, ಹದಿನೈದಕ್ಕೂ ಹೆಚ್ಚು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿತ್ತು ಎನ್ನುವುದನ್ನು ಇಂದು ಅವರ ನಾಯಕತ್ವವನ್ನು ಪ್ರಶ್ನಿಸುವವರು ನೆನಪು ಮಾಡಿಕೊಳ್ಳಬೇಕಾಗಿದೆ.
ದೇಶಕ್ಕೆ ಬಲಿದಾನಗೈದ ಪತಿಯ ಅಗಲಿಕೆಯ ಶೋಕ ಮತ್ತು ಎರಡು ಎಳೆಯ ಮಕ್ಕಳ ಭವಿಷ್ಯದ ಕಾಳಜಿಯಿಂದ ರಾಜಕೀಯದಿಂದ ದೂರ ಇದ್ದ ಸೋನಿಯಾ ಗಾಂಧಿಯವರನ್ನು ಕಾಂಗ್ರೆಸ್ ಪಕ್ಷವನ್ನು ಉಳಿಸಲಿಕ್ಕಾಗಿ ಒತ್ತಾಯದಿಂದ ಸಕ್ರಿಯ ರಾಜಕೀಯಕ್ಕೆ ಎಳೆದು ತಂದಿದ್ದ ಕೆಲವು ನಾಯಕರೇ ಈಗ ಸೋನಿಯಾ ಸೈದ್ಧಾಂತಿಕ ನಾಯಕತ್ವವನ್ನು ಪ್ರಶ್ನಿಸುತ್ತಿರುವುದು ವಿಷಾದನೀಯ ಎಂದರು.
2004ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದ ಶ್ರೀಮತಿ ಸೋನಿಯಾ ಗಾಂಧಿಯವರು ಹಕ್ಕಿನಿಂದ ಪಡೆಯಬಹುದಾದ ಪ್ರಧಾನಿ ಪಟ್ಟವನ್ನು ತ್ಯಾಗ ಮಾಡಿ ವಿಶ್ವಕ್ಕೆ ಮಾದರಿಯಾಗಿದ್ದನ್ನು ಇಡೀ ವಿಶ್ವ ಕಂಡಿದೆ. ಇಂದಿನ ಟೀಕಾಕಾರರು ಈ ತ್ಯಾಗವನ್ನು ಕಂಡಿಲ್ಲವೇ? ಕೆಲವು ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಸೋತಿರಬಹುದು. ಆದರೆ ಆಹಾರ, ಶಿಕ್ಷಣ, ಉದ್ಯೋಗ ಮತ್ತು ಮಾಹಿತಿಯ ಶಾಸನಾತ್ಮಕ ಹಕ್ಕನ್ನು ನೀಡಿದ್ದ ಕಾರ್ಯಕ್ರಮಗಳ ರೂವಾರಿಯಾದ ಶ್ರಿಮತಿ ಸೋನಿಯಾ ಗಾಂಧಿಯವರು ದೇಶದ ಜನತೆಯ ಮನೆ-ಮನಗಳಲ್ಲಿ ಶಾಶ್ವತವಾಗಿ ನೆಲೆ ನಿಂತಿದ್ದಾರೆ. ಆ ಚಿತ್ರವನ್ನು ಅಳಿಸಲಾಗದು ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿಯವರು ಒಂಟಿಯಲ್ಲ, ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರು ಮಾತ್ರವಲ್ಲ ದೇಶದ ಕೋಟ್ಯಂತರ ಜನ ಅವರ ಬೆನ್ನ ಹಿಂದಿದ್ದಾರೆ. ಇಂದಿನ ಸಂಕಷ್ಟ ಸ್ಥಿತಿಯಿಂದ ದೇಶವನ್ನು ಕಾಂಗ್ರೆಸ್ ಪಕ್ಷ ಮಾತ್ರ ಪಾರುಮಾಡಲು ಸಾಧ್ಯ ಎನ್ನುವುದು ಪ್ರತಿಯೊಬ್ಬರೂ ಅರಿತಿದ್ದಾರೆ.
ಕೋಮುವಾದಿ ರಾಜಕಾರಣ, ಮಾಧ್ಯಮಗಳ ಮೂಲಕ ನಡೆಸಲಾಗುತ್ತಿರುವ ಸುಳ್ಳುಗಳ ಅಪಪ್ರಚಾರ, ದುಡ್ಡಿನ ಬಲದ ಚುನಾವಣಾ ತಂತ್ರ-ಕುತಂತ್ರಗಳ ಎದುರು ಸೈದ್ಧಾಂತಿಕ ರಾಜಕಾರಣಕ್ಕೆ ಬದ್ಧವಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿರಬಹುದು. ಇದು ತಾತ್ಕಾಲಿಕ ಹಿನ್ನಡೆ, ಸತ್ಯವೇ ಗೆಲ್ಲುವುದು. “ಸತ್ಯಮೇವ ಜಯತೆ” ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.