ಶಿಕ್ಷಣ ಇಲಾಖೆ: ಮಧ್ಯಂತರ ವರ್ಗಾವಣೆ ಪ್ರಕ್ರಿಯೆಗೆ ಸಿದ್ದರಾಮಯ್ಯ ಆಕ್ಷೇಪ
Team Udayavani, Dec 18, 2022, 6:35 AM IST
ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಕಾಲೇಜು ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿನ ಸಹಾಯಕ ಪ್ರಾಧ್ಯಾಪಕರುಗಳ ವರ್ಗಾವಣೆಯನ್ನು ಮಧ್ಯಂತರ ಅವಧಿಯ ಡಿಸೆಂಬರ್ ಮಾಹೆಯಲ್ಲಿ ನಡೆಸಲು ಆದೇಶ ಹೊರಡಿಸಿರುವ ಬಗ್ಗೆ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸರ್ಕಾರವು ವರ್ಗಾವಣೆಗಳಿಗೆ ತೋರಿಸುತ್ತಿರುವ ಆಸಕ್ತಿ, ಅಭಿವೃದ್ಧಿ ವಿಷಯಗಳಿಗೆ ಹಾಗೂ ನೇಮಕಾತಿಗಳಿಗೆ ತೋರಿಸುತ್ತಿಲ್ಲ.ಕಾಲೇಜು ಶಿಕ್ಷಣ ಇಲಾಖೆಯ ಸಹಾಯಕ ಪ್ರಾಧ್ಯಾಪಕರ ವರ್ಗಾವಣೆ ಆಗಿ 6 ತಿಂಗಳು ಮಾತ್ರ ಆಗಿದೆ. ಮತ್ತೆ ಈಗ ಎರಡನೆ ಬಾರಿ ವರ್ಗಾವಣೆ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ವರ್ಗಾವಣೆ ಎನ್ನುವುದು ಆಡಳಿತಾತ್ಮಕ ಮತ್ತು ಸಾರ್ವಜನಿಕ ಅನುಕೂಲಕ್ಕೆ ಮಾಡಬೇಕಾದ ಚಟುವಟಿಕೆಯೆ ಹೊರತು, ಇಲಾಖೆಗಳ ಸಚಿವರಿಗೆ, ಸರ್ಕಾರಕ್ಕೆ ಅದೊಂದು ಚಟವಾಗಬಾರದು ಎಂದು ಟೀಕಿಸಿದ್ದಾರೆ.
ಹಿಂದಿನ ವರ್ಗಾವಣೆಯಲ್ಲಿ ಬೆಂಗಳೂರು, ಮೈಸೂರು, ಮಂಗಳೂರು ಮುಂತಾದ ನಗರ ಪ್ರದೇಶಗಳಲ್ಲಿ ನಿರಂತರವಾಗಿ 20 ವರ್ಷ ಸೇವೆ ಸಲ್ಲಿಸಿದವರು ಮತ್ತೆ ಅದೇ ನಗರದ ಬೇರೆ ಕಾಲೇಜಿಗೆ ವರ್ಗಾವಣೆಗೊಂಡಿರುವುದು ವಿಪರ್ಯಾಸ ಎಂದು ಹೇಳಿದ್ದಾರೆ.
ವರ್ಗಾವಣೆ ಮಾಡಲು ನೀಡಿರುವ ಪ್ರಕಟಣೆ ಕೂಡಲೇ ಹಿಂಪಡೆದು, ಶೈಕ್ಷಣಿಕ ಚಟುವಟಿಕೆಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಬೆಳಗಾವಿಯಲ್ಲಿಂದು ಕಾಂಗ್ರೆಸ್ ಚುನಾವಣೆ ಸಮಿತಿ ಸಭೆ
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಚಿಸಲಾಗಿರುವ ರಾಜ್ಯ ಕಾಂಗ್ರೆಸ್ ಚುನಾವಣೆ ಸಮಿತಿ ಸಭೆ ಭಾನುವಾರ ಬೆಳಗಾವಿಯಲ್ಲಿ ನಡೆಯಲಿದೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸಮ್ಮುಖದಲ್ಲಿ ಸಂಜೆ ಸಭೆ ನಿಗದಿ ಮಾಡಲಾಗಿದೆ. ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಹಿರಿಯ ನಾಯಕರಾದ ಕೆ.ಎಚ್.ಮುನಿಯಪ್ಪ, ರೆಹಮಾನ್ ಖಾನ್, ವೀರಪ್ಪ ಮೊಯ್ಲಿ ಸೇರಿ 36 ಸದಸ್ಯರ ಚುನಾವಣಾ ಸಮಿತಿಯ ಮೊದಲ ಸಭೆ ಇದಾಗಿದೆ.
ಮುಂದಿನ ವಿಧಾನಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳು, ಟಿಕೆಟ್‌ಹಂಚಿಕೆ ಮತ್ತಿತರ ವಿಚಾರಗಳು ಸಭೆಯಲ್ಲಿ ಚರ್ಚೆಯಾಗಲಿವೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
MUST WATCH
ಹೊಸ ಸೇರ್ಪಡೆ
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.