ದುಪ್ಪಟ್ಟ ಧರಿಸಲು ಅವಕಾಶ ನೀಡುವಂತೆ ಸರಕಾರಕ್ಕೆ ಸಿದ್ದರಾಮಯ್ಯ ಮನವಿ
ನಾನು ಹಿಜಾಬ್ ಬಗ್ಗೆ ಪ್ರಸ್ತಾಪಿಸುವುದಕ್ಕೆ ಹೋಗುವುದಿಲ್ಲ..
Team Udayavani, Mar 24, 2022, 5:34 PM IST
ವಿಧಾನಸಭೆ : ಮುಸ್ಲಿಂ ವಿದ್ಯಾರ್ಥಿನಿಯರಿಗೆ ತರಗತಿಯಲ್ಲಿ ದುಪ್ಪಟ್ಟ ಧರಿಸುವುದಕ್ಕೆ ಅವಕಾಶ ನೀಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.
ನಾನು ಹಿಜಾಬ್ ಬಗ್ಗೆ ಪ್ರಸ್ತಾಪಿಸುವುದಕ್ಕೆ ಹೋಗುವುದಿಲ್ಲ. ಏಕೆಂದರೆ ಅದೀಗ ಸುಪ್ರೀಂಕೋರ್ಟ್ ನಲ್ಲಿ ವಿಚಾರಣಾ ಹಂತದಲ್ಲಿದೆ . ಆದರೆ ನಿನ್ನೆ ಕೆಲ ಮುಸ್ಲಿಂ ಧರ್ಮ ಗುರುಗಳು ನಮ್ಮನ್ನು ಭೇಟಿ ಮಾಡಿ ಈ ಮನವಿ ಸಲ್ಲಿಸಿದ್ದಾರೆ ಎಂದರು.
ಅವರು ಶಾಲೆ- ಕಾಲೇಜಿನಲ್ಲಿ ಸಮವಸ್ತ್ರವನ್ನೇ ಧರಿಸುತ್ತಾರೆ. ಆದರೆ ಅದೇ ಬಣ್ಣದ ದುಪ್ಪಟವನ್ನು ಬಳಸುವುದಕ್ಕೆ ಅವಕಾಶ ಕೋರಿದ್ದಾರೆ. ಅದು ಬುರ್ಖಾ ಅಥವಾ ಹಿಜಾಬ್ ಅಲ್ಲ. ಸರಕಾರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು. ಇದು ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕಿನ ಪ್ರಶ್ನೆ ಎಂದು ಅಭಿಪ್ರಾಯಪಟ್ಟರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಶಿಕ್ಷಣದಿಂದ ವಂಚಿತರಾಗದಂತೆ ನಾವು ಸಾಕಷ್ಟು ಸಲಹೆ ನೀಡಿದರೂ ಆ ಆರು ಮಂದಿ ವಿದ್ಯಾರ್ಥಿನಿಯರು ನಮ್ಮಮಾತು ಕೇಳಿಲ್ಲ. ನೀವೇ ಸ್ವಲ್ಪ ಅವರ ಮನವೊಲಿಸಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.