56 ಎದೆಯಳತೆಯ ಪ್ರಧಾನಿ ಬಡವರ ಹೊಟ್ಟೆ ಬಗೆಯುತ್ತಿದ್ದಾರೆ: ಸಿದ್ದರಾಮಯ್ಯ
ಓಡಿ ಹೋಗಿರುವ ಮೋದಿ, ಮಲ್ಯಗಳು ವಿದೇಶದಲ್ಲಿ ಮಜಾ ಮಾಡುತ್ತಿದ್ದಾರೆ...
Team Udayavani, Jul 18, 2022, 1:39 PM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಾವು-ಬದುಕಿನ ಪ್ರಶ್ನೆಯನ್ನು ದೇಶದ ಜನರ ಮುಂದಿಟ್ಟಿದೆ, ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರ, ಅನಾಚಾರಗಳನ್ನೆಲ್ಲ ಸಹಿಸಿಕೊಂಡು ಇನ್ನೂ ಅಚ್ಚೇ ದಿನಗಳ ಕನಸು ಕಂಡರೆ ಬದುಕಿನ ನಾಶ ಖಂಡಿತ.ಕಾಲ ಮಿರಿಹೋಗುತ್ತಿದೆ, ಎಚ್ಚೆತ್ತುಕೊಳ್ಳಲು ಇದು ಸಕಾಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೇಂದ್ರ ಸರಕಾರದ ವಿರುದ್ಧ ಸರಣಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.
ಬ್ರ್ಯಾಂಡ್ ಗಳ ಬೆನ್ನತ್ತಿ ಹೋಗುತ್ತಿರುವ ಉಳ್ಳವರು, ಶ್ರೀಮಂತರು ಖರೀದಿಸುವ ವಸ್ತುಗಳ ಮೇಲೆ ತೆರಿಗೆ ಹೇರಿಕೆಗೆ ಕನಿಷ್ಠ ಸಮರ್ಥನೆ ಇದೆ. ಆದರೆ ಗುಡಿಕೈಗಾರಿಕೆಗಳ ರೂಪದಲ್ಲಿ ಅಕ್ಕಿ, ಗೋಧಿ, ಹಾಲು, ಮೊಸರು ಮತ್ತಿತರ ಅಗತ್ಯವಸ್ತುಗಳನ್ನು ಪ್ಯಾಕ್ ಮಾಡಿ ಮಾರಾಟ ಮಾಡುತ್ತಿರುವ ಲಕ್ಷಾಂತರ ಕಿರುಉದ್ಯಮಿಗಳಿಗೂ ಕೂಡಾ ಇದೊಂದು ದೊಡ್ಡ ಹೊಡೆತ ಎಂದು ಟ್ವೀಟ್ ಮಾಡಿದ್ದಾರೆ.
ಕೇಂದ್ರ ಬಿಜೆಪಿ ಸರ್ಕಾರದ ಈ ‘ತೆರಿಗೆ ಭಯೋತ್ಪಾದನೆಗೆ ಬಲಿಯಾಗಿರುವುದು ವಿರೋಧಪಕ್ಷಗಳ ಮತದಾರರು ಮಾತ್ರವಲ್ಲ, ಅಚ್ಚೇ ದಿನಗಳ ನಿರೀಕ್ಷೆಯಿಟ್ಟುಕೊಂಡು ಬಿಜೆಪಿಯನ್ನು ಗೆಲ್ಲಿಸಿದ್ದ ಬಿಜೆಪಿಯ ಮತದಾರರಿಗೂ ಇದರಲ್ಲಿ ರಿಯಾಯಿತಿ-ವಿನಾಯಿತಿ ಏನಿಲ್ಲ. ಅವರು ಕೂಡಾ ಇದಕ್ಕೆ ಬಲಿಯಾಗಿದ್ದಾರೆ.ಬಡತನ ಜಾತಿ, ಧರ್ಮ, ಪಕ್ಷಗಳೆಲ್ಲವನ್ನೂ ಮೀರಿದ್ದು ಎಂದು ಟ್ವೀಟ್ ನಲ್ಲಿ ಕುಟುಕಿದ್ದಾರೆ.
ತೆರಿಗೆ ವಂಚನೆ ಮಾಡಿ, ಬ್ಯಾಂಕ್ ಮುಳುಗಿಸಿ ಓಡಿಹೋಗಿರುವ ಮೋದಿ, ಮಲ್ಯಗಳು ವಿದೇಶದಲ್ಲಿ ಮಜಾ ಮಾಡುತ್ತಿದ್ದಾರೆ. ಅವರನ್ನು ಎಳೆದುಕೊಂಡು ಬಂದು, ವಂಚಿಸಿದ್ದ ತೆರಿಗೆ ಹಣವನ್ನು ಕಕ್ಕಿಸಲು ಆಗದ 56 ಎದೆಯಳತೆಯ ಪ್ರಧಾನಮಂತ್ರಿ ಬಡವರ ಹೊಟ್ಟೆ ಬಗೆಯಲು ಹೊರಟಿರುವುದು ದುರಂತ ಎಂದು ಬರೆದಿದ್ದಾರೆ.
ಬ್ರ್ಯಾಂಡೆಡ್ ಅಲ್ಲದ ಪ್ಯಾಕ್ ಮಾಡಲಾಗಿರುವ ಅಕ್ಕಿ, ಗೋಧಿ, ಹಾಲು, ಮೊಸರು, ಮಜ್ಜಿಗೆಯಂತಹ ದಿನಬಳಕೆಯ ವಸ್ತುಗಳ ಮೇಲೆ ನರೇಂದ್ರ ಮೋದಿ ಸರ್ಕಾರ ಜಿಎಸ್ ಟಿ ಹೇರಿರುವುದು ಬ್ರ್ಯಾಂಡೆಡ್ ವಸ್ತುಗಳ ಕಂಪೆನಿಗಳ ಒತ್ತಡಕ್ಕೆ ಮಣಿದು ಎನ್ನುವುದು ಸ್ಪಷ್ಟ. ತಮ್ಮದು ಸೂಟ್ ಬೂಟ್ ಸರ್ಕಾರ ಎನ್ನುವುದನ್ನು ಮತ್ತೆ ಮತ್ತೆ ಅವರು ಸಾಬೀತುಪಡಿಸುತ್ತಿದ್ದಾರೆ ಎಂದು ಅಭಿಪ್ರಾಯ ಹೊರ ಹಾಕಿದ್ದಾರೆ.
ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳದಿಂದ ತರಕಾರಿ ಮತ್ತಿತರ ದಿನಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದೆ, ನಿರುದ್ಯೋಗದಿಂದಾಗಿ ಕುಟುಂಬದ ಆದಾಯ ಕುಸಿದಿದೆ. ಈ ಹೊತ್ತಿನಲ್ಲಿ ಬಡವರ ನೆರವಿಗೆ ಬರಬೇಕಾಗಿರುವ ಸರ್ಕಾರ ಅವರನ್ನು ಉಪವಾಸ ಬೀಳಿಸಿ ಸಾಯಿಸಲು ಹೊರಟಿದೆ. ಇಂತಹ ಕ್ರೌರ್ಯ ಫ್ಯಾಸಿಸ್ಟ್ ಮನಸ್ಸುಗಳಿಂದ ಮಾತ್ರ ಸಾಧ್ಯ ಎಂದು ಬರೆದಿದ್ದಾರೆ.
ಬಡವರ ಹೊಟ್ಟೆಗೆ ಒದೆಯುವುದೇ ಅಚ್ಚೇ ದಿನ್ ಎಂದು ತಿಳಿದುಕೊಂಡಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಊಟದ ತಟ್ಟೆಯಲ್ಲಿನ ಅಕ್ಕಿ, ಗೋಧಿ, ಹಾಲು, ಮೊಸರು, ಮಜ್ಜಿಗೆ, ಮೀನು, ಮಾಂಸ, ಮಂಡಕ್ಕಿ ಎಲ್ಲವನ್ನೂ ಕಿತ್ತುಕೊಳ್ಳಲು ಹೊರಟಿರುವುದು ಬಡವರ ಹತ್ಯೆಗೆ ಸಮನಾದ ಪಾಪ ಕರ್ಮ. ಗಬ್ಬರ್ ಸಿಂಗ್ ಟ್ಯಾಕ್ಸ್ ಎಂದು ಸರಣಿ ಟ್ವೀಟ್ ಗಳಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ಓದಿ : ಬಿಎಸ್ ವೈ ಜೊತೆ ಜಿಲ್ಲಾ ಪ್ರವಾಸಕ್ಕೆ ಮುಂದಾದ ಸಿಎಂ ಬೊಮ್ಮಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.