ಡಿ.ಜೆ ಹಳ್ಳಿ ಗಲಭೆ ಅದಕ್ಕೆ ಪ್ರಚೋದನೆ ನೀಡಿದ ಘಟನೆಗಳು ಎರಡೂ ಖಂಡನೀಯ: ಸಿದ್ದರಾಮಯ್ಯ
Team Udayavani, Aug 12, 2020, 11:31 AM IST
ಬೆಂಗಳೂರು : ಕಳೆದ ರಾತ್ರಿ ಕಾವಲಭೈರಸಂದ್ರದಲ್ಲಿ ನಡೆದ ಗಲಭೆ ಮತ್ತು ಅದಕ್ಕೆ ಪ್ರಚೋದನೆ ನೀಡಿದ ಘಟನೆಗಳೆರಡೂ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ತಮ್ಮ ಟ್ವಿಟ್ಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಅವರು ಹಿಂದೂ-ಮುಸ್ಲಿಮ್ ಎರಡು ಸಮುದಾಯದವರು ಸಂಯಮದಿಂದ ವರ್ತಿಸಿ ಶಾಂತಿ ಕಾಪಾಡಬೇಕೆಂದು ಕೈಮುಗಿದು ಮನವಿ ಮಾಡುತ್ತಿದ್ದೇನೆ. ಗಲಭೆಗೆ ಪ್ರಚೋದಿಸಿದ್ದ ಮತ್ತು ಹಿಂಸಾಚಾರದ ಮೂಲಕ ಪ್ರತಿಕ್ರಿಯಿಸಿದ್ದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಕಮಿಷನರ್‌ಗೆ ತಿಳಿಸಿದ್ದೇನೆ ಎಂದಿದ್ದಾರೆ.
ಶಾಂತಿ ಸ್ಥಾಪನೆಯ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ನಮ್ಮ ಪಕ್ಷದ ಸಂಪೂರ್ಣ ಸಹಕಾರ ಇದೆ. ಇಂತಹ ಕೋಮು ಗಲಭೆಗಳಲ್ಲಿ ಸಾವು-ನೋವಿಗೆ ಈಡಾಗುವವರು ಅಮಾಯಕರು ಎಂಬ ಸತ್ಯವನ್ನು ಅನುಭವದ ಪಾಠ ನಮಗೆ ಹೇಳಿಕೊಟ್ಟಿದೆ. ಮೊದಲು ಎರಡೂ ಧರ್ಮಗಳ ಹಿರಿಯರು ಒಂದೆಡೆ ಕೂತು ಪರಸ್ಪರ ಮಾತುಕತೆ ಮೂಲಕ ಶಾಂತಿ ಸ್ಥಾಪನೆಗೆ ಪ್ರಯತ್ನ ನಡೆಸಬೇಕೆಂದು ಕೋರುತ್ತೇನೆ ಎಂದರು.
ಪೊಲೀಸ್ ಠಾಣೆಯ ಮೇಲೆ ನಡೆದ ದಾಳಿ ಖಂಡನೀಯ. ಇದರಿಂದ ಪೊಲೀಸರು ನೈತಿಕ ಸ್ಥೈರ್ಯ ಕಳೆದು ಕೊಳ್ಳಬಾರದು. ಇಂತಹ ಪ್ರಕರಣಗಳ ಸಂದರ್ಭಗಳಲ್ಲಿ ಪೊಲೀಸರು ತಕ್ಷಣ ವಿವೇಚನೆಯಿಂದ ನಿರ್ಧಾರ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಸಣ್ಣ ನಿರ್ಲಕ್ಷ್ಯ ಅನಾಹುತಕ್ಕೆ ದಾರಿಮಾಡಿಕೊಡುತ್ತದೆ ಎಂದು ಟ್ವಿಟ್ಟರ್ ಖಾತೆಯಲ್ಲಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.