8 ವರ್ಷದಲ್ಲಿ ಮೋದಿ ಸರ್ಕಾರ ನಿರುದ್ಯೋಗಿ ಯುವ ಜನರಿಗೆ ನರಕ ತೋರಿಸಿದೆ : ಸಿದ್ದು ವಾಗ್ದಾಳಿ
Team Udayavani, Jun 7, 2022, 5:08 PM IST
ಬೆಂಗಳೂರು : ಯಾವುದೇ ದೇಶದ ಆರ್ಥಿಕತೆಗೆ ವೇಗ ಬರುವುದು ಅಲ್ಲಿನ ಯುವ ಜನರು ದುಡಿಮೆಯಲ್ಲಿ ತೊಡಗಿಕೊಂಡಾಗ ಮಾತ್ರ. ಜನರು ಖರ್ಚು ಮಾಡುತ್ತಿದ್ದರೆ ದೇಶದ ಆರ್ಥಿಕತೆಯ ಬೆಳವಣಿಗೆ ಸಮರ್ಪಕವಾಗಿರುತ್ತದೆ. ದೇಶವನ್ನು ಮುನ್ನಡೆಸುವ ಜವಾಬ್ಧಾರಿ ಹೊತ್ತವರಿಗೆ ಇಷ್ಟು ಜ್ಞಾನವಿಲ್ಲದೆ ಹೋದರೆ ಅಂಥ ದೇಶ ಅರಾಜಕತೆಯತ್ತ ಸಾಗಿ ಅಧೋಗತಿಗೆ ಇಳಿಯುತ್ತದೆ. ಇದಕ್ಕೆ ಸದ್ಯ ಭಾರತವೇ ಉದಾಹರಣೆ ಎಂದು ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಎಂಜಿನಿಯರಿಂಗ್ ಮುಂತಾದ ಪದವಿ, ಸ್ನಾತಕೋತ್ತರ ಪದವಿ ಮುಗಿಸಿರುವ ದೇಶದ ಯುವ ಜನತೆ ಕೆಲಸ ಕೇಳಿದರೆ ಮೋದಿಯವರು ಪಕೋಡ ಮಾರಿ ಎನ್ನುತ್ತಾರೆ. ಒಬ್ಬ ಇಂಜಿನಿಯರ್ ಅನ್ನು ಸಿದ್ಧಪಡಿಸಲು ದೊಡ್ಡ ಮೊತ್ತದ ತೆರಿಗೆ ಹಣವನ್ನು ಆತನ ಮೇಲೆ ವಿನಿಯೋಗಿಸಲಾಗಿರುತ್ತದೆ. ಇಂದು ದೇಶದ ಕೋಟ್ಯಾನುಕೋಟಿ ಪದವೀಧರರು ಹಳ್ಳಿಗಳಲ್ಲಿ ಅವಮಾನ ಅನುಭವಿಸುತ್ತಿದ್ದಾರೆ. ನಗರಗಳಲ್ಲಿ ಸೆಕ್ಯುರಿಟಿ ಗಾರ್ಡುಗಳಾಗಿ, ಟ್ಯಾಕ್ಸಿ ಚಾಲಕರಾಗಿ, ಸ್ವಿಗ್ಗಿ, ಝೊಮ್ಯಾಟೊ ಮುಂತಾದ ಕಡೆ ಸೇಲ್ ಮಾಡುವವರಾಗಿ, ಗಾರ್ಮೆಂಟುಗಳಲ್ಲಿ 8-10 ಸಾವಿರಕ್ಕೆ ದುಡಿಯುತ್ತಿದ್ದಾರೆ.
ಬಿಜೆಪಿಯು ಒಂದು ಕಾಲದಲ್ಲಿ ಪದೆ ಪದೆ ಪ್ರತಿಭಾ ಪಲಾಯನದ ಬಗ್ಗೆ ಮಾತನಾಡುತ್ತಿತ್ತು. ಆದರೆ 2014 ರಿಂದ 2021 ರ ವೇಳೆಗೆ 7 ವರ್ಷಗಳಲ್ಲಿ 8 ಲಕ್ಷ ಜನ ಭಾರತದ ನಾಗರಿಕತ್ವವನ್ನೆ ತೊರೆದು ಬೇರೆ ದೇಶಗಳಿಗೆ ಹೋಗಿ ನೆಲೆಸಿದ್ದಾರೆ. ವಿಜ್ಞಾನ, ಅರ್ಥಶಾಸ್ತ್ರ, ಇಂಜಿನಿಯರಿಂಗ್, ಬಾಹ್ಯಾಕಾಶ ಮುಂತಾದ ಕ್ಷೇತ್ರಗಳಲ್ಲಿನ ಬುದ್ಧಿವಂತ ಯುವಕರು ದೇಶದಲ್ಲಿ ಭವಿಷ್ಯ ರೂಪಿಸಿಕೊಳ್ಳುವ ಅವಕಾಶ ಮತ್ತು ಭರವಸೆಗಳನ್ನು ಕಾಣದೆ ದೇಶ ತೊರೆಯುತ್ತಿದ್ದಾರೆ ಎಂದರು.
ಇದನ್ನೂ ಓದಿ : ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 593 ಅಂಕ ಇಳಿಕೆ; ಜೂ.7ರಂದು ಲಾಭ, ನಷ್ಟ ಕಂಡ ಷೇರು ಯಾವುದು?
ಯುವ ಭಾರತದ ಇಂದಿನ ಸರಾಸರಿ ವಯಸ್ಸು 28.3 ವರ್ಷ. ಇಲ್ಲಿ 35 ವರ್ಷದ ಒಳಗಿನ ಯುವ ಸಮೂಹ ಶೇ.65 ರಷ್ಟಿದೆ. ರಾಷ್ಟ್ರವೊಂದರ ಇತಿಹಾಸದಲ್ಲಿ ಬಹಳ ಅಪರೂಪಕ್ಕೆ ಈ ರೀತಿಯ ಅವಕಾಶಗಳು ದೊರೆಯುತ್ತವೆ. 25 ವರ್ಷದೊಳಗಿನವರ ಸಂಖ್ಯೆ ಶೇ.50 ರಷ್ಟಿದೆ. 2014 ರಲ್ಲಿ 25 ವರ್ಷದವರಿದ್ದ ಯುವಕರು 2024 ಕ್ಕೆ 35 ವರ್ಷದವರಾಗುತ್ತಾರೆ. 20 ವರ್ಷದವರು 30 ವರ್ಷದವರಾಗುತ್ತಾರೆ. ಆದರೆ ಏರುತ್ತಿರುವ ನಿರುದ್ಯೋಗದಿಂದಾಗಿ 35 ವರ್ಷದ ಯುವಕರು ಬದುಕು ಕಟ್ಟಿಕೊಳ್ಳುವ ಅವಕಾಶ ಶೇ.75 ರಷ್ಟು ಕುಸಿದು ಹೋಗುತ್ತಿದೆ ಎಂದರು.
ಇತ್ತ ಸರ್ಕಾರಿ ಉದ್ಯೋಗಗಳನ್ನೂ ತುಂಬುತ್ತಿಲ್ಲ. 8.72 ಲಕ್ಷ ಉದ್ಯೋಗಗಳು ಕೇಂದ್ರ ಸರ್ಕಾರದಲ್ಲಿ ಖಾಲಿ ಇವೆ. ರಾಜ್ಯಗಳು ಸುಮಾರು 45 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಿಲ್ಲ. ಕೇಂದ್ರ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ಕೂಲಿ ರೂ.590. ನರೇಗಾ ಕಾರ್ಮಿಕರಿಗೂ ಇಷ್ಟೆ ಕೂಲಿಯನ್ನು ಕೊಡಬೇಕು. ಆದರೆ ಕಳೆದ ವರ್ಷ ಕರ್ನಾಟಕದ ನರೇಗಾ ಕೂಲಿ ಕಾರ್ಮಿಕರಿಗೆ 289 ರೂಪಾಯಿಗಳನ್ನು ನಿಗಧಿಪಡಿಸಿದ್ದರು. ಈ ವರ್ಷ ಇನ್ನೂ ರಿವೈಸ್ ಮಾಡಿಲ್ಲ. 2022-23 ರ ಆರ್ಥಿಕ ವರ್ಷದಲ್ಲಿ 11 ಕೋಟಿ ಜನ ಕೆಲಸ ಬೇಕೆಂದು ಅರ್ಜಿ ಹಾಕಿದ್ದಾರೆಂದು ನರೇಗಾ ಸಂಘರ್ಷ ಸಮಿತಿಗಳು ಮತ್ತು ಪಿಎಐಜಿ ಮಾಡಿರುವ ಸಮೀಕ್ಷೆಗಳ ವರದಿಗಳು ಹೇಳುತ್ತಿವೆ. 11 ಕೋಟಿ ಜನರಿಗೆ ಕನಿಷ್ಟ 100 ದಿನ ಉದ್ಯೋಗ ನೀಡಬೇಕೆಂದರೆ ಕನಿಷ್ಟ ಅಂದರೂ ರೂ.2.65 ಲಕ್ಷ ಕೋಟಿ ಅನುದಾನವನ್ನು ನೀಡಬೇಕು. ಆದರೆ ಬಜೆಟ್ನಲ್ಲಿ ಕೇವಲ ರೂ.73,000 ಕೋಟಿ ಅನುದಾನ ಒದಗಿಸಲಾಗಿದೆ. ಇದರಲ್ಲಿ ಹಳೆಯ ಬಾಕಿ ಮೊತ್ತವಾದ 18000 ಕೋಟಿಯನ್ನು ಕಳೆದರೆ ನೈಜವಾಗಿ ನರೇಗಾಕ್ಕೆ ಸಿಗುವುದು ರೂ.55,000 ಕೋಟಿ ಮಾತ್ರ. ಇದರಲ್ಲಿ ದಿನಕ್ಕೆ ರೂ.334 ರೀತಿ ಕೂಲಿ ಕೊಟ್ಟರೆ 10 ಕೋಟಿ ಕುಟುಂಬಗಳಿಗೆ ಕೇವಲ 16 ದಿನಗಳಿಗೆ ಮಾತ್ರ ಸಾಕಾಗುತ್ತದೆ.
ಕೇಂದ್ರ ಸರ್ಕಾರ ನಿರಂತರವಾಗಿ ಸರ್ಕಾರಿ ಸಂಸ್ಥೆ, ಕಂಪನಿ, ಕಾರ್ಖಾನೆಗಳನ್ನು ಮುಚ್ಚುತ್ತಿರುವುದರಿಂದ 2018 ರ ಹೊತ್ತಿಗೆ ಕೇಂದ್ರ ಸರ್ಕಾರದ ಸಾರ್ವಜನಿಕ ಉದ್ದಿಮೆಗಳಲ್ಲಿ ಕೆಲಸ ಮಾಡುತ್ತಿದ್ದ ನೌಕರರ ಸಂಖ್ಯೆ ಸುಮಾರು 2.5 ಲಕ್ಷದಷ್ಟು ಕಡಿಮೆಯಾಗಿದೆ. 2013-14 ರಲ್ಲಿ 16.50 ಲಕ್ಷದಷ್ಟಿದ್ದ ಕೇಂದ್ರ ಸರ್ಕಾರದ ಸಾರ್ವಜನಿಕ ಉದ್ದಿಮೆಗಳ ನೌಕರರ ಸಂಖ್ಯೆ 2018 ರ ವೇಳೆಗೆ 14 ಲಕ್ಷಕ್ಕೆ ಇಳಿದಿದೆ. 2021 ರಲ್ಲಿ ಈ ಸಂಖ್ಯೆ ಇನ್ನಷ್ಟು ಕಡಿಮೆಯಾಗಿದೆ.
2021 ರ ಮಾರ್ಚ್ ನಲ್ಲಿ ಕೇಂದ್ರ ಸರ್ಕಾರದ ಪರ್ಸನಲ್ & ಲಾ ಕುರಿತಾದ ಸ್ಟ್ಯಾಂಡಿಂಗ್ ಕಮಿಟಿಯು ಪಾರ್ಲಿಮೆಂಟ್ನಲ್ಲಿ ಮಂಡಿಸಿದ ವರದಿಯಂತೆ ಭಾರತೀಯ ರೈಲ್ವೆಯಲ್ಲಿ 29541 ಹುದ್ದೆಗಳನ್ನು ಎಸ್ಸಿ/ಎಸ್ಟಿ ಮತ್ತು ಓಬಿಸಿ ಗುಂಪಿನ ಯುವಜನರಿಗಾಗಿ ಮೀಸಲಿರಿಸಲಾಗಿದೆ. ಅದರಲ್ಲಿ 17769 ಹುದ್ದೆಗಳು ಖಾಲಿ ಇವೆ. ಗೃಹ ಇಲಾಖೆಯಲ್ಲಿ 3943 ಹುದ್ದೆಗಳು ಈ ವರ್ಗದವರಿಗಾಗಿ ಮೀಸಲಿವೆ. ಆದರೆ 2021 ರ ಮಾರ್ಚ್ ವೇಳೆಗೆ 17493 ಹುದ್ದೆಗಳು ಖಾಲಿ ಇದ್ದವು. ಹಣಕಾಸು ಇಲಾಖೆಯಲ್ಲಿ ಶೇ.70 ರಷ್ಟು ಮೀಸಲಾತಿ ಹುದ್ದೆಗಳಲ್ಲಿ ಶೇ.70 ರಷ್ಟು ಹುದ್ದೆಗಳು ಖಾಲಿ ಇದ್ದವು. ಈ ಇಲಾಖೆಯಲ್ಲಿ 10921 ಹುದ್ದೆಗಳು ಮೀಸಲಾತಿ ವರ್ಗದವರಿಗೆ ಮೀಸಲಿದ್ದರೆ, 7040 ಹುದ್ದೆಗಳನ್ನು ಭರ್ತಿ ಮಾಡಿಲ್ಲ. ಸಿಎಂಐಇ [ದ ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿಯ ಪ್ರಸ್ತುತ ವರದಿಗಳ ಪ್ರಕಾರ ಈಗ ನಗರ ನಿರುದ್ಯೋಗ ಶೇ.7.9 ರಷ್ಟಿದೆ ಹಾಗೂ ಗ್ರಾಮೀಣ ನಿರುದ್ಯೋಗ ಶೇ. 7.0 ರಷ್ಟಿದೆ. ಈ ಪ್ರಮಾಣದ ನಿರುದ್ಯೋಗ 100 ವರ್ಷಗಳಲ್ಲೆ ಅಧಿಕ ಎಂದರು.
ಕರ್ನಾಟಕದ ವಿದ್ಯಾವಂತ ಯುವಜನರ ನಿರುದ್ಯೋಗದ ಪ್ರಮಾಣ ತನ್ನೆಲ್ಲ ಮಿತಿಗಳನ್ನು ಮೀರಿದೆ. ಬಿಜೆಪಿ ಮತ್ತು ಮೋದಿಯವರ ದುರಾಡಳಿತದಿಂದಾಗಿಯೇ ಈ ದುಸ್ಥಿತಿ ಬಂದೊದಗಿದೆ. ರೊಚ್ಚಿಗೆದ್ದ ನಿರುದ್ಯೋಗಿ ಪದವೀಧರರ ರಟ್ಟೆಯ ಸಿಟ್ಟು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತಿರುಗದಂತೆ ತಡೆಯುವ ಸಲುವಾಗಿಯೇ ನಿರುದ್ಯೋಗಿ ಯುವ ಸಮೂಹದ ಕೈಗೆ ತ್ರಿಶೂಲ, ಮಾರಕಾಸ್ತ್ರಗಳನ್ನು ನೀಡಿ ಜಾತಿ-ಧರ್ಮದ ಹೆಸರಿನಲ್ಲಿ ಪರಸ್ಪರ ಕಚ್ಚಾಡಿಸುತ್ತಿದೆ ಎಂದು ಸರಕಾರದ ವಿರುದ್ಧ ಗುಡುಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.