ಕಾಂಗ್ರೆಸ್ ಸೋಲಲ್ಲ, ಬಿಜೆಪಿಗೆ ಎಚ್ಚರಿಕೆ ಗಂಟೆ : ಸಿದ್ದರಾಮಯ್ಯ ಪ್ರತಿಕ್ರಿಯೆ
Team Udayavani, Sep 6, 2021, 7:31 PM IST
ಬೆಂಗಳೂರು: ಮೂರು ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಕಾಂಗ್ರೆಸ್ ಸೋಲಲ್ಲ, ಬಿಜೆಪಿಗೆ ಎಚ್ಚರಿಕೆ ಗಂಟೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಆವರು, ಬೆಳಗಾವಿಯಲ್ಲಿ ಬಿಜೆಪಿ ಬಹುಮತ ಗಳಿಸಿದ್ದರೆ, ಕಲಬುರಗಿಯಲ್ಲಿ ನಾವು ಬಹುಮತ ಪಡೆದಿದ್ದೇವೆ. ಇನ್ನುಳಿದ ಕಡೆ ಯಾವ ಪಕ್ಷವೂ ಸ್ಪಷ್ಟ ಬಹುಕತ ಪಡೆದಿಲ್ಲ ಹೀಗಾಗಿ ಇದು ಕಾಂಗ್ರೆಸ್‌ನ ಸೋಲಲ್ಲ ಎಂಬುದು ನನ್ನ ಭಾವನೆ ಎಂದು ತಿಳಿಸಿದರು.
ಬೆಳಗಾವಿಯಲ್ಲಿ ನಿರೀಕ್ಷಿತ ಫಲಿತಾಂಶ ಬಂದಿಲ್ಲ, 58 ಸ್ಥಾನಗಳಲ್ಲಿ 10 ಸ್ಥಾನಗಳನ್ನು ಮಾತ್ರ ನಾವು ಗೆದ್ದಿದ್ದೇವೆ. ಹುಬ್ಬಳ್ಳಿಯಲ್ಲಿ ನಾವು ಬಹುಮತ ಗಳಿಸುವ ನಿರೀಕ್ಷೆಯಿತ್ತು, ಆದರೂ 33 ಸ್ಥಾನ ಗೆದ್ದಿದ್ದೇವೆ. ಅಲ್ಲಿ ಯಾವೊಂದು ಪಕ್ಷಕ್ಕೂ ಬಹುಮತ ಬಂದಿಲ್ಲ. ಕಲಬುರಗಿಯಲ್ಲಿ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ 26 ಸ್ಥಾನ ಗಳಿಸಿದ್ದು ಇಲ್ಲೂ ಸಹ ಯಾವ ಪಕ್ಷವೂ ಬಹುಮತ ಪಡೆದಿಲ್ಲ ಎಂದು ಹೇಳಿದರು.
ತರೀಕೆರೆ ಪಾಲಿಕೆ ಚುನಾವಣೆಯ 23 ಸ್ಥಾನಗಳ ಪೈಕಿ ಕಾಂಗ್ರೆಸ್ ಪಕ್ಷ 15 ಸ್ಥಾನಗಳನ್ನು ಗೆದ್ದು ಸ್ಪಷ್ಟ ಬಹುಮತ ಪಡೆದಿದೆ. ಬಿಜೆಪಿ ಏಕೈಕ ಸ್ಥಾನ ಗೆದ್ದಿದೆ. ಮೈಸೂರಿನ ಒಂದು ಪಾಲಿಕೆ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದೆ ಎಂದು ತಿಳಿಸಿದರು.
ಇದನ್ನೂ ಓದಿ :ಬಹುವಾರ್ಷಿಕ ಬೆಳೆ ನೊಂದಣಿ ಪ್ರತಿ ವರ್ಷ ಅನಗತ್ಯ: ಬಿ.ಸಿ.ಪಾಟೀಲ್
ಹುಬ್ಬಳ್ಳಿ ಧಾರವಾಡದಲ್ಲಿ ನಾವು 33 ಸ್ಥಾನಗಳನ್ನು ಗೆದ್ದಿರುವುದು ನಮಗೆ ಒಂದು ಧನಾತ್ಮಕ ಬೆಳವಣಿಗೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಿಕೊಳ್ಳಬೇಕು ಎಂದರು.
ನಾನು ಯಾವತ್ತೂ ಪಾಲಿಕೆ ಚುನಾವಣೆಯ ಪ್ರಚಾರಕ್ಕೆ ಹೋಗಿಲ್ಲ, ಹಾಗೆ ಈ ಬಾರಿಯೂ ಹೋಗಿಲ್ಲ .ಸ್ಥಳೀಯ ಸಂಸ್ಥೆಗಳ ಚುನಾವಣೆಯ ಜವಾಬ್ದಾರಿ ಸ್ಥಳೀಯ ನಾಯಕರು ಮಾಡ್ತಾರೆ ಎಂದು ಹೇಳಿದರು.
ಆಕ್ರೋಶ
ತಾಲಿಬಾನಿಗಳಿಂದ ಭಾರತದಲ್ಲಿ ಬೆಲೆಯೇರಿಕೆ ಆಗುತ್ತಿದೆ ಎಂಬ ಅರವಿಂದ ಬೆಲ್ಲದ್ ಹೇಳಿಕೆ ದಡ್ಡತನದ ಪರಮಾವಧಿ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ ಆಗಿದೆಯಾ ಎಂಬುದು ಮುಖ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
80 ರೂ. ಇದ್ದ ಅಡುಗೆ ಎಣ್ಣೆ 200 ರೂಪಾಯಿ ಆಗಿದೆ, ಇದಕ್ಕೆ ತಾಲಿಬಾನಿಗಳು ಕಾರಣವೇ, ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿ, ಪೆಟ್ರೋಲ್ ದರ ಏರಿಕೆಗೆ ತಾಲಿಬಾನಿಗಳು ಕಾರಣ ಎಂದರೆ ಹೇಗೆ ಎಂದು ಪ್ರಶ್ನಿಸಿದರು.
ತಾಲೂಕು ಹಾಗೂ ಜಿಲ್ಲಾ ಪಂಚಾಯತ ಚುನಾವಣೆಗೆ ಸಂಬಂಧಿಸಿದ ಮೀಸಲಾತಿ ಆಯೋಗ ರಚನೆಯ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಇದೆಲ್ಲ ಕಾಲಹರಣ ಮಾಡಲು ನೆಪಗಳು ಅಷ್ಟೆ. ಈಗಲೇ ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ ಧೈರ್ಯವಿಲ್ಲ. ಸೋಲಿನ ಭಯದಿಂದ ಚುನಾವಣೆ ಮುಂದೂಡಲು ಹೊರಟಿದ್ದಾರೆ.
– ಸಿದ್ದರಾಮಯ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.