ಸಿದ್ಧಗಂಗಾ ಮಠ: ಶ್ರೀ ಮನೋಜ್ ಕುಮಾರ್ ಉತ್ತರಾಧಿಕಾರಿ
Team Udayavani, Apr 20, 2023, 6:37 AM IST
ತುಮಕೂರು: ಐತಿಹಾಸಿಕ ಹಿನ್ನೆಲೆಯ ಪುರಾತನ ವೀರಶೈವ ಮಠವಾದ ಶ್ರೀ ಕ್ಷೇತ್ರ ಸಿದ್ಧಗಂಗಾ ಮಠಕ್ಕೆ ಉತ್ತರಾಧಿಕಾರಿಯಾಗಿ ಮನೋಜ್ ಕುಮಾರ್ ಅವರನ್ನು ಆಯ್ಕೆ ಮಾಡಲಾ ಗಿದೆ ಎಂದು ಸಿದ್ಧಗಂಗಾ ಮಠದ ಕಾರ್ಯದರ್ಶಿ ಟಿ.ಕೆ.ನಂಜುಂಡಪ್ಪ ಪ್ರಕಟಿಸಿದ್ದಾರೆ.
ನೂತನ ನಿರಂಜನ ಪಟ್ಟಾಧಿಕಾರ ಮತ್ತು ಉತ್ತರಾಧಿಕಾರಿ ನೇಮಕ ಕಾರ್ಯಕ್ರಮ ಇದೇ ತಿಂಗಳ 23ರ ಬಸವಜಯಂತಿ ದಿನ ನಡೆಯಲಿದೆ. ಶ್ರೀ ಸಿದ್ಧಲಿಂಗ ಸ್ವಾಮೀಜಿಗಳು ಮಠದ ತಮ್ಮ ಉತ್ತರಾಧಿಕಾರಿಯನ್ನಾಗಿ ಮನೋಜ್ ಕುಮಾರ್ ಅವರನ್ನು ಆಯ್ಕೆ ಮಾಡಿದ್ದಾರೆ.
ಮನೋಜ್ ಕುಮಾರ್‌ಅವರು 1987ರ ಜೂನ್ 2ರಂದು ಜನಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮೈಲನಹಳ್ಳಿಯ ಎಂ.ಬಿ.ಷಡಕ್ಷರಯ್ಯ ಮತ್ತು ವಿರುಪಾಕ್ಷಮ್ಮ ಅವರ ಪುತ್ರ. ಬಿ.ಎಸ್ಸಿ, ಬಿ.ಎಡ್, ಎಂಎಸ್ಸಿ, ಎಂ.ಎ. ಪದವೀಧರರು. ಪ್ರಸ್ತುತ ಶ್ರೀ ಸಿದ್ಧಗಂಗಾ ಪಾಲಿಟೆಕ್ನಿಕ್ ನಲ್ಲಿ ಉಪ ನ್ಯಾಸಕರಾಗಿದ್ದಾರೆ.
ಇವರೊಂದಿಗೆ ಶ್ರೀ ಮಠದ ವ್ಯಾಪ್ತಿಗೆ ಒಳಪಡುವ ಕಂಚುಗಲ್ ಬಂಡೇಮಠಕ್ಕೆ ಉತ್ತರಾಧಿಕಾ ರಿಯಾಗಿ ಹರ್ಷ ಕೆ.ಎಂ. ಮತ್ತು ಬಸವಕಲ್ಯಾಣ ಮಠಕ್ಕೆ ಗೌರೀಶ್ ಕುಮಾರ್ ಅವರನ್ನು ಉತ್ತರಾಧಿಕಾರಿ ಗಳನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.